UPSC CMS 2026: 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಂಬಿಬಿಎಸ್ ಪದವೀಧರರಿಗೆ ಸುವರ್ಣಾವಕಾಶ!
ಕೇಂದ್ರ ಲೋಕಸೇವಾ ಆಯೋಗವು (UPSC) ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ (CMS) 2026ರ ಅಡಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಹುದ್ದೆಗಳ ವಿವರ ಮತ್ತು ಹಂಚಿಕೆ: ಒಟ್ಟು 1,300ಕ್ಕೂ ಅಧಿಕ ಹುದ್ದೆಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ: ವೈದ್ಯಕೀಯ ಅಧಿಕಾರಿ ದರ್ಜೆ (ಸಾಮಾನ್ಯ ಕರ್ತವ್ಯ): 864…