ಕೇಳೋರಿಲ್ಲ ಬೀದರ್ ರೈತರ ಗೋಳು: ಬೆಳೆ ವಿಮೆ ಹೆಸರಲ್ಲಿ ಭಾರೀ ಮೋಸ
ಬೀದರ್, ಮಾರ್ಚ್ 23: ತಮ್ಮ ಹೊಲದಲ್ಲಿ ಬಿತ್ತಿದ ಬೆಳೆ ಪ್ರಕೃತಿ ವಿಕೋಪಕ್ಕೆ ತುತ್ತಾದರೆ ಅನೂಕುಲವಾಗಲಿ ಅಂತಾ ನೂರಾರು ರೈತರು ತಮ್ಮ ಪೈರಿಗೆ ಬೆಳೆ ವಿಮೆ (crop insurance) ಮಾಡಿಸಿದರು. ಕೃಷಿ ಇಲಾಖೆ ಅಧಿಕಾರಿಗಳ ನಿರ್ದೇಶನದ ಮೇರೆಗೆ ಪ್ರತಿ ವರ್ಷ ಇಂತಿಷ್ಠು ಅಂತಾ ಹಣವನ್ನ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕಟ್ಟುತ್ತಾ ಬಂದಿದ್ದರು. ಆದರೆ ಆ ರೈತರಿಗೆ ನ್ಯಾಯಯುತವಾಗಿ ಬರಬೇಕಾಗದ ಬೆಳೆ ವಿಮೆ ಮಾತ್ರ ಬರುತ್ತಿಲ್ಲ. ಹೀಗಾಗಿ ರೈತರು ಕಂಗಾಲಾಗಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಎರಡು ಲಕ್ಷ ನಾಲ್ಕು ಸಾವಿರ…