ಗಿಲ್ ಗಿಲಕ್ಕು… ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್..! – Kannada News | Captain Shubman Gill with an absolute stunner Catch
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಮಳೆ ಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 21.2 ಓವರ್ಗಳಲ್ಲಿ 182 ರನ್ಗಳಿಸಿ 7 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್ಗೆ ಆಗಮಿಸಿದ ಅಲ್ಲಾ ಗಝನ್ಫರ್ ಹರ್ಷ್ ದುಬೆ ಎಸೆದ ಎಸೆತವನ್ನು…