Category Archives: Blog

Your blog category

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್ – Kannada News | New Zealand Openers Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

Source link

ಕರಣ್ ಜೋಹರ್ ಬಗ್ಗೆ ಅತೀ ಕೆಟ್ಟದಾಗಿ ವಿಡಿಯೋ ಮಾಡಿದ ಯೂಟ್ಯೂಬರ್ ಕ್ಯಾರಿಮಿನಾಟಿಗೆ ಸಂಕಷ್ಟ – Kannada News | CarryMinati vs Karan Johar: Court Orders Video Takedown for Impersonation

ಖ್ಯಾತ ಯೂಟ್ಯೂಬರ್ ಕ್ಯಾರಿಮಿನಾಟಿ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ವಿವಿಧ ರೀತಿಯ ವಿಡಿಯೋಗಳನ್ನು ಮಾಡಿ ಸಾಕಷ್ಟು ಹಿಂಬಾಲಕರನ್ನು ಸಂಪಾದಿಸಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಅವರನ್ನು ಅನುಕರಿಸಿದ್ದಕ್ಕೆ ತೊಂದರೆ ಎದುರಿಸುತ್ತಿದ್ದಾರೆ. ಈ ಸಂಬಂಧ ಕೋರ್ಟ್​​ನಿಂದ ಆದೇಶ ಬಂದಿದ್ದು, ವಿಡಿಯೋನ ತೆಗೆಯುವಂತೆ ಸೂಚನೆ ನೀಡಿದೆ.

ಇತ್ತೀಚೆಗೆ ವಿಡಿಯೋ ಒಂದನ್ನು ಮಾಡಿ ಕ್ಯಾರಿ ಮಿನಾಟಿ ಪೋಸ್ಟ್ ಮಾಡಿದ್ದರು. ಕರಣ್ ಜೋಹರ್ ನಡೆಸಿಕೊಡೋ ‘ಕಾಫಿ ವಿತ್ ಕರಣ್’ ಹೋಲುವ ರೀತಿಯ ಶೋನ ಕ್ಯಾರಿಮಿನಾಟಿ ಮಾಡಿದ್ದರು. ಇದರಲ್ಲಿ ಕರಣ್ ಜೋಹರ್ ರೀತಿ ರೆಡಿ ಆಗಿ ಬಂದಿದ್ದ ಕ್ಯಾರಿ, ಅವರನ್ನು ಅನುಕರಿಸಿದ್ದರು. ಇದರಲ್ಲಿ ಸಾಕಷ್ಟು ಕೆಟ್ಟ ಶಬ್ದಗಳು, ಕರಣ್​​ನ ಕೆಟ್ಟ ರೀತಿ ತೋರಿಸಲಾಗಿತ್ತು. ಇದನ್ನು ಮುಂಬೈ ಸಿವಿಲ್ ಕೋರ್ಟ್​​ನಲ್ಲಿ ಕರಣ್ ಪ್ರಶ್ನೆ ಮಾಡಿದ್ದರು. ಕರಣ್ ಜೋಹರ್ ಪರವಾಗಿ ಆದೇಶ ಬಂದಿದೆ.

ಕರಣ್ ಜೋಹರ್ ಅವರನ್ನು ಯಾರೂ ಅನುಕರಿಸುವಂತಿಲ್ಲ. ಅವರ ಧ್ವನಿ ಹಾಗೂ ಫೋಟೋಗಳನ್ನು ಅನುಮತಿ ಇಲ್ಲದೆ ಯಾರೂ ಬಳಕೆ ಮಾಡುವಂತೆ ಇಲ್ಲ. ಈ ಸಂಬಂಧ ಅವರು ಕೋರ್ಟ್​ನಿಂದ ಆದೇಶ ತಂದಿದ್ದಾರೆ. ಆದಾಗ್ಯೂ ಈ ರೀತಿಯ ಕೆಲಸ ಆಗಿದೆ. ‘ದಶಕಗಳಿಂದ ಶ್ರಮವಹಿಸಿ ಸಂಪಾದಿಸಿದ ಖ್ಯಾತಿಗೆ ಹಾನಿ ಮಾಡಲು ಈ ವಿಡಿಯೋ ಮಾಡಲಾಗಿದೆ ಎಂದು ಜೋಹರ್ ವಾದಿಸಿದರು. ಬಳಸಿದ ಭಾಷೆ ವೈಯಕ್ತಿಕ ಮತ್ತು ವೃತ್ತಿಪರದ ಮಿತಿಯನ್ನು ಮೀರಿದೆ ಎಂದು ಕರಣ್ ಪರ ವಕೀಲರು ಹೇಳಿದರು. ಈ ವಿಡಿಯೋನ ನಿಲ್ಲಿಸಲು ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.

ಇದನ್ನೂ ಓದಿ: ಸಿನಿಮಾ ನಿರ್ಮಾಣಕ್ಕೆ 25 ಕೋಟಿ, ಪ್ರಚಾರಕ್ಕೆ ಬೇಕು 100 ಕೋಟಿ: ಕೊಡ್ತಾರಾ ಕರಣ್ ಜೋಹರ್?

ವಿಚಾರಣೆಯ ಸಮಯದಲ್ಲಿ, ಕ್ಯಾರಿಮಿನಾಟಿ ಪರ ವಕೀಲರು ಈ ಬಗ್ಗೆ ಮಾತನಾಡಿದ್ದಾರೆ. ಕ್ಯಾರಿಮಿನಾಟಿ ಅವರು ಈಗಾಗಲೇ ವಿವಾದಾತ್ಮಕ ವಿಡಿಯೋ ತೆಗೆಯಲು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಕ್ರಮ ಕೈಗೊಳ್ಳಲು ಯಾವುದೇ ಕಾರಣವಿಲ್ಲ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮದುವೆ ನೆಪದಲ್ಲಿ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ್ದ ‘ಮ್ಯಾಟ್ರಿಮೋನಿ ಮನ್ಮಥ’, ನಕಲಿ ಮಾವ ಪೊಲೀಸ್ ಬಲೆಗೆ – Kannada News | Matrimony Man Arrested: Man Who Cheated 9 Women in Name of Marriage Nabbed by Mangaluru Police

ಸುಶಾಂತ್ ಪೂಜಾರಿ ಹಾಗೂ ಭಾಸ್ಕರ್‌Image Credit source: tv9

ಮಂಗಳೂರು, ಫೆಬ್ರವರಿ 11: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಮಂಗಳೂರು ಪೊಲೀಸರು (Mangalore Police) ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್ ತನ್ನ ಅಳಿಯ ಎಂದು ಹೇಳಿ ಸಂತ್ರಸ್ತೆಯ ಕುಟುಂಬದವರಿಗೆ ನಂಬಿಕೆ ಮೂಡಿಸಲು ಭಾಸ್ಕರ್ ಧಾರ್ಮಿಕ ವಿಧಿವಿಧಾನಗಳಲ್ಲೂ ಭಾಗವಹಿಸಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

ಇಬ್ಬರ ಜೊತೆ ಮದುವೆ, 9 ಯುವತಿಯರಿಗೆ ವಂಚನೆ!

ಮದುವೆಯ ಹೆಸರಿನಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 9 ಯುವತಿಯರನ್ನು ಸುಶಾಂತ್ ವಂಚಿಸಿದ್ದಾನೆ. ಈ ಪೈಕಿ ಇಬ್ಬರು ಯುವತಿಯರೊಂದಿಗೆ ಮದುವೆಯಾಗಿ ನಂತರ ಕೈಕೊಟ್ಟಿರುವುದಾಗಿ ತಿಳಿದುಬಂದಿದೆ. ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯ ಮಾಡಿಕೊಂಡು ನಂಬಿಕೆ ಗಳಿಸಿದ ಬಳಿಕ ಹಂತ ಹಂತವಾಗಿ ಹಣ ಪಡೆದು ಆರೋಪಿ ನಾಪತ್ತೆಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನಲ್ಲಿ ಒಬ್ಬ ಯುವತಿಯನ್ನು ಮದುವೆಯಾಗಿದ್ದು, ಆಕೆಯಿಂದ ಸುಮಾರು 6.6 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾಗಿದ್ದ. ಉಡುಪಿ ಭಾಗದ ಇಬ್ಬರು ಯುವತಿಯರಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದಾನೆ. ಇದೇ ರೀತಿಯಾಗಿ ಬೆಂಗಳೂರಿನಲ್ಲಿ ಇಬ್ಬರು ಯುವತಿಯರು, ಕಾರ್ಕಳದ ಒಬ್ಬ ಯುವತಿ ಹಾಗೂ ಮಂಗಳೂರಿನ ಮತ್ತೊಬ್ಬ ಯುವತಿಯನ್ನೂ ಮೋಸಗೊಳಿಸಿದ್ದ ಪ್ರಕರಣಗಳು ಈಗ ಬೆಳಕಿಗೆ ಬಂದಿವೆ.

ಈ ಕುರಿತು ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯೊಬ್ಬಳು ದೂರು ನೀಡಿದ್ದಳು. ದೂರು ಆಧಾರಿಸಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿಯ ಹಿನ್ನಲೆ ಕೆದಕಿದಾಗ ಆತನ ವಂಚನೆಗಳ ಸರಣಿ ಬಯಲಾಗಿತ್ತು. ನಕಲಿ ಮಾವ-ಅಳಿಯರಾಗಿ ನಟನೆ ಮಾಡಿ ಮದುವೆ ನಾಟಕವಾಡಿ ಯುವತಿಯರ ಜೀವನದೊಂದಿಗೆ ಆಟವಾಡಿದ್ದ ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಪಡ್ಡೆ ಹುಡುಗರ ಬಲೆಗೆ ಬೀಳಿಸಲು ಹೆಸರೇ ಬದಲಾಯಿಸಿದ್ದ ಸುಚಿತ್ರಾ! ಖತರ್ನಾಕ್ ಪ್ಲಾನ್ ರಹಸ್ಯ ಬಟಾಬಯಲು

ಆನ್‌ಲೈನ್ ಮ್ಯಾಟ್ರಿಮನಿ ಬಳಕೆ ಮಾಡುವವರು ಎಚ್ಚರಿಕೆಯಿಂದಿರಬೇಕು ಎಂದು ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? – Kannada News | Daily Devotional: Why should you leave your slippers outside the temple?

ಬೆಂಗಳೂರು, ಫೆಬ್ರವರಿ​ 11: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಾದರಕ್ಷೆಗಳು ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕೇವಲ ಕಾಲಿನ ರಕ್ಷಣೆಗೆ ಮಾತ್ರ ಸೀಮಿತವಾಗದೆ, ಅವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಭಾಗವಾಗಿವೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿಗಳನ್ನು ಹೊರಗೆ ಬಿಡುವುದು ಅಹಂಕಾರ ಮತ್ತು ದರ್ಪವನ್ನು ತ್ಯಾಗ ಮಾಡುವ ಸಂಕೇತವಾಗಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ.

ಇದು ವಿನಮ್ರವಾಗಿ ದೈವದ ಮುಂದೆ ಶರಣಾಗುವ ಭಾವವನ್ನು ಪ್ರತಿಬಿಂಬಿಸುತ್ತದೆ. ಭರತನು ರಾಮನ ಪಾದುಕೆಗಳನ್ನು ಸಿಂಹಾಸನದ ಮೇಲೆ ಇಟ್ಟು ಆಡಳಿತ ನಡೆಸಿದ ಉದಾಹರಣೆಯು ಪಾದರಕ್ಷೆಗಳ ಮಹತ್ವವನ್ನು ಎತ್ತಿ ತೋರಿಸುತ್ತದೆ. ಗುರುಗಳ ಪಾದರಕ್ಷೆಗಳಿಗೆ ಪಾದುಕಾ ಪೂಜೆ ಸಲ್ಲಿಸುವುದು ಭಾರತೀಯ ಸಂಪ್ರದಾಯದಲ್ಲಿ ಶ್ರೇಷ್ಠವಾದುದು. ಪಾದರಕ್ಷೆಗಳ ದಾನವನ್ನು ಕೂಡ ಶುಭವೆಂದು ಪರಿಗಣಿಸಲಾಗುತ್ತದೆ. ಪಾದರಕ್ಷೆಗಳು ದೇಹದ ಶಕ್ತಿಯನ್ನು ಹೊಂದಿರುತ್ತವೆ ಮತ್ತು ಅವುಗಳನ್ನು ಸರಿಯಾಗಿ ಜೋಡಿಸುವುದು ಸಕಾರಾತ್ಮಕ ಶಕ್ತಿಯನ್ನು ಕಾಪಾಡುತ್ತದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ! – Kannada News | Real Cobra Found in Lakkundi Temple: Workers Stunned During Renovation at Historic Site in Gadag

ಗದಗ, ಫೆಬ್ರವರಿ 11: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಗದಗ ತಾಲೂಕಿನ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿರುವ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಿಜವಾದ ನಾಗಸರ್ಪ ಕಾಣಿಸಿಕೊಂಡು, ಸ್ಥಳೀಯರು ಹಾಗೂ ಕಾರ್ಮಿಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಇದೀಗ ಲಕ್ಕುಂಡಿಯಲ್ಲಿ ನಡೆಯುತ್ತಿದೆ. ಚೌಕಿಮಠ ಕುಟುಂಬಕ್ಕೆ ಸೇರಿದ ಮನೆ ಸಂಕೀರ್ಣದೊಳಗಿನ ಹುದುಗಿದ ಈಶ್ವರ ದೇವಸ್ಥಾನವನ್ನು ‘ಮನೆಯೊಳಗೊಂದು ದೇವಸ್ಥಾನ’ ಎಂಬ ಶೀರ್ಷಿಕೆಯಡಿ ಟಿವಿ9 ವರದಿ ಪ್ರಸಾರ ಮಾಡಿತ್ತು. ನಂತರ ಅಭಿವೃದ್ಧಿ ಹಾಗೂ ಜೀರ್ಣೋದ್ಧಾರ ಕಾರ್ಯಗಳಿಗೆ ವೇಗ ದೊರೆತಿತ್ತು.

ಈ ಹಿನ್ನೆಲೆ ದೇವಸ್ಥಾನದ ಆವರಣ ಸ್ವಚ್ಛಗೊಳಿಸುವ ವೇಳೆ ಮಾರುದ್ದದ ನಾಗರ ಹಾವು ಪತ್ತೆಯಾಗಿದೆ. ಹಾವು ಕಾಣಿಸಿಕೊಂಡ ತಕ್ಷಣ ಕಾರ್ಮಿಕರು ದಂಗಾಗಿ ಕೆಲಕಾಲ ಕೆಲಸ ನಿಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಹಾವು ಸರಿದು ಹೋಗಿದೆ. ನಂತರ ಭಯದೊಂದಿಗೇ ಕಾರ್ಮಿಕರು ಸ್ವಚ್ಛತಾ ಕಾರ್ಯ ಮುಂದುವರೆಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 11ರ ದಿನಭವಿಷ್ಯ – Kannada News | Daily Numerology Prediction Feb 11: Birth Numbers 4, 5, 6 – What Awaits You?

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಮನೆಗೆ ಟೀವಿ, ರೆಫ್ರಿಜರೇಟರ್ ಅಥವಾ ಡಿಶ್ ವಾಷರ್ ಇಂಥ ಉಪಕರಣ ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡುತ್ತೀರಿ. ಮತ್ತೆ ಕೆಲವರಿಗೆ ಇವು ಉಡುಗೊರೆಯಾಗಿ ದೊರೆಯುವ ಯೋಗ ಸಹ ಇದೆ. ಸಂಘ- ಸಂಸ್ಥೆಗಳ ಚುನಾವಣೆಗೆ ಸ್ಪರ್ಧೆ ಮಾಡುವ ಇರಾದೆ ಇರುವವರು ಅದಕ್ಕೆ ಕಾರ್ಯತಂತ್ರ ರೂಪಿಸುವುದಕ್ಕೆ ಸಂಬಂಧಪಟ್ಟ ವ್ಯಕ್ತಿಗಳನ್ನು ಭೇಟಿ ಆಗಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಸಂಗೀತಗಾರರು, ಕಲಾವಿದರು, ನೃತ್ಯವನ್ನೇ ವೃತ್ತಿ ಆಗಿ ಮಾಡಿಕೊಂಡವರಿಗೆ ಹೊಸ ಹೊಸ ಅವಕಾಶ ಹುಡುಕಿ ಬರಲಿದೆ. ವಿದೇಶಗಳಿಂದಲೂ ನಿಮಗೆ ಆಹ್ವಾನ ಬರಬಹುದು. ಆಯುರ್ವೇದ ಮೂಲಿಕೆಗಳನ್ನು ಬೆಳೆಯುತ್ತಾ ಅದರ ಮಾರಾಟದ ಮೂಲಕ ಆದಾಯ ಬರುತ್ತಾ ಇರುವವರು ಶಾಖೆಯನ್ನು, ವ್ಯವಹಾರವನ್ನು ವಿಸ್ತರಣೆ ಮಾಡುವ ಅವಕಾಶಗಳ ಕಡೆಗೆ ನೋಡಲಿದ್ದೀರಿ. ನಿಮ್ಮಲ್ಲಿ ಕೆಲವರು ಸಂಬಂಧಿಗಳ ಮನೆಯ ವ್ಯಾಜ್ಯಗಳನ್ನು ಬಗೆಹರಿಸುವುದಕ್ಕೆ ಹೆಚ್ಚು ಸಮಯ ಮೀಸಲು ಇಡಬೇಕಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ದ್ವಿಚಕ್ರ ವಾಹನ ಬಳಕೆಯನ್ನು ಈ ದಿನ ಸಾಧ್ಯವಾದಷ್ಟೂ ಮಾಡದಿರುವುದು ಕ್ಷೇಮ. ಅನಿವಾರ್ಯ ಎಂದಾದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಜಾಗ್ರತೆಯನ್ನು ವಹಿಸಿ, ವೇಗದ ಚಾಲನೆ ಯಾವುದೇ ಕಾರಣಕ್ಕೂ ಬೇಡ. ನಿಮ್ಮಲ್ಲಿ ಕೆಲವರಿಗೆ ದೇವತಾ ಕಾರ್ಯಗಳಲ್ಲಿ ಭಾಗೀ ಆಗುವಂಥ ಯೋಗ ಇದೆ. ಸೈಟು- ಮನೆ ಖರೀದಿ ಮಾಡುವುದಕ್ಕಾಗಿ ಹಣಕಾಸಿನ ಹೊಂದಾಣಿಕೆಗೆ ಯತ್ನ ಮಾಡುತ್ತಿರುವವರಿಗೆ ಅದು ಸಾಧ್ಯವಾಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 11ರ ದಿನಭವಿಷ್ಯ – Kannada News | *Numerology Horoscope Feb 11: Birth Number 7, 8, 9 Predictions & Anxiety Relief

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಮಹಿಳೆಯರಿಗೆ ತವರು ಮನೆಯಲ್ಲಿನ ಕೆಲವು ಬೆಳವಣಿಗೆಗಳಿಂದ ಸಂತೋಷ ಆಗಲಿದೆ. ಸಮಾರಂಭಕ್ಕೆ ನಿಮ್ಮ ಉಪಸ್ಥಿತಿಯನ್ನು ಖಾತ್ರಿ ಪಡಿಸಬೇಕು ಎಂದು ಸ್ನೇಹಿತರು- ಸಂಬಂಧಿಗಳು ಒತ್ತಡ ಹಾಕಲಿದ್ದು, ಒಂದಲ್ಲಾ ಒಂದು ಕೆಲಸದ ಕಾರಣಕ್ಕೆ ಈ ಬಗ್ಗೆ ಏನೂ ಹೇಳುವ ಸ್ಥಿತಿಯಲ್ಲಿ ನೀವು ಇರುವುದಿಲ್ಲ. ಹೊಸ ಬಟ್ಟೆ, ಒಡವೆಗಳನ್ನು ಖರೀದಿ ಮಾಡುವುದಕ್ಕೆ ಹೆಚ್ಚು ಹಣವನ್ನು ಖರ್ಚು ಮಾಡುವ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಿಮ್ಮಲ್ಲಿ ಕೆಲವರು ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚು ಮಾಡಲಿದ್ದೀರಿ. ನಿಮ್ಮದೇ ಇಬ್ಬರು ಸ್ನೇಹಿತರ ಮಧ್ಯೆ ಏರ್ಪಟ್ಟ ಮನಸ್ತಾಪ ದೂರ ಮಾಡುವುದಕ್ಕೆ ರಾಜೀ- ಸಂಧಾನಕ್ಕೆ ಪ್ರಯತ್ನ ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರು ಕುಟುಂಬ ಸದಸ್ಯರ ಜೊತೆಗೆ ಹತ್ತಿರದ ಸ್ಥಳಕ್ಕೆ ಕಿರುಪ್ರವಾಸವಾದರೂ ಮಾಡುವ ಯೋಗ ಇದ್ದು, ಹೋಟೆಲ್- ರೆಸ್ಟೋರೆಂಟ್ ಅಥವಾ ರೆಸಾರ್ಟ್ ಗೆ ಹೋಗುವ ಮತ್ತು ಒಟ್ಟಿಗೆ ಸಮಯ ಕಳೆಯುವ ಅವಕಾಶ ದೊರೆಯಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ತಂದೆ- ತಾಯಿಯ ಆರೋಗ್ಯದ ವಿಚಾರಕ್ಕೆ ಆತಂಕಕ್ಕೆ ಗುರಿ ಆಗಬೇಕಾಗುತ್ತದೆ. ಕೆಲವು ಔಷಧ- ಮಾತ್ರೆಗಳನ್ನು ತೆಗೆದುಕೊಳ್ಳುವ ವಿಚಾರವಾಗಿ ಕ್ರಮ ತಪ್ಪುವುದರಿಂದ ಅಥವಾ ಆಯಾ ಔಷಧದ ಕಂಪನಿ ಬದಲಾಗಿ, ಆರೋಗ್ಯದಲ್ಲಿ ಏರಿಳಿತ ಆಗಬಹುದು. ನಿಮ್ಮ ಪರಿಚಿತರ ಮನೆಯಲ್ಲಿ ಆಗುವ ಕೌಟುಂಬಿಕ ಬೆಳವಣಿಗೆಗಳಿಂದಾಗಿ ನಿಮಗೆ ಬರಬೇಕಾದ ಹಣಕಾಸಿನ ಬಾಕಿ ವಸೂಲಾತಿಗೆ ತಡೆ ಆಗಿ ಪರಿಣಮಿಸಬಹುದು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 11ರ ದಿನಭವಿಷ್ಯ – Kannada News | Feb 11 numerology daily predictions for birth numbers 1 2 3

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮಲ್ಲಿ ಕೆಲವರು ಯೋಗ, ರೇಕಿ, ಪ್ರಾಣಾಯಾಮ ಇಂಥ ಕೋರ್ಸ್ ಗಳಿಗೆ ಸೇರ್ಪಡೆ ಆಗುವ ಬಗ್ಗೆ ಆಲೋಚನೆ ಮಾಡುತ್ತೀರಿ. ಈಗಾಗಲೇ ಹಣ ಪಾವತಿ ಮಾಡಿ, ಕಾಯ್ದಿರಿಸಿದ್ದ ಸೈಟು, ವಿಲ್ಲಾ ಅಥವಾ ಫ್ಲ್ಯಾಟ್ ಬಗ್ಗೆ ಈ ದಿನ ಅಪ್ ಡೇಟ್ ಸಿಗಲಿದೆ. ವೃತ್ತಿಯಲ್ಲಿ ವಕೀಲರಾಗಿ ಇರುವವರು ಹೊಸ ಕಚೇರಿ ಖರೀದಿ ಮಾಡುವ ಅಥವಾ ಲೀಸ್ ಗೆ ಪಡೆಯುವ ಬಗ್ಗೆ ಮಾತುಕತೆ ನಡೆಸಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗೆ ಸಿದ್ಧತೆ ಮಾಡಿಕೊಳ್ಳುವುದಕ್ಕೆ ಹೆಚ್ಚು ಸಮಯವನ್ನು ಮೀಸಲಿಡಲಿದ್ದೀರಿ. ವಿವಾಹಿತರಿಗೆ ಸಂಗಾತಿ ಜೊತೆ ಇರುವಂಥ ಅಭಿಪ್ರಾಯ ಭೇದ ಇದ್ದಲ್ಲಿ ಅದನ್ನು ನಿವಾರಿಸಿಕೊಳ್ಳುವ ವೇದಿಕೆ ದೊರೆಯಲಿದೆ. ಮಕ್ಕಳ ಸಲುವಾಗಿ ಸಮಗ್ರವಾಗಿ ಬರುವಂಥ ಒಟಿಟಿ ಸಬ್ ಸ್ಕ್ರಿಪ್ಷನ್ ಪಡೆದುಕೊಳ್ಳುವುದಕ್ಕೆ ಅಥವಾ ಹೊಸದಾಗಿ ಇಂಟರ್ ನೆಟ್ ಕನೆಕ್ಷನ್ ತೆಗೆದುಕೊಳ್ಳುವುದಕ್ಕೆ ಆಲೋಚನೆ ಮಾಡಲಿದ್ದೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ಮನೆಗೆ ದೂರದ ಊರಿನಲ್ಲಿನ ಸಂಬಂಧಿಗಳು ಬರುವಂಥ ಯೋಗ ಈ ದಿನ ಇದೆ. ಉದ್ಯೋಗ ಬದಲಾವಣೆಗಾಗಿ ಪ್ರಯತ್ನ ಮಾಡುತ್ತಿರುವವರು ಅದಕ್ಕೆ ಸಂಬಂಧಿಸಿದಂತೆ ಸಿದ್ಧತೆ ಮಾಡುವುದಕ್ಕೆ ಹೆಚ್ಚಿನ ಸಮಯ ಇಡಲಿದ್ದೀರಿ. ನಿಮ್ಮ ಸೋಷಿಯಲ್ ಕಾಂಟ್ಯಾಕ್ಟ್ ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಆಗಬೇಕಾದ ಕೆಲಸಗಳನ್ನು ಮಾಡಿ ಮುಗಿಸುವಲ್ಲಿ ಯಶಸ್ಸು ಕಾಣಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಭಾರವನ್ನು ಕಳೆದಿಕೊಳ್ಳುವಿರಿ – Kannada News | Horoscope 11 February 2026; Dina Rashi Bhavishya Today, Checkout the details here

ಮೇಷ ರಾಶಿ :

ಆತುರದಲ್ಲಿ ಏನನ್ನಾದರೂ ಮಾಡಿಕೊಂಡೀರ. ನಿಮ್ಮ ಮಾತಿನಲ್ಲಿ ತಾರ್ಕಿಕತೆ ಹೆಚ್ಚು ಕಾಣುವುದು. ಅಮೂಲ್ಯ ವಸ್ತುಗಳ ಖರೀದಿಯಿಂದ ಹಣದ ಉಳಿತಾಯ. ಸಮಯೋಚಿತ ಮಾತುಗಳಿಂದ ಪ್ರಶಂಸೆಯು ಸಿಗಬಹುದು. ವಿವಾಹಯೋಗವು ಬಂದರೂ ಅದನ್ನು ನೀವು ಸ್ವೀಕರಿಸುವ ರೀತಿ ಭಿನ್ನವಾಗಿ ಇರಲಿದೆ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಸಂಗಾತಿಗೆ ಸುಳ್ಳು ಹೇಳಿ ನಿಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಪಕ್ಷಪಾತದಿಂದ ನಿಮಗೇ ತೊಂದರೆ ಎದುರಾದೀತು.

ವೃಷಭ ರಾಶಿ:

ಇಂದು ಸಮಯದ ಹೊಂದಾಣಿಕೆಯಲ್ಲಿ ನೀವು ಸೋಲಬಹುದು. ಸಭ್ಯರಂತೆ ಇಂದು ನೀವು ತೋರುವಿರಿ. ನೀವು ಮೊದಲೇ ನಿರ್ಧರಿಸಿರುವ ಕೆಲಸಗಳನ್ನು ಪೂರ್ಣ ಮಾಡಲು ಸಮಯವು ಸಿಗದೇ ಹೋದೀತು. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇದೆ. ಯಾರಾದರೂ ಬಂದು ನಿಮ್ಮ ಬಳಿ ಕೆಲಸ ಮಾಡಿಕೊಡಲು ಕೇಳಬಹುದು. ಗೊತ್ತಿರುವ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳಿ.

ಮಿಥುನ ರಾಶಿ:

ನಿಮ್ಮ ಏಕಾಗ್ರತೆಯ ಕಾರ್ಯಕ್ಕೆ ಭಂಗವಾಗುವ ಸಾಧ್ಯತೆ ಇದೆ. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಜವಾಬ್ದಾರಿಯಿಂದ ತಲೆ ಭಾರವಾಗುವುದು. ಅನವಶ್ಯಕ ಹರಟೆಯಿಂದ ಅಧಿಕಾರಿಗಳು ನಿಮ್ಮ ಮೇಲೆ ಸಿಟ್ಟಾಗಬಹುದು. ಬೆನ್ನು ನೋವಿನ ಸಮಸ್ಯೆಗೆ ಸೂಕ್ತ ಪರಿಹಾರವು ಸಿಕ್ಕೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಎಲ್ಲರ ಬಳಿ ಹೇಳಿಕೊಳ್ಳುವಿರಿ. ಮನಸ್ಸನ್ನು ಖಾಲಿ ಬಿಡದೇ ಏನಾದರೊಂದು ಕಾರ್ಯದಲ್ಲಿ ತೊಡಗಿಸಿ.

ಕರ್ಕಾಟಕ ರಾಶಿ:

ಭವಿಷ್ಯದ ಬಗ್ಗೆ ಅತಿಯಾದ ಆಲೋಚನೆ ಇರಲಿದೆ. ಸಹೋದರನಿಂದ ನಿಮಗೆ ಸಮಸ್ಯೆ ಆಗಬಹುದು. ಹಠದ ಸ್ವಭಾವದಿಂದ ಸಂಗಾತಿಗೆ ಕಿರಿಕಿರಿ ಎನಿಸಬಹುದು. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ. ಸಮಯಪ್ರಜ್ಞೆಯು ಇಂದು ಕೆಲಸ ಮಾಡದು. ಉತ್ತಮ ಅವಕಾಶಗಳಿಂದಲೂ ನೀವು ವಂಚಿತರಾಗುವಿರಿ. ಕುಟುಂಬದ ನಡವಳಿಕೆಯು ನಿಮಗೆ ಅರ್ಥವಾಗದೇ ಹೋದೀತು. ದುರಭ್ಯಾಸದ ಕಡೆ ನಿಮ್ಮ ಗಮನವು ಇರಲಿದೆ.

ಸಿಂಹ ರಾಶಿ:

ಜಾಣ್ಮೆಯಿಂದ ಇಂದು ನೀವು ಪ್ರಶಂಸೆಯನ್ನು ಪಡೆಯುವಿರಿ. ವೃತ್ತಿಯಲ್ಲಿ ಕೆಲವು ಸಂತೋಷದ ಕ್ಷಣಗಳು ನಿಮ್ಮದಾಗಲಿವೆ. ಮನೋವಿಕಾರವನ್ನು ಎಲ್ಲರೆದುರೂ ತೋರಿಸುವುದು ಬೇಡ. ನಿಮ್ಮದು ಅಂದುಕೊಂಡವು ವಸ್ತುವು ದೂರವಾಗಬಹುದು. ಪರರ ದುಃಖಕ್ಕೆ ಸ್ಪಂದನೆ ಇರಲಿ. ಆಪ್ತರ ಮೇಲೆ ಬೇಸರಪಟ್ಟುಕೊಳ್ಳುವ ಸಾಧ್ಯತೆ ಇದೆ. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳನ್ನು ನೀವು ಕೇಳಬೇಕಾದೀತು.

ಕನ್ಯಾ ರಾಶಿ:

ಅಧಿಕಾರವರ್ಗದಿಂದ ಶೋಷಣೆಗೆ ಒಳಗಾಗುವಿರಿ. ನಿಮ್ಮಿಂದ ಉಪಕಾರ ಪಡೆದವರು ನಿಮ್ಮ ವಿರುದ್ಧ ಬೀಳಬಹುದು. ಸಿಕ್ಕ ಸಣ್ಣ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಿ. ಇಷ್ಟ ದೇವರನ್ನು ಪ್ರಾರ್ಥಿಸಿ ನೀವು ಮುಂದಿನ ಕಾರ್ಯಗಳಿಗೆ ತೆರಳುವಿರಿ. ನಿಮ್ಮ ಕೆಲಸದಲ್ಲಿ ಇಂದು ಅಡತಡೆಗಳು ಬರಲಿದೆ. ಅದನ್ನು ಗಂಭಿರವಾಗಿ ತೆಗೆದುಕೊಳ್ಳುವುದು ಬೇಡ. ಬದುಕಿಗೆ ತಿರುವು ಬರುವ ಸಾಧ್ಯತೆ ಇದೆ. ಸಣ್ಣ ಉಳಿತಾಯಕ್ಕೆ ಇಂದು ಬೆಲೆಯು ಬಂದಂತಾಗುವುದು. ಜೀವನದ ಲಕ್ಷ್ಯವು ಬೇರೆ ಕಡೆಗೆ ಇರಲಿದೆ.

ತುಲಾ ರಾಶಿ:

ಗುಟ್ಟನ್ನು ಯಾರೇ ಒತ್ತಾಯ ಮಾಡಿದರೂ ಬಿಟ್ಟುಕೊಡಲಾರಿರಿ. ಇಂದು ನೀವು ಸಂತೋಷ ಆಗದೇಹೋಗಬಹುದು. ನಿಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾದ ಮಾತುಗಳು ಎಲ್ಲ ಕಡೆ ಇರಲಿವೆ. ಇಂದಿನ ಎಲ್ಲ ಕಾರ್ಯದಲ್ಲಿಯೂ ಜಯವನ್ನು ಪಡೆಯುವಿರಿ. ಆರ್ಥಿಕಸ್ಥಿತಿಯು ಸುಧಾರಿಸಿದ್ದು ನಿಮಗೆ ಸ್ವಲ್ಪ ನೆಮ್ಮದಿ ಇರುವುದು. ಯಾರ ಜೊತೆಯೂ ಭೇದಭಾವ ಎಣಿಸುವ ಅವಶ್ಯಕತೆ ಬರದಂತೆ ನೋಡಿ. ನೆಚ್ಚಿನ ತಾಣವು ನಿಮಗೆ ಹೊಸ ಉತ್ಸಾಹವನ್ನು ನೀಡುವುದು.

ವೃಶ್ಚಿಕ ರಾಶಿ:

ಇಂದು ಕಛೇರಿಯನ್ನು ಮಹಿಳೆಯರು ನಿರ್ವಹಿಸಬೇಕಾಗುವುದು. ಮಾಡದ ಕಾರ್ಯಕ್ಕೆ ಅಪವಾದ ಬರುವುದು. ನಿರಂತರ ಕೆಲಸವು ನಿಮಗೆ ಬೇಸರ ತಂದೀತು. ಇಂದು ವೃತ್ತಿಯಲ್ಲಿ ಆತಂಕವು ಬರಬಹುದು. ಪ್ರಾಣಿಗಳಿಂದ ಭೀತರಾಗುವ ಸಾಧ್ಯತೆ ಇದೆ. ನಿಮ್ಮ ಇಷ್ಟದವರ ಭೇಟಿಯಾಗುವಿರಿ. ನಿಮ್ಮ ಸಾಮರ್ಥ್ಯಕ್ಕೆ ಯೋಗ್ಯವಾದ ಕೆಲಸವನ್ನು ಮಾಡಿ. ಯಾರ ಬಗ್ಗೆಯೂ ಅನಗತ್ಯ ಟೀಕೆಗಳು ಬೇಡ. ನೌಕರರ ವಿಚಾರದಲ್ಲಿ ಅಸಮಾಧಾನವಿರಲಿದೆ. ಆಧ್ಯಾತ್ಮದ ಕಡೆ ಮನಸ್ಸು ಇರಬಹುದು.

ಧನು ರಾಶಿ:

ಸಹೋದ್ಯೋಗಿಗಳು ನಿಮ್ಮ ಬಗ್ಗೆ ನಕಾರಾತ್ಮಕ ಅಂಶಗಳು ಅಧಿಕಾರಿಗಳಿಗೆ ಹೇಳುವರು. ಹೇಳಿದ್ದು ಮತ್ತು ಮಾಡಿದ್ದಕ್ಕೂ ವ್ಯತ್ಯಾಸವಿರುವುದು. ಯಾರಾದರೂ ನಿಮ್ಮನ್ನು ಛೇಡಿಸಬಹುದು. ವಾಹನ ಖರೀದಿಗೆ ಗೊಂದಲದ ಮನಸ್ಸು ಬೇಡ. ವೃತ್ತಿಯನ್ನೇ ಬದಲಾಯಿಸುವ ಆಸೆ ಬರಬಹುದು. ಸ್ನೇಹಿತರಿಗೆ ನಿಮ್ಮದಾದ ಕೆಲವು ಆಯ್ಕೆಗಳನ್ನು ಹೇಳಿ. ಹೂಡಿಕೆಯ ವಿಚಾರವನ್ನು ಸ್ನೇಹಿತರ ಮೂಲಕ ಗೊತ್ತುಮಾಡಿಕೊಳ್ಳುವಿರಿ. ಸಿಟ್ಟಿನಿಂದ ಕೂಗಾಡುವಿರಿ.

ಮಕರ ರಾಶಿ:

ಪುಣ್ಯಕ್ಷೇತ್ರದ ದರ್ಶನದಿಂದ ಮನಸ್ಸು ಪಾವನವಾಗಲಿದೆ. ಹೊಸ ಉದ್ಯೋಗಕ್ಕೆ ನಿಮ್ಮ ಮನಸ್ಸು ತೆರದುಕೊಳ್ಳುವುದು. ಹಿತಶತ್ರುಗಳು ಲಾಭವನ್ನು ತಪ್ಪಿಸುವರು. ಸತ್ಯದ ಮಾತಿನಿಂದ ನಿಮಗೇ ಸಂಕಷ್ಟವು ಬರಬಹುದು. ಸಮಾಜದಿಂದ ಸಿಗುವ ಗೌರವವೂ ನಿಮಗೆ ಬಾರದು. ಬಂಧುಗಳು ನಿಮ್ಮ ಸಹಾಯವನ್ನು ಕೇಳಬಹುದು. ಇಂದು ನಿಮ್ಮಿಂದ ಕುಟುಂಬವು ಸಂತೋಷವಾಗಿರುವುದು. ನಿದ್ರೆಯಲ್ಲಿ ಕೆಟ್ಟ ಕನಸುಗಳನ್ನು ಕಂಡು ಚಿಂತೆಗೊಳ್ಳುವಿರಿ. ಉತ್ತಮ ಕಾಲದ ನಿರೀಕ್ಷೆಯಲ್ಲಿ ನೀವು ಇರುವಿರಿ.

ಕುಂಭ ರಾಶಿ:

ಅಪರಿವಿತರು ನಿಮ್ಮ ಜೊತೆ ಪರಿಚಿತರಂತೆ ಮಾತನಾಡಬಹುದು.‌ ಸಂಗಾತಿಯ ಮನೋಭಾವವನ್ನು ಅರಿತುಕೊಳ್ಳಲು ಕಷ್ಟವಾದೀತು. ದೂರದ ಸ್ಥಳಕ್ಕೆ ಪ್ರವಾಸ ಹೋಗುವ ಸಂದರ್ಭವು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೇಳದೇ ಯಾರಿಗೂ ಉಪದೇಶವನ್ನು ನೀಡುವುದು ಬೇಡ. ನೀವು ಪರಿಚಿತರಿಂದ ಸಹಾಯವನ್ನು ಅಪೇಕ್ಷಿಸುವಿರಿ. ಕಛೇರಿಯಲ್ಲಿ ಎಲ್ಲರ ಜೊತೆ ಸೌಹಾರ್ದದಿಂದ ವರ್ತಿಸಿ. ಪ್ರೀತಿಯ ವಿಚಾರದಲ್ಲಿ ಇಂದು ಬೇಸರವಾಗಬಹುದು. ನಿಮಗೆ ಅಗೌರವ ತೋರಬಹುದು.

ಮೀನ ರಾಶಿ:

ನಿಮ್ಮದಾದ ಸ್ವತಂತ್ರ ಆದಾಯವನ್ನು ಇಟ್ಟುಕೊಳ್ಳಿ. ಖಾಸಗಿ ವೃತ್ತಿಯಲ್ಲಿ ಆದಾಯವನ್ನು ಹೆಚ್ಚಿಸಿಕೊಳ್ಳಲು ಮಾತನಾಡುವಿರಿ. ಶತ್ರುಗಳಿಗೆ ನೀವೇ ಕೇಂದ್ರಬಿಂದು ಆಗಿರಬಹುದು. ನಿಮ್ಮ ಯೋಜನೆಗೆ ತಗುಲುವ ಲೆಕ್ಕಾಚಾರವು ತಪ್ಪಾಗಬಹುದು. ಬಂಧುಗಳ ಜೊತೆ ವಿವಾದವು ಏರ್ಪಡಲಿದ್ದು ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು. ನಿಮ್ಮ ವ್ಯಾಪಾರದಿಂದ ಅಧಿಕ ಲಾಭವು ಸಿಗುವುದು. ಅಧಿಕಾರಿ ವರ್ಗದವರ ಕಣ್ಣು ನಿಮ್ಮ ಮೇಲೆ ಇರಲಿದೆ. ಸಣ್ಣ ಅಹಂಕಾರವು ನಿಮ್ಮನ್ನು ಕೆಡಿಸಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಮೂಲಾ, ಯೋಗ : ವೃದ್ಧಿ, ಕರಣ : ಕೌಲವ, ಸೂರ್ಯೋದಯ – 06 – 50 am, ಸೂರ್ಯಾಸ್ತ – 06 – 26 pm, ಇಂದಿನ ಶುಭಾಶುಭ ಕಾಲ : ರಾಹು 12:39 – 14:06, ಯಮಗಂಡ ಕಾಲ 08:18 – 09:45, ಗುಳಿಕ ಕಾಲ 11:12 – 12:39

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು – Kannada News | Hindu Young Woman Escaped With Muslim Youth at Mangaluru, Case Booked In surathkal Police station

ಮಂಗಳೂರು, (ಫೆಬ್ರವರಿ 10): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮನೆಯವರೆಗೆ ತಿಳಿಸದೇ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ ಮಿದ್ಲಾಜ್ ರಿಜಿಸ್ಟರ್ ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ವಿಷಯ ತಿಳಿದ ಪೋಷಕರು, ಆಕೆ ಇದ್ದ ಪಿಜಿಗೆ ಬಂದು ವಿಚಾರಿಸಿದ್ದು, ಫೆಬ್ರವರಿ‌ 9ರಂದು ಪಿಜಿಯಿಂದ ತೆರಳಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಅಷ್ಟೇ. ಆದ್ರೆ, ಆಕೆ ಎಲ್ಲಿ ಹೋಗಿದ್ದಾಳೆ ಎನ್ನುವುದು ಗೊತ್ತಾಗಿಲ್ಲ. ಇದರಿಂದ ಭಯಗೊಂಡ ವೈಶಾಲಿ ಪೋಷಕರು, ನೀಡಿದ ದೂರಿನ ಮೇರೆಗೆ ಸುರತ್ಕಲ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ

ಬೇರೆ ಕಾಲೇಜಿಗೆ ಸೇರಲು ವಿದ್ಯಾರ್ಥಿನಿ ಕಿಡ್ನಾಪ್ ನಾಟಕ

ಇನ್ನೊಂದು ಕಡೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಸುದೇಮುಗೇರು ಬಳಿ ನಿನ್ನೆ ಶಾಕಿಂಗ್ ಸುದ್ದಿ ಬಂದಿತ್ತು.. ಕಾಶಿಬೆಟ್ಟುನಲ್ಲಿರುವ ಕಾಲೇಜಿನಲ್ಲಿ ಪ್ರಥಮ ಪಿಯು ಓದ್ತಿದ್ದ ವಿದ್ಯಾರ್ಥಿನಿ, ನನ್ನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ರು ಅಂತೇಳಿದ್ಳು. ಪೊಲೀಸರು, ಶಾಸಕರೆಲ್ಲ ಸ್ಥಳಕ್ಕೆ ದೌಡಾಯಿಸಿದ್ರು.. ಸ್ಕೂಟಿಯಲ್ಲಿ ನಾನು ಕಾಲೇಜಿಗೆ ಹೋಗ್ತಿದ್ದಾಗ, ಓಮ್ನಿ ಕಾರಿನಲ್ಲಿ ಮೂವರು ಮಾಸ್ಕ್​​ ಧಾರಿಗಳು ನನ್ನ ಅಪಹರಿಸಲು ಯತ್ನಿಸಿದ್ರು. ನಾನು ಕಿರುಚಿಕೊಂಡಾಗ ಚೂರಿ ಇರಿದ್ರು. ನಾನು ಅವರಿಂದ ತಪ್ಪಿಸಿಕೊಂಡೇ, ನನ್ನ ಬ್ಯಾಗ್​​​ ಅವರೇ ಕೊಂಡೊಯ್ದರು ಅಂತೇಳಿದ್ದಳು. ಬಳಿಕ ತಂಡ ತಂಡವಾಗಿ ಪೊಲೀಸರು ತನಿಖೆಗೆ ಇಳಿದಾಗ, ಘಟನಾ ಸ್ಥಳದ ಅನತಿ ದೂರದಲ್ಲೇ ಬ್ಯಾಗ್ ಸಿಕ್ಕಿತ್ತು. ಅದರಲ್ಲಿ ನೀರಿನ ಬಾಟೆಲ್​ ಬಿಟ್ಟು ಪುಸ್ತಕಗಳು ನಾಪತ್ತೆ ಆಗಿದ್ದವು.

ಪೊಲೀಸರು ಯಾವ ಆ್ಯಂಗಲ್​​ನಲ್ಲಿ ಹುಡುಕಾಡಿದ್ರೂ ಕಿಡ್ನ್ಯಾಪರ್ಸ್​ ಸುಳಿವು ಸಿಗಲಿಲ್ಲ. ನಂತರ ಬಾಲಕಿಯನ್ನೇ ವಿಶ್ವಾಸಕ್ಕೆ ತೆಗೊಂಡು ವಿಚಾರಿಸಿದಾಗ, ಕಿಡ್ನಾಪ್ ನಡೆದೇ ಇಲ್ಲ ಅನ್ನೋದು ಗೊತ್ತಾಗಿದೆ. ಬೆಳ್ತಂಗಡಿ ಕಾಲೇಜಿನ ಬದಲು ಮಂಗಳೂರು ಕಾಲೇಜಿಗೆ ಸೇರಿಸುವಂತೆ ಬಾಲಕಿ ಕೇಳಿದ್ದಕ್ಕೆ ತಂದೆ ಒಪ್ಪಿರಲಿಲ್ವಂತೆ. ಹೀಗಾಗಿ ಬಾಲಕಿಯೇ ಕಿಡ್ನ್ಯಾಪ್​ ಕಥೆ ಕಟ್ಟಿರೋದು ಗೊತ್ತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link