ನಾವು ತಲೆ ಬಾಗುವುದಿಲ್ಲ, ಟ್ರಂಪ್ ಶಾಂತಿ ಪ್ರಸ್ತಾಪಕ್ಕೆ ಕಠಿಣ ಷರತ್ತುಗಳ ವಿಧಿಸಿದ ಇರಾನ್
ಟೆಹ್ರಾನ್, ಮಾರ್ಚ್ 25:ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಸಂಭಾವ್ಯ ಕದನ ವಿರಾಮಕ್ಕೆ ಇರಾನ್(Iran) ಹೆಚ್ಚಿನ ಮತ್ತು ಕಠಿಣ ಷರತ್ತುಗಳನ್ನು ವಿಧಿಸಿದೆ. ಡೊನಾಲ್ಡ್ ಟ್ರಂಪ್ ಅವರ ಹೊಸ ಮಾತುಕತೆಗಳ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿ, ಗಲ್ಫ್‌ನಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳನ್ನು ಮುಚ್ಚುವುದರಿಂದ ಹಿಡಿದು ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ಪ್ರಮುಖ ಹಡಗು ಮಾರ್ಗದ ಮೇಲೆ ನಿಯಂತ್ರಣ ಸಾಧಿಸುವವರೆಗೆ ಇರಾನ್ ವ್ಯಾಪಕ ಬೇಡಿಕೆಗಳನ್ನು ಮುಂದಿಟ್ಟಿದೆ. ಅಮೆರಿಕ ಮತ್ತು ಇಸ್ರೇಲ್ ಜತೆಗಿನ ನೇರ ಮುಖಾಮುಖಿ ಸಂದರ್ಭದಲ್ಲಿ ಯಾವುದೇ ಒತ್ತಡಕ್ಕೆ ತಾನು ಮಣಿಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ….