ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ಅಣ್ಣ-ತಂಗಿ ಸಾವು
ವಾರಾಣಸಿ, ಮಾರ್ಚ್ 24: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆ ಕುಸಿದು ಅಣ್ಣ-ತಂಗಿ ಸಾವನ್ನಪ್ಪಿದ್ದಾರೆ. ಇಂದು ವಾರಾಣಸಿಯ (Varanasi) ಲಹರ್ತಾರಾ ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದ ನಂತರ ಮನೆ ಕುಸಿದು 30 ವರ್ಷದ ವ್ಯಕ್ತಿ ಮತ್ತು ಅವರ ತಂಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಎಲ್ಪಿಜಿ ಸಿಲಿಂಡರ್ ಸ್ಫೋಟದಿಂದಾಗಿ ಮನೆ ಕುಸಿದು ಇಡೀ ಕುಟುಂಬದ ಸದಸ್ಯರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು. ಪೊಲೀಸರು, ಅಗ್ನಿಶಾಮಕ ಸೇವೆಗಳು ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ತಂಡಗಳು…