ಬೆಂಗಳೂರು ಟ್ರಾಫಿಕ್‌ಗೆ ಡಿಕೆಶಿ ಮಾಸ್ಟರ್ ಪ್ಲಾನ್: ಚಾಮರಾಜಪೇಟೆ TO ಕೆಂಗೇರಿ 810 ಕೋಟಿ ರೂ. ವೆಚ್ಚದ ಮೇಲ್ಸೇತುವೆ ಯೋಜನೆ!
ಬೆಂಗಳೂರು, ಮಾ.18: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಸಮಯದಲ್ಲಿ ಶಾಸಕರು ಕೇಳಿದ ಹಲವು ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ. ಈ ಮೂಲಕ ಒಂದು ಐತಿಹಾಸಿಕ ವಿಚಾರದ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಹಾಗೂ ಈಗಾಗಲೇ ಮಾಡುತ್ತಿರುವ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು ಕಳೆದ…