ಬೆಂಗಳೂರು: ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಹೂವು-ಹಣ್ಣಿನ ದರ ಏರಿಕೆ
ಬೆಂಗಳೂರು, ಮಾರ್ಚ್ 18: ಮಾರ್ಚ್ 19 ರಂದು ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ (Bangalore) ಹೃದಯಭಾಗವಾದ ಕೆಆರ್ ಮಾರುಕಟ್ಟೆಯಲ್ಲಿ (KR Market) ಬುಧವಾರ ಬೆಳ್ಳಂಬೆಳಿಗ್ಗೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಗರವೇ ಹರಿದುಬಂದಿದೆ. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ದರ ಕೊಂಚ ಏರಿಕೆ ಕಂಡಿದೆ. ವಿಶೇಷವಾಗಿ ಮಲ್ಲಿಗೆ ಹೂವು ಸಾಮಾನ್ಯ…