Headlines

ಕೋತಿ ಕಿತಾಪತಿಗೆ ಹೆಜ್ಜೇನು ದಾಳಿ: ಜೀವ ಬಿಟ್ಟ ಕಾರು ಶೋರೂಂ ಮೇಲ್ವಿಚಾರಕ!

ತುಮಕೂರು/ ರಾಯಚೂರು, ಮಾರ್ಚ್​​ 20: ಕೋತಿಯೊಂದು ಮಾಡಿದ ಕಿತಾಪತಿಗೆ ಓರ್ವ ಮೃತಪಟ್ಟಿದ್ದು ನಾಲ್ಕೈದು ಜನ ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕೋತಿ ಕೀಟಲೆ ಮಾಡಿದ ಹಿನ್ನೆಲೆ ಏಕಾಏಕಿ ಹಲವರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕಾರು ಶೋರೂಂ ಮೇಲ್ವಿಚಾರಕರಾಗಿದ್ದ ವಿಜಯ್ ಪ್ರಕಾಶ್(65) ಘಟನೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದು, ಕೆಲಸ ಮುಗಿಸಿ ನಿನ್ನೆ ಸಂಜೆ ಮನೆಗೆ ಬರುವಾಗ ಮಾರುತಿ ನಗರದ ಪಿಎನ್ ಟಿ ಕ್ವಾಟ್ರಸ್ ಬಳಿ ಮರದಲ್ಲಿದ್ದ ಹೆಜ್ಜೇನು ಹಲವರ ಜೊತೆ ಇವರ ಮೇಲೂ ದಾಳಿ ನಡೆಸಿತ್ತು….

Read More

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ನವದೆಹಲಿ, ಮಾರ್ಚ್ 20: ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್​ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ…

Read More

ಕೋಲ್ಕತ್ತಾದ ಆರ್​ಜಿಕರ್ ಆಸ್ಪತ್ರೆಯ ಲಿಫ್ಟ್​ನಲ್ಲಿ ಸಿಲುಕಿ ವ್ಯಕ್ತಿ ಸಾವು, ಮಗ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ, ಮಾರ್ಚ್​ 20: ಸದಾ ಒಂದಲ್ಲಾ ಒಂದು ಘಟನೆಯಿಂದ ಸುದ್ದಿಯಲ್ಲಿರುವ ಕೋಲ್ಕತ್ತಾ ಆರ್​ಜಿಕರ್ ಆಸ್ಪತ್ರೆಯ ಲಿಫ್ಟ್​​(Lift) ನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಅರೂಪ್ ಬಂಡೋಪಾಧ್ಯಾಯ ಎಂದು ಗುರುತಿಸಲಾಗಿದೆ. ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಪ್ರಕಾರ, ಮೃತರ ಮಗನ ಕಾಲಿನ ಮೂಳೆ ಮುರಿದಿದ್ದು, ಆರ್​​ಜಿ ಕರ್ ಕಾಲೇಜು, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅರೂಪ್ ಬಂಡೋಪಾಧ್ಯಾಯ ಶಸ್ತ್ರಚಿಕಿತ್ಸಾ ಕೊಠಡಿಯಿಂದ ಹಿಂದಿರುಗುತ್ತಿದ್ದಾಗ ಲಿಫ್ಟ್​ನಿಂದ ಕೆಳಗೆ ಹೋಗುತ್ತಿದ್ದರು. ಲಿಫ್ಟ್​ ಇದ್ದಕ್ಕಿದ್ದಂತೆ ನಿಂತಿತ್ತು, ಒಳಗೆ ಮೂವರು ಸಿಲುಕಿಕೊಂಡಿದ್ದರು. ಅರೂಪ್ ಬಹಳ…

Read More

ಶುಕ್ರವಾರ ಗರಿಗೆದರಿದ ಷೇರು ಬಜಾರು; ನಿನ್ನೆ ನೆಲಕಚ್ಚಿದ್ದ ಮಾರುಕಟ್ಟೆ ಇವತ್ತು ಚೇತರಿಸಿಕೊಂಡಿದ್ದು ಯಾಕೆ?

ನವದೆಹಲಿ, ಮಾರ್ಚ್ 20: ನಿನ್ನೆ ಯುಗಾದಿ ಹಬ್ಬದ ದಿನದಂದು ಹೂಡಿಕೆದಾರರಿಗೆ 12 ಲಕ್ಷ ಕೋಟಿ ರೂ ನಷ್ಟ ತಂದಿತ್ತು ಷೇರು ಮಾರುಕಟ್ಟೆ (Stock Market) ಇವತ್ತು ಹಸಿರು ಬಣ್ಣಕ್ಕೆ ತಿರುಗಿದೆ. ಸೆನ್ಸೆಕ್ಸ್, ನಿಫ್ಟಿ ಇತ್ಯಾದಿ ಪ್ರಧಾನ ಸೂಚ್ಯಂಕಗಳು ಗಳಿಕೆ ಕಂಡಿವೆ. ಸೆನ್ಸೆಕ್ಸ್ 1,016 ಅಂಕ ಗಳಿಸಿದೆ. ನಿಫ್ಟಿ50 ಸೂಚ್ಯಂಕ 288 ಅಂಕಗಳಷ್ಟು ಚೇತರಿಕೆ ಕಂಡಿದೆ. ಈ ವರದಿ ಬರೆಯುವ ವೇಳೆ, ಸೆನ್ಸೆಕ್ಸ್ 300ಕ್ಕೂ ಹೆಚ್ಚು ಅಂಕಗಳ ಗಳಿಕೆಯೊಂದಿಗೆ 74,530 ಮಟ್ಟದಲ್ಲಿತ್ತು. ನಿಫ್ಟಿ ಗಳಿಸಿದ ಅಂಕಗಳು ನೂರಕ್ಕಿಂತ ತುಸು…

Read More

ಹಸುಗೂಸು ಸಾವು ಕೇಸ್​​ಗೆ ಟ್ವಿಸ್ಟ್: ಹೆಣ್ಣುಮಗು ಎಂದು ವಿಷವುಣಿಸಿದ್ದ ತಂದೆ ಅರೆಸ್ಟ್​​

ಬೆಳಗಾವಿ, ಮಾರ್ಚ್​ 20: 15 ದಿನದ ಹಿಂದೆಯಷ್ಟೇ ಜನಿಸಿದ್ದ ಹಸುಗೂಸು (baby death) ಏಕಾಏಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿದ್ದು, ಸದ್ಯ ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಘಟನೆ ನಡೆದಿತ್ತು. ಕಾಕತಿ ಪೊಲೀಸ್​ ಠಾಣೆಗೆ ಮಗುವಿನ ತಾಯಿ ಶೀಲಾ ದೂರು ನೀಡಿದ್ದರು. ನಡೆದಿದ್ದೇನು? ಇತ್ತೀಚೆಗೆ ಅಂದರೆ ಮಾರ್ಚ್​ 17ರಂದು 15 ದಿನಗಳ ಹಿಂದೆ ಜನಿಸಿದ್ದ ಹಸುಗೂಸು…

Read More

50 ದಿನ ಪೂರೈಸಿದ ಖುಷಿಯಲ್ಲಿ ‘ಭಾರತಿ ಟೀಚರ್ 7ನೇ ತರಗತಿ’ ಸಿನಿಮಾ ತಂಡ

ಎಂ.ಎಲ್. ಪ್ರಸನ್ನ ಅವರು ನಿರ್ದೇಶನ ಮಾಡಿದ ‘ಭಾರತಿ ಟೀಚರ್ 7ನೇ ತರಗತಿ’ ಸಿನಿಮಾದಲ್ಲಿ ವಿಶೇಷ ಕಥಾಹಂದರ ಇದೆ. ಈ ಸಿನಿಮಾ ಬಿಡುಗಡೆಯಾಗಿ 50 ದಿನಗಳನ್ನು (50 Days) ಪೂರೈಸಿದೆ. ಕನ್ನಡದಲ್ಲಿ ಅರ್ಧ ಶತಕ ಪೂರೈಸಿದ 2026ರ ಮೊದಲ ಸಿನಿಮಾ ಎಂಬ ಖ್ಯಾತಿಗೆ ಈ ಸಿನಿಮಾ ಪಾತ್ರವಾಗಿದೆ. ಆ ಸಲುವಾಗಿ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಿತು. ವಿ. ನಾಗೇಂದ್ರ ಪ್ರಸಾದ್, ಧರ್ಮ ಕೀರ್ತಿರಾಜ್, ರವಿ ಗೌಡ, ಮೋಹನ್, ಜಡೇಶ್ ಕೆ. ಹಂಪಿ, ಓಂ ಪ್ರಕಾಶ್ ರಾವ್, ಚಕ್ರವರ್ತಿ…

Read More

ಕರ್ನಾಟಕದಿಂದ ಚಾರ್​​ ಧಾಮ್​​​ ಯಾತ್ರೆಗೆ ಹೋಗುವವರು ಈಗ ಪೂಜಾ ಫೀ ಎಷ್ಟು ಕೊಡಬೇಕು ಗೊತ್ತಾ?

ವಿಶ್ವಪ್ರಸಿದ್ಧ ಚಾರ್​​ ಧಾಮ್​ ಯಾತ್ರೆಗೂ ಮುನ್ನ ಬದ್ರಿನಾಥ್​​-ಕೇದಾರನಾಥ್​ ಟೆಂಪಲ್​​ ಕಮಿಟಿ (ಬಿಕೆಟಿಸಿ)ಯಿಂದ ಭಕ್ತರಿಗೆ ಮಹತ್ವದ ಮಾಹಿತಿ ನೀಡಲಾಗಿದೆ. ಉಭಯ ದೇಗುಲಗಳಲ್ಲಿ ವಿಶೇಷ ಪೂಜೆ ಮತ್ತು ಆರತಿಗಳ ಶುಲ್ಕವನ್ನು ಹೆಚ್ಚಿಸಲಾಗಿದ್ದು, ಬಿಕೆಟಿಸಿ ಸಭೆಯಲ್ಲಿ ಈ ನಿರ್ಧಾರವನ್ನು ಏಕಮತದಿಂದ ಅಂಗೀಕರಿಸಲಾಗಿದೆ. ಆದರೆ ಸಾಮಾನ್ಯ ದರ್ಶನ ಹಿಂದಿನಂತೆ ಉಚಿತವಾಗಿಯೇ ಮುಂದುವರಿಯಲಿದೆ. ಬಿಕೆಟಿಸಿ ನಿರ್ವಹಣೆಯಡಿ ಇರುವ ಈ ಎರಡೂ ಧಾಮಗಳಲ್ಲಿ ಪ್ರತಿದಿನ ಬೆಳಗ್ಗೆ-ಸಂಜೆ ವಿವಿಧ ಪೂಜೆಗಳು ಮತ್ತು ಆರತಿಗಳು ನಡೆಯುತ್ತವೆ. ಮಹಾಭಿಷೇಕ, ಅಭಿಷೇಕ, ಭೋಗ, ಅಖಂಡ ಜ್ಯೋತಿ ಸೇರಿದಂತೆ ಅನೇಕ ಧಾರ್ಮಿಕ ವಿಧಿಗಳು…

Read More

Video: ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಂಡೀಗಢದ ಜನನಿಬಿಡ ಪ್ರದೇಶವಾದ ಸೆಕ್ಟರ್-9ರಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ನ್ಯೂ ಚಂಡೀಗಢದ ನಿವಾಸಿ ಚಿನ್ನಿ ಖುಭೇರಿ ಎಂಬುವವರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೆಕ್ಟರ್-9ರಲ್ಲಿರುವ ‘ಬಾಡಿ ಝೋನ್’ (Body Zone) ಜಿಮ್‌ನ ಹೊರಗಡೆ ಈ ಘಟನೆ ಸಂಭವಿಸಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಚಿನ್ನಿ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಚಂಡೀಗಢ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದಾಳಿಕೋರರು ಕೃತ್ಯ ಎಸಗಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ….

Read More

ಬೆಂಗಳೂರು: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ನಿಂದ ಕೋಟಿ ಕೋಟಿ ವಂಚನೆ ಆರೋಪ, 18 ಜನರ ವಿರುದ್ಧ ಪ್ರಕರಣ

ಬೆಂಗಳೂರು, ಮಾರ್ಚ್ 20: ಬೆಂಗಳೂರು (Bangalore) ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನಲ್ಲಿ ಅಸೋಸಿಯೇಷನ್ ಸದಸ್ಯರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಎಂಬವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್…

Read More

ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್

ನವದೆಹಲಿ, ಮಾರ್ಚ್​ 20: ಯುದ್ಧಭೂಮಿಯಲ್ಲಿ ಗೆಲ್ಲಲಾಗದೆ ಒಪ್ಪಂದವನ್ನು ಮಾಡಿಕೊಂಡ ರಾಷ್ಟ್ರಗಳಿಗೆ ರಕ್ಷಣೆಯನ್ನೂ ನೀಡಲಾಗದೆ ಅತಂತ್ರವಾಗಿರುವ ಪಾಕಿಸ್ತಾನ(Pakistan)ವು ಇರಾನ್ ಹಾಗೂ ಭಾರತದ ನಡುವೆ ವೈಷಮ್ಯವನ್ನು ಹುಟ್ಟುಹಾಕಲು ಕುತಂತ್ರ ನಡೆಸುತ್ತಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಅಮೆರಿಕದ ಸೇನೆಯು ಇರಾನ್​ನ ಯುದ್ಧನೌಕೆ ಐರಿಸ್ ಡೇನಾವನ್ನು ಹೊಡೆದುಹಾಕಿತ್ತು, ಇದು ಭಾರತದಲ್ಲಿ ಸಮರಭ್ಯಾಸ ನಡೆಸಿಕೊಂಡು ಇರಾನ್​​ನತ್ತ ಹೊರಟಿದ್ದ ಯುದ್ಧನೌಕೆಯಾಗಿತ್ತು. ಶ್ರೀಲಂಕಾದ ಬಳಿಯ ಹಿಂದೂ ಮಹಾಸಾಗರದಲ್ಲಿ ಈ ಅವಘಡ ಸಂಭವಿಸಿತ್ತು. ಇರಾನ್​ ಇಸ್ರೇಲ್ ಅಮೆರಿಕ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿಯೂ ಯುದ್ಧದ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ಅಫ್ಘಾನಿಸ್ತಾನ…

Read More