Headlines

IPL ​ನಲ್ಲಿ ಮಹತ್ವದ ಬದಲಾವಣೆ: ಒಂದು ತಂಡಕ್ಕೆ ಎಷ್ಟು ಪಂದ್ಯಗಳು?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯಂತೆ ಈ ಬಾರಿಯ ಐಪಿಎಲ್​ ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಇತ್ತ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದರೂ ಬಿಸಿಸಿಐ ಇನ್ನೂ ಕೂಡ ಫಾರ್ಮ್ಯಾಟ್​ನ ಸ್ವರೂಪವನ್ನು ಬಹಿರಂಗಪಡಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಲೀಗ್​ ಹಂತದಲ್ಲಿ ಎಷ್ಟು ಮ್ಯಾಚ್​ಗಳನ್ನು ಆಡಲಾಗುತ್ತದೆ…

Read More

Karnataka LPG Gas Shortage: ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್

ಬೆಂಗಳೂರು, ಮಾರ್ಚ್​ 16: ಕರ್ನಾಟಕದಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತೈಲ ಪೂರೈಕೆಯಲ್ಲಿನ ಸಮಸ್ಯೆಯು ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಹಲವು ವರ್ಷಗಳ ಇತಿಹಾಸವಿರುವ ಎಮ್​ಟಿಆರ್​ನಂತಹ ಪ್ರತಿಷ್ಠಿತ ಹೋಟೆಲ್‌ಗಳು ಗ್ಯಾಸ್ ಅಭಾವದಿಂದಾಗಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಅಥವಾ ಮೆನುಗಳನ್ನು ಮೊಟಕುಗೊಳಿಸುವ ಪರಿಸ್ಥಿತಿ ಎದುರಿಸುತ್ತಿವೆ. ಬನಶಂಕರಿಯ ಫುಡ್ ಸ್ಟ್ರೀಟ್‌ಗಳು ಮತ್ತು ಮಲ್ಲೇಶ್ವರಂನ ಹೋಟೆಲ್‌ಗಳಲ್ಲಿ ಜನಸಂದಣಿ ಕಡಿಮೆಯಾಗಿದೆ. ಈ ಬಿಕ್ಕಟ್ಟಿನ ನಡುವೆ, ವಾಣಿಜ್ಯ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿವೆ….

Read More

ಇರಾನ್​-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ

ಕೋಲಾರ, ಮಾರ್ಚ್ 16: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಮಧ್ಯಪ್ರಾಚ್ಯಕ್ಕೆ ಸೀಮಿತವಾಗದೆ, ಅದರ ಆರ್ಥಿಕ ಪರಿಣಾಮಗಳು ಕರ್ನಾಟಕಕ್ಕೂ ತಟ್ಟಿದೆ. ಕರ್ನಾಟಕದ ಹೋಟೆಲ್ ಉದ್ಯಮದ ಬೆನ್ನಲ್ಲೇ ಇದೀಗ ಕೃಷಿ ವಲಯಕ್ಕೂ ಯುದ್ಧದ ಬಿಸಿ ತಟ್ಟಲು ಶುರುವಾಗಿದೆ. ಯುದ್ಧದ ಕಾರಣದಿಂದಾಗಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಗಳು ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವನ್ನುಂಟು ಮಾಡಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರಮುಖ ನಗರಗಳಲ್ಲಿ ಮತ್ತು ಕೋಲಾರದಂತಹ (Kolar) ಜಿಲ್ಲೆಗಳಲ್ಲಿಯೂ ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಇದು ತರಕಾರಿಗಳ…

Read More

Varun Chakravarthy: ‘ಮಲ್ಲು’ ಇದ್ದರೆ ಕಪ್ ನಮ್ಮದೇ..!

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಜಯಭೇರಿಯೊಂದಿಗೆ ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿ ಹಿಡಿದಿದೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ. ಈ ವಿಶೇಷ ಸಾಧನೆ ಮಾಡಿದ ಚಾಂಪಿಯನ್ ತಂಡವನ್ನು ಭಾನುವಾರ (ಮಾ.15) ದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಅವಾರ್ಡ್ಸ್​ನಲ್ಲಿ ಗೌರವಿಸಲಾಗಿದೆ. ಈ ವೇಳೆ ಮಾತನಾಡಿದ ವರುಣ್ ಚಕ್ರವರ್ತಿ, ‘ಮಲ್ಲು’ ಪ್ರಸಂಗವನ್ನು ತೆರೆದಿಟ್ಟಿದ್ದಾರೆ. ಚಾಂಪಿಯನ್ ಪಟ್ಟ ಅಲಂಕರಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವರುಣ್…

Read More

Oscars 2026: ಈ ಬಾರಿ ಆಸ್ಕರ್ ಅವಾರ್ಡ್​ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

98ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆದಿದೆ. ಹಾಲಿವುಡ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಹಾಲಿವುಡ್ ಚಿತ್ರರಂಗದ ಪಾಲಿಗೆ ವಿಶೇಷ ಎನಿಸಿಕೊಂಡಿದೆ. ಭಾರತದ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕರು ಇಲ್ಲಿ ಭಾಗಿ ಆಗಿದ್ದರು. ಈ ವೇಳೆ ವಿವಿಧ ಸಿನಿಮಾಗಳಿಗೆ ಅವಾರ್ಡ್ ನೀಡಲಾಯಿತು. ‘ಸಿನ್ನರ್ಸ್’ ಸಿನಿಮಾ ಬರೋಬ್ಬರಿ 16 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಆಸ್ಕರ್ ಅವಾರ್ಡ್ ಇತಿಹಾಸದಲ್ಲಿ ಚಿತ್ರವೊಂದು ಇಷ್ಟು ನಾಮಿನೇಟ್…

Read More

ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ

ನವದೆಹಲಿ, ಮಾರ್ಚ್ 16: ಇಂದು ಸೋಮವಾರ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Rajya Sabha polls) ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಲಿದ್ದಾರೆ. ಉಳಿದ 11 ಅಭ್ಯರ್ಥಿಗಳ ಆಯ್ಕೆಯು ಮತದಾನದ ಮೂಲಕ ನಿರ್ಧಾರ ಆಗಲಿದೆ. ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಆಗಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಚುನಾವಣೆ ಎದುರಿಸುತ್ತಿರುವ 37 ರಾಜ್ಯಸಭಾ ಸ್ಥಾನಗಳು ಮಹಾರಾಷ್ಟ್ರ: 7 ತಮಿಳುನಾಡು: 6 ಪಶ್ಚಿಮ…

Read More

ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ

ಆನೇಕಲ್, ಮಾರ್ಚ್ 16: ಬೆಂಗಳೂರಿನ ಸಮೀಪದ ಬನ್ನೇರುಘಟ್ಟ ಮೃಗಾಲಯದಲ್ಲಿ (Bannerghatta Biological Park) ಹೊಸ ಅತಿಥಿಗಳ ಆಗಮನದಿಂದ ಸಂತಸದ ವಾತಾವರಣ ನಿರ್ಮಾಣವಾಗಿದೆ. ಉದ್ಯಾನವನದಲ್ಲಿರುವ ಎರಡು ಜೀಬ್ರಾಗಳು ಮರಿಗಳಿಗೆ ಜನ್ಮ ನೀಡಿದ್ದು, ಪ್ರಾಣಿ ಪ್ರಿಯರಲ್ಲಿ ಸಂತೋಷ ಮೂಡಿಸಿದೆ. ಉದ್ಯಾನವನದಲ್ಲಿರುವ ಕೋಕಿಲ ಎಂಬ ಜೀಬ್ರಾ ಹೆಣ್ಣು ಮರಿಗೆ ಜನ್ಮ ನೀಡಿದ್ದು, ಕಾವೇರಿ ಎಂಬ ಮತ್ತೊಂದು ಜೀಬ್ರಾ ಕೂಡ ಹೆಣ್ಣು ಮರಿಗೆ ಜನ್ಮ ನೀಡಿದೆ. ಈ ಮೂಲಕ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಜೀಬ್ರಾಗಳ ಸಂಖ್ಯೆ ಇದೀಗ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಉದ್ಯಾನವನದಲ್ಲಿರುವ…

Read More

IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ ಗೌರವ!

IPL 2026: ಐಪಿಎಲ್‌ನ ಹಾಲಿ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿ ತನ್ನ ಜೆರ್ಸಿಯ ಮೇಲೆ ಚಿನ್ನದ ಬಣ್ಣದ ಐಪಿಎಲ್ ಲೋಗೋ (Golden IPL Logo) ಧರಿಸಲಿದೆ. ಇನ್ನುಳಿದ 9 ತಂಡಗಳು ಸಾಧಾರಣ ಐಪಿಎಲ್ ಲೋಗೋನಲ್ಲಿ ಕಾಣಿಸಿಕೊಳ್ಳಲಿದೆ. ಐಪಿಎಲ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ತಂಡವನ್ನು ಗೌರವಿಸಲು ಈ ವಿಶೇಷ ಸಂಪ್ರದಾಯವನ್ನು ಅನುಸರಿಸಲಾಗುತ್ತಿದೆ. ಅದರಂತೆ ಕಳೆದ ಬಾರಿಯ ಚಾಂಪಿಯನ್ ಆರ್​ಸಿಬಿ ತಂಡವು ಈ ಬಾರಿ ಗೋಲ್ಡನ್ ಐಪಿಎಲ್ ಲೋಗೋದೊಂದಿಗೆ ಕಣಕ್ಕಿಳಿಯಲಿದೆ. ಹಾಗೆಯೇ ಈ ಬಾರಿಯ…

Read More

ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಬೆಂಗಳೂರು, ಮಾರ್ಚ್ 16: ನಮ್ಮ ಮೆಟ್ರೋ (Namma Metro) ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ (BMRCL) ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಶುರು ಮಾಡಲು ಸಿದ್ಧತೆ ಶುರುಮಾಡಿದೆ. ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಭಾನುವಾರ ಬಂದಿಳಿದಿದೆ. ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ಅನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲನ್ನು ಪ್ರಸ್ತುತ…

Read More

ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದ್ದು, ಇದಕ್ಕೆ ಡಾಲಿ ನಿರ್ಮಾಣ ಇದೆ ಎನ್ನಲಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More