Shubman Gill: ಎಲ್ಲವೂ ಸರಿಯಾಗಿದೆ, ತಪ್ಪು ನನ್ನದೇ ಅಂದಿದ್ದಾರೆ..! – Kannada News | Shubman gill post match interview after IND vs AFG
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ ತಡವಾಗಿ ಆರಂಭಗೊಂಡು, ತಲಾ 25 ಓವರ್‌ಗಳಿಗೆ ಸೀಮಿತಗೊಂಡಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ರಹಮಾನುಲ್ಲಾ ಗುರ್ಬಾಝ್ (102) ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಅಫ್ಘಾನಿಸ್ತಾನ್ 24.5 ಓವರ್ಗಳಲ್ಲಿ…