ಸುಬ್ರಹ್ಮಣ್ಯಕ್ಕೆ ಹೋಗುವ ಭಕ್ತರ ಗಮನಕ್ಕೆ: ಬೆಂಗಳೂರು – ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ
ಮಂಗಳೂರು, ಮಾರ್ಚ್ 19: ನೈಋತ್ಯ ರೈಲ್ವೆಯಲ್ಲಿ ಭಾರೀ ಬದಲಾವಣೆಯನ್ನು ಇಲಾಖೆ ತಂದಿದೆ. ತುರ್ತು ಹಳಿ ನಿರ್ವಹಣಾ ಕಾರ್ಯ ನಿಗದಿಯಾಗಿರುವುದರಿಂದ, ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ಮಾರ್ಗವಾಗಿ ಸಂಚಾರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಮತ್ತು ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಪ್ಯಾಸೆಂಜರ್)…