ಬೆಂಗಳೂರು: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ನಿಂದ ಕೋಟಿ ಕೋಟಿ ವಂಚನೆ ಆರೋಪ, 18 ಜನರ ವಿರುದ್ಧ ಪ್ರಕರಣ
ಬೆಂಗಳೂರು, ಮಾರ್ಚ್ 20: ಬೆಂಗಳೂರು (Bangalore) ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನಲ್ಲಿ ಅಸೋಸಿಯೇಷನ್ ಸದಸ್ಯರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಎಂಬವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್…