ಹಿಂದೆ ನಿಂತಿದ್ದ ನಟನ ಕಂಡು ಶ್ರೀಲೀಲಾ ಗರಂ? ವೈರಲ್ ವಿಡಿಯೋದ ಅಸಲಿ ಕಥೆ ಇಲ್ಲಿದೆ
ನಟ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ‘ಉಸ್ತಾದ್ ಭಗತ್ ಸಿಂಗ್’ (Ustaad Bhagat Singh) ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಹರೀಶ್ ಶಂಕರ್ ನಿರ್ದೇಶನದ ಈ ಸಿನಿಮಾ ಮಾರ್ಚ್ 19ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲಿದೆ. ಈ ಸಿನಿಮಾದ ಪ್ರಿ-ರಿಲೀಸ್ ಇವೆಂಟ್ ಇತ್ತೀಚೆಗೆ ಹೈದರಾಬಾದ್‌ನಲ್ಲಿ ಬಹಳ ವೈಭವದಿಂದ ನಡೆಯಿತು. ಅದರಲ್ಲಿ ನಟಿ ಶ್ರೀಲೀಲಾ ಕೂಡ ಭಾಗಿ ಆಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಶ್ರೀಲೀಲಾ (Sreeleela) ಅವರ ವಿಡಿಯೋವೊಂದು ಸಖತ್ ವೈರಲ್ ಆಗಿದೆ. ಅದರ ಅಸಲಿ ವಿಷಯ ಏನು ಎಂಬುದು…