ಪೊಲೀಸ್ ಇನ್ಸ್ಪೆಕ್ಟರ್ನಿಂದ ಲೇಡಿ ರೌಡಿಶೀಟರ್ಗೇ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!
ಬೆಂಗಳೂರು, ಮಾರ್ಚ್ 25: ಬೆಂಗಳೂರಿನ (Bangalore) ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿರುವ ಸಂತ್ರಸ್ತೆ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯು ರೌಡಿಶೀಟರ್ ಆಗಿದ್ದು, ಆಕೆಗೆ ಫೋನ್ ಕರೆ ಮಾಡಿದ್ದ ಇನ್ಸ್‌ಪೆಕ್ಟರ್ ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬಂಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ ಎಂಬ ಆರೋಪ ಮಾಡಲಾಗಿದೆ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ…