ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!
ಕಾಬೂಲ್, ಮಾ.17: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಕಾಬೂಲ್‌ನಲ್ಲಿರುವ ಮಾದಕ ವ್ಯಸನಿಗಳ ಪುನರ್ವಸತಿ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 400 ಮಂದಿ ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರ ತಿಳಿಸಿದೆ. ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಕಾಬೂಲ್‌ನಲ್ಲಿರುವ ‘ಓಮಿದ್’ (Omid) ಹೆಸರಿನ 2,000 ಹಾಸಿಗೆಗಳ ಸಾಮರ್ಥ್ಯದ ಮಾದಕ ವ್ಯಸನಿಗಳ ಚಿಕಿತ್ಸಾ ಆಸ್ಪತ್ರೆಯ ಮೇಲೆ ಈ ದಾಳಿ ನಡೆದಿದೆ. ಆಸ್ಪತ್ರೆಯ ಬಹುಪಾಲು ಕಟ್ಟಡಗಳು ಧ್ವಂಸವಾಗಿದ್ದು,…