ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ : ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ ರಿಕ್ಕಿ?
ಬೆಂಗಳೂರು, ಮಾರ್ಚ್ 22: ನಗರದಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ತನಿಖೆ ವೇಳೆ ರಿಕ್ಕಿ ರೈ ನಿವಾಸದಲ್ಲಿ ಪತ್ತೆಯಾದ ಕೆಎ 05 ಎನ್ಆರ್ 0009 ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಕಬ್ಬನ್‌ಪಾರ್ಕ್ ಸಂಚಾರ ಪೊಲೀಸರು ಸೀಜ್ ಮಾಡಿದ್ದಾರೆ. ಕಾರು ದಾಖಲೆಗಳ ಪರಿಶೀಲನೆ ನಡೆಸಿದಾಗ ಮಾಲೀಕತ್ವದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ನೋಂದಣಿ ದಾಖಲೆಗಳು ಸರಿಯಿಲ್ಲದ ಕಾರಣ ಪೊಲೀಸರು ಆರ್‌ಟಿಒಗೆ ಪತ್ರ ಬರೆದಿದ್ದಾರೆ. ಅಲ್ಲದೆ,…