Headlines

ಇಂದು ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣಾ ವೇಳಾಪಟ್ಟಿ ಘೋಷಣೆ ಸಾಧ್ಯತೆ

ನವದೆಹಲಿ, ಮಾರ್ಚ್​ 15:ಭಾರತ ಚುನಾವಣಾ ಆಯೋಗವು (ECI) ಇಂದು(ಮಾರ್ಚ್​ 15) ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ(Assembly Election)ಯ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.ಇದು ದೇಶಾದ್ಯಂತ ಪ್ರಮುಖ ಚುನಾವಣಾ ಸ್ಪರ್ಧೆಗೆ ವೇದಿಕೆಯನ್ನು ಸಿದ್ಧಪಡಿಸುತ್ತದೆ. ಚುನಾವಣಾ ಆಯೋಗವು ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ. ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ, ಏಕೆಂದರೆ ಆ ವೇಳೆಗೆ ಹಲವಾರು ರಾಜ್ಯಗಳ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳಲಿದೆ….

Read More

ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು

ಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ 17ರ ಸ್ಪರ್ಧಿ ಅನುರಾಗ್ ದೊಭಾಲ್ (Anurag Dobhal) ಅಲಿಯಾಸ್ ಯುಕೆ 07 ರೈಡರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇತ್ತೀಚೆಗಷ್ಟೇ ಅವರನ್ನು ಐಸಿಯುನಿಂದ ಹೊರತಂದು ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಆದರೆ ಈಗ ಅವರನ್ನು ಮತ್ತೆ ಐಸಿಯುಗೆ (ICU) ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಅಪಘಾತಕ್ಕೀಡಾಗಿದ್ದ ಅವರ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿರುವುದೇ ಇದಕ್ಕೆ ಕಾರಣ ಎಂದು ಅವರ ಮ್ಯಾನೇಜರ್ ತಿಳಿಸಿದ್ದಾರೆ. ಅನುರಾಗ್ ಅವರ ಮ್ಯಾನೇಜರ್ ರೋಹಿತ್ ಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ…

Read More

ಐಪಿಎಲ್​ನಿಂದ ಆಫರ್… ಪಿಎಸ್​ಎಲ್​ಗೆ ಕೈಕೊಟ್ಟ ವಿಂಡೀಸ್ ಆಟಗಾರ

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ ಹಿಂದೆ ಸರಿದಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣ ನೀಡದಿದ್ದರೂ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಸಿಕ್ಕ ಆಫರ್​ನಿಂದಾಗಿ ಗುಡಕೇಶ್ ಮೋಟಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಗುಡಕೇಶ್ ಮೋಟಿ ಅವರನ್ನು ಲಾಹೋರ್ ಖಲಂದರ್ಸ್ ಫ್ರಾಂಚೈಸಿಯು ₹1.1 ಕೋಟಿಗೆ (PKR) ಖರೀದಿಸಿತ್ತು. ಆದರೀಗ ಪಿಎಸ್​ಎಲ್​ ಶುರುವಾಗಲು 10 ದಿನಗಳಿರುವಾಗ ವೆಸ್ಟ್ ಇಂಡೀಸ್ ಸ್ಪಿನ್ನರ್ ಟೂರ್ನಿಯಿಂದ…

Read More

ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ (13 ಮಾರ್ಚ್ 2026) ನಡೆದ ಸಲ್ಮಾನ್ ಅಲಿ ಅಘಾ ಅವರ ವಿವಾದಾತ್ಮಕ ರನ್-ಔಟ್ ಬಗ್ಗೆ ಪಾಕ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಢಾಕಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊಹಮ್ಮದ್ ರಿಝ್ವಾನ್ ಹೊಡೆದ ಚೆಂಡನ್ನು ತಡೆಯಲು ಬೌಲರ್ ಮೆಹದಿ ಹಸನ್ ಮಿರಾಝ್ ಪ್ರಯತ್ನಿಸಿದರು. ಈ ವೇಳೆ ಕ್ರೀಸ್​ನಿಂದ ಹೊರಗಿದ್ದ ಅಘಾ ಚೆಂಡು ಬೌಲರ್‌ಗೆ ನೀಡಲು ಮುಂದಾಗಿದ್ದರು. ಸಲ್ಮಾನ್ ಅಲಿ ಅಘಾ ಅವರು ಚೆಂಡನ್ನು…

Read More

ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ

ನಟ ಧ್ರುವ ಸರ್ಜಾ ಅವರು ‘ಕೆಡಿ’ ಸಿನಿಮಾದ (KD Movie) ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಹೊಸ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಅದರಲ್ಲಿ ಭಾಗಿಯಾದ ಧ್ರುವ ಸರ್ಜಾ (Dhruva Sarja) ಅವರಿಗೆ ಹಲವು ಪ್ರಶ್ನೆಗಳು ಎದುರಾದವು. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುವುದು ಯಾಕೆ ಎಂಬುದನ್ನು ಕೂಡ ಅವರ ವಿವರಿಸಿದರು. ‘ಈ ಗೆಜೆಟ್ಸ್ ಯುಗದಲ್ಲಿ ಪರಸ್ಪರ ಭೇಟಿ ಆಗುವುದೇ ಕಡಿಮೆ ಆಗಿದೆ. ಹಾಗಾಗಿ ನನ್ನನ್ನು ಇಷ್ಟಪಡುವ ಜನರನ್ನು ನಾನು ಪ್ರತಿ ಭಾನುವಾರ…

Read More

ಐಪಿಎಲ್​ ಆರಂಭಕ್ಕೂ ಮುನ್ನವೇ ಹೊಸ ಕಂಡೀಷನ್ ಹಾಕಿದ ರೋಹಿತ್ ಶರ್ಮಾ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಇತ್ತ ಎಲ್ಲಾ ಫ್ರಾಂಚೈಸಿಗಳು ಪ್ರೀ ಸೀಸನ್ ಕ್ಯಾಂಪ್ ಶುರು ಮಾಡಿದೆ. ಈ ಕ್ಯಾಂಪ್​ಗೆ ಸೇರುವ ಮುನ್ನವೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್​ಗೆ ಹೊಸ ಕಂಡೀಷನ್ ಹಾಕಿದ್ದಾರೆ ಎಂದು ವರದಿಯಾಗಿದೆ. ಆ ಕಂಡೀಷನ್ ಏನೆಂದರೆ ‘ ನೋ ಇಂಪ್ಯಾಕ್ಟ್ ಪ್ಲೇಯರ್’. ಅಂದರೆ ಐಪಿಎಲ್ 2026 ರಲ್ಲಿ ‘ಇಂಪ್ಯಾಕ್ಟ್ ಪ್ಲೇಯರ್’ ಆಗಿ ಆಡಲು ರೋಹಿತ್ ಶರ್ಮಾ ನಿರಾಕರಿಸಿದ್ದಾರೆ. ಈ ಬಗ್ಗೆ ಅವರು ಮುಂಬೈ ಇಂಡಿಯನ್ಸ್  ಮ್ಯಾನೇಜ್‌ಮೆಂಟ್‌ಗೆ ಸ್ಪಷ್ಟ…

Read More

ಇಸ್ರೇಲ್-ಇರಾನ್ ಯುದ್ಧ ಪರಿಣಾಮ: ಯಾದಗಿರಿ ಆಯ್ತು ಈಗ ರಾಯಚೂರಿನ ರೈಸ್ ಮಿಲ್​ಗಳಿಗೂ ಆರ್ಥಿಕ ಸಂಕಷ್ಟ!

ರಾಯಚೂರು, ಮಾರ್ಚ್ 15: ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ, ಕರ್ನಾಟಕದ ಭತ್ತದ ನಾಡು ರಾಯಚೂರಿನ ರೈಸ್ ಮಿಲ್‌ಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ವಿದೇಶಗಳಿಗೆ ರಫ್ತಾಗುತ್ತಿದ್ದ ಅಪಾರ ಪ್ರಮಾಣದ ಅಕ್ಕಿ ಸಾಗಾಟ ಸಂಪೂರ್ಣ ಸ್ಥಗಿತಗೊಂಡಿದ್ದು, ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಆತಂಕ ವ್ಯಕ್ತಪಡಿಸಿದೆ. ರಾಯಚೂರಿನಿಂದ ಯುರೋಪ್, ಅರಬ್, ಆಫ್ರಿಕಾ ಮತ್ತು ಅಮೆರಿಕ ಸೇರಿದಂತೆ ಹಲವು ದೇಶಗಳಿಗೆ ಸೋನಾಮಸೂರಿ ಮತ್ತು ಆರ್.ಎನ್.ಆರ್‌ನಂತಹ ಉತ್ತಮ ಗುಣಮಟ್ಟದ ಅಕ್ಕಿ ರಫ್ತಾಗುತ್ತಿತ್ತು. ಸದ್ಯ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದರಿಂದ ಲಕ್ಷಾಂತರ ಟನ್ ಅಕ್ಕಿ ಮಿಲ್‌ಗಳಲ್ಲಿ ದಾಸ್ತಾನಾಗಿದೆ. ಇದು…

Read More

ತುಳುನಾಡಿನಲ್ಲೇ ದೈವಕ್ಕೆ ಅಪಚಾರ? ಕ್ರಿಶ್ಚಿಯನ್ ಹುಡುಗನಿಂದ ದೈವ ನರ್ತನ ಆರೋಪ!

ಮಂಗಳೂರು, ಮಾರ್ಚ್​ 15: ತುಳುನಾಡಿನ ಪ್ರಸಿದ್ಧ ದೈವಾರಾಧನೆಯ ದೈವ ನರ್ತನ (Daiva Nartana)ಇದೀಗ ಭಾರೀ ವಿವಾದದಕ್ಕೆ ಕಾರಣವಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ವೇಳೆ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ ತುಳುನಾಡಿನ ದೈವಾರಾಧನೆ ಪರಂಪರೆಯ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ತಂದೆ ಹಿಂದೂ, ತಾಯಿ ಕ್ರಿಶ್ಚಿಯನ್! ಜನವರಿ 31ರಂದು ಮಂಗಳೂರಿನ ಪ್ರಸಿದ್ಧ ದೈವಕ್ಷೇತ್ರದಲ್ಲಿ ಶ್ರೀ ಜಾರಂದಾಯ ಹಾಗೂ ಬಂಟ ದೈವಕ್ಕೆ ನೇಮೋತ್ಸವ…

Read More

ಬೆಂಗಳೂರು: ಯುವತಿಗೆ ಕಿರುಕುಳ ಕೊಟ್ಟು ಹಲ್ಲೆಗೆ ಯತ್ನ, ಸಿಸಿಟಿವಿಲಿ ಸೆರೆಯಾಯ್ತು ಯುವಕನ ಅಟ್ಟಹಾಸದ ವಿಡಿಯೋ

ಬೆಂಗಳೂರು, ಮಾರ್ಚ್ 15: ಬೆಂಗಳೂರಿನ ಇಂದಿರಾನಗರದಲ್ಲಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಯುವತಿಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದೊಮ್ಮಲೂರು ಪ್ರದೇಶದಲ್ಲಿರುವ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಯುವತಿಗೆ ಮನು ಶರ್ಮಾ ಎಂಬಾತ ಪ್ರತಿದಿನವೂ ಕಿರುಕುಳ ನೀಡುತ್ತಿದ್ದ. ತನ್ನೊಂದಿಗೆ ಸಂಬಂಧ ಇಟ್ಟುಕೊಳ್ಳುವಂತೆ ಒತ್ತಾಯ ಮಾಡುತ್ತಿದ್ದ ಆರೋಪಿಯು, ಯುವತಿ ಅದಕ್ಕೆ ಒಪ್ಪದಿದ್ದಾಗ ಆಕೆಯೊಂದಿಗೆ ಗಲಾಟೆ ನಡೆಸಿದ್ದಾನೆ. ಯುವತಿ ಮಾತ್ರವಲ್ಲದೆ, ಆಕೆಯ ಸ್ನೇಹಿತೆಯೊಂದಿಗೆ ಸಹ ಆರೋಪಿಯು ಜಗಳವಾಡಿ ಕಿರುಕುಳ ನೀಡಿದ್ದಾನೆ ಎಂಬ ಆರೋಪವಿದೆ….

Read More

ಟೀಮ್ ಇಂಡಿಯಾ ಆಟಗಾರರಿಗೆ ಈ ವಿಷಯದಲ್ಲಿ ‘ಹೊಟ್ಟೆಕಿಚ್ಚು’ ಇದೆ!

ಟೀಮ್ ಇಂಡಿಯಾದ ಆರಂಭಿಕ ಜೋಡಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಮತ್ತೆ ಜೊತೆಯಾಗಿದ್ದಾರೆ. ಆದರೆ ಈ ಬಾರಿ ಮೈದಾನದಲ್ಲಿ ಅಲ್ಲ. ಬದಲಾಗಿ ಖಾಸಗಿ ಕಾರ್ಯಕ್ರಮವೊಂದರಲ್ಲಿ. ಈ ಕಾರ್ಯಕ್ರಮದಲ್ಲಿ ನಡೆಸಲಾದ ಚಿಟ್​ ಚಾಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ಅಭಿಷೇಕ್ ಶರ್ಮಾ ಕುರಿತಾಗಿ ಪಡುತ್ತಿರುವ ‘ಹೊಟ್ಟೆಕಿಚ್ಚ’ನ್ನು ಸಂಜು ಸ್ಯಾಮ್ಸನ್​ ಬಹಿರಂಗಪಡಿಸಿದ್ದಾರೆ. ಮಾರ್ಚ್ 2026 ರಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕ್ಲೇವ್  ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾ ಒಳಗಿನ ಕೆಲ ತಮಾಷೆಯ ಮತ್ತು ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More