ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಮಕ್ಕಳು ಬಚಾವ್
ಮೈಸೂರು, ಮಾರ್ಚ್ 18: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಸುಮಾರು 1 ಗಂಟೆಗೂ ಹೆಚ್ಚು ಸಮಯ ವರುಣ ಅಬ್ಬರಿಸಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಮಂದಿಗೆ ತಂಪಿನ ಅನುಭವವಾಗಿದೆ. ಈ ನಡುವೆ ಭಾರೀ ಗಾಳಿ ಮಳೆ ವೇಳೆ ಹುಣಸೂರು ತಾಲೂಕಿನ ದಾಸನಪುರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಮಕ್ಕಳು ತರಗತಿಯಲ್ಲಿದ್ದ ಹೊತ್ತಲ್ಲೇ ಗಾಳಿ ಮಳೆಗೆ ಶಾಲೆಯ ಮೇಲ್ಚಾವಣಿ ಹಾರಿ ಹೋಗಿದ್ದು, ಈ ವೇಳೆ ಸಮಯಪ್ರಜ್ಞೆ ಮೆರೆದ ಶಿಕ್ಷಕಿ ಸುಮಾ ಎಲ್ಲ ವಿದ್ಯಾರ್ಥಿಗಳನ್ನು ಡೆಸ್ಕ್ ಕೆಳಗೆ ಕೂರಿಸಿದ್ದಾರೆ….