ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ
ನವದೆಹಲಿ, ಮಾರ್ಚ್ 19: ಇರಾನ್ ಯುದ್ಧದ ಪರಿಣಾಮ ದೇಶದಲ್ಲಿ ಎಲ್ಪಿಜಿ ಬಿಕ್ಕಟ್ಟು ಉದ್ಭವಿಸಿರುವ ಬೆನ್ನಲ್ಲೇ ಸರ್ಕಾರ ಇಂಧನ ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇಂಧನ ದತ್ತಾಂಶ ಅಥವಾ ಎನರ್ಜಿ ಡಾಟಾವನ್ನು ರಾಷ್ಟ್ರೀಯ ಭದ್ರತೆಯ ವಿಚಾರವೆಂದು ಸರ್ಕಾರ ವರ್ಗೀಕರಿಸಿದೆ. ತೈಲ ಮತ್ತು ಅನಿಲ ಕ್ಷೇತ್ರದಲ್ಲಿ ನಿರತವಾಗಿರುವ ಎಲ್ಲಾ ಸಂಸ್ಥೆಗಳೂ ಕೂಡ ತಮ್ಮ ಕಾರ್ಯಾಚರಣೆಯ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ಕಡ್ಡಾಯಪಡಿಸಲಾಗಿದೆ. ತೈಲ ಸಚಿವಾಲಯವು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮಾಹಿತಿ ಸಲ್ಲಿಕೆ ಆದೇಶ 2026ರ -Petroleum and Natural…