ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್ ಎನಿಸೋ ದೃಶ್ಯ
ತೆಲಂಗಾಣ, ಮಾ.23: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಒಬ್ಬ ಬಾಲಕ ಓಡುತ್ತಾ ರಸ್ತೆ ದಾಟಲು ಯತ್ನಿಸುವಾಗ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು, ಅವನು ಸ್ಪಲ್ಪ ದೂಎಕ್ಕೆ ಹೋಗಿ ಬಿದ್ದಿರುವ ದೃಶ್ಯ ಸೆರೆಯಾಗಿದೆ. ಇನ್ನು ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ವರದಿಗಳ ಪ್ರಕಾರ, ಈ ಬಾಲಕ 11 ವರ್ಷದ ಅನಿರುದ್ಧ ಎಂದು ಹೇಳಲಾಗುತ್ತಿದ್ದು, ಘಟನೆ ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆಯ…