ಒಡಿಶಾದಲ್ಲಿ ಬೇಗ ಪೆಟ್ರೋಲಿಯಂ ಮೀಸಲು ಯೋಜನೆ ಪೂರ್ಣಗೊಳಿಸಲು ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ
ನವದೆಹಲಿ, ಮಾರ್ಚ್ 25: ಜಾಗತಿಕ ಅಸ್ಥಿರತೆ ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ಅಗತ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan), ಒಡಿಶಾದ ಜಾಜ್‌ಪುರ ಜಿಲ್ಲೆಯ ಚಾಂಡಿಖೋಲ್‌ನಲ್ಲಿ 4 ಮಿಲಿಯನ್ ಮೆಟ್ರಿಕ್ ಟನ್ (MMT) ಕಾರ್ಯತಂತ್ರದ ಪೆಟ್ರೋಲಿಯಂ ಮೀಸಲು (SPR) ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮತ್ತು ಕಾರ್ಯಗತಗೊಳಿಸಲು ಒತ್ತಾಯಿಸಿದ್ದಾರೆ. ಒಡಿಶಾದ ಚಾಂಡಿಖೋಲ್‌ನಲ್ಲಿ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿರುವ ಪೆಟ್ರೋಲಿಯಂ ಮೀಸಲು ಪ್ರದೇಶವನ್ನು ತ್ವರಿತವಾಗಿ ಪೂರ್ಣಗೊಳಿಸಲು…