Karnataka Weather: ರಾಜ್ಯದ ಹಲವೆಡೆ ತಂಪೆರೆದ ವರುಣ; ನಾಳೆಯೂ ಈ ಭಾಗಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಮಾರ್ಚ್ 15: ರಾಜ್ಯದ ಬಹುತೇಕ ಜಿಲ್ಲೆಗಳ ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು ಅಕಾಲಿಕವಾಗಿ ಸುರಿದ ಮಳೆ ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ ನಡೆದಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಸದಾಶಿವ ನಗರ, ನೆಹರು ನಗರ, ಶಾಹು ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಕೊಡಗಿನ ಹಲವೆಡೆಯೂ ಧಾರಾಕಾರ ಮಳೆಯಾಗಿದ್ದು, ಸುಡು ಬಿಸಿಲಿನ ಸಂದರ್ಭ…