ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು
ನವದೆಹಲಿ, ಮಾರ್ಚ್ 17: ಅಲಿಘರ್ ರೈಲು ನಿಲ್ದಾಣದಲ್ಲಿ ಯಾರೂ ಊಹಿಸದ ಘಟನೆಯೊಂದು ನಡೆದಿದೆ. ರೈಲು ಇನ್ನೇನು ಸ್ಟೇಷನ್ಗೆ ತಲುಪಬೇಕು ಎನ್ನುವಷ್ಟರಲ್ಲಿ ತನ್ನ ಮಗಳ ಜೊತೆ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ರೈಲು ಹಳಿ ಮೇಲೆ ಹಾರಿದ್ದಳು. ಆತ್ಮಹತ್ಯೆಗೆ ಯತ್ನಿಸಿದ ಆಕೆಯ ಹಿಂದೆಯೇ ಓಡಿದ 7 ವರ್ಷದ ಮಗಳು ಅಮ್ಮಾ ಬೇಡಮ್ಮಾ ಎನ್ನುತ್ತಾ ಕೂಗತೊಡಗಿದ್ದಾಳೆ. ಆಕೆಯ ಕಿರುಚಾಟ ಕೇಳಿದ ನಂತರ ಇತರ ಪ್ರಯಾಣಿಕರು ಮತ್ತು ಜಿಆರ್‌ಪಿ ಸಿಬ್ಬಂದಿ ಓಡಿ ಬಂದು ಆ ಮಹಿಳೆಯನ್ನು ಕಾಪಾಡಿದ್ದಾರೆ. ಮನೆಯಲ್ಲಿನ ಕೌಟುಂಬಿಕ ಹಿಂಸಾಚಾರದಿಂದ ನೊಂದಿದ್ದ…