Headlines

IPL 2026: ಐಪಿಎಲ್​ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ? – Kannada News | Capri Global a frontrunner to buy Rajasthan Royals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಆರಂಭಕ್ಕೂ ಮುನ್ನ ಎರಡು ಫ್ರಾಂಚೈಸಿಗಳ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಡಿಯಾಜಿಯೋ ಕಂಪೆನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾರಾಟಕ್ಕೆ ಬಿಡ್ಡಿಂಗ್ ಆಹ್ವಾನಿಸಿದೆ. ಇದರ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಹ ಮಾರಾಟ ಮಾಡಲು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಮುಂದಾಗಿದೆ. ಅದರಂತೆ ಇದೀಗ ಆರ್​ಆರ್ ತಂಡದ ಖರೀದಿಗೂ ಬಿಡ್ಡಿಂಗ್​ಗಳನ್ನು ಆಹ್ವಾನಿಸಲಾಗಿದೆ. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ಆರ್​ಸಿಬಿ ಮತ್ತು ಆರ್​ಆರ್ ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆ ಹೆಚ್ಚಿದೆ….

Read More

AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಮುಂದಾದ ಸರ್ಕಾರ – Kannada News | India’s First AI University in Amaravati by Andhra Pradesh and NVIDIA: A Global Leap

ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ಮಟ್ಟಕ್ಕೆ ತರುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದೆ. ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯು ಇತ್ತೀಚೆಗೆ ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆ, ಮೂಲಸೌಕರ್ಯ ಮತ್ತು ತರಬೇತಿ ಕೇಂದ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕೃತ ಆದೇಶ (GO) ಹೊರಡಿಸಿದ್ದು, ಈ ವಿಶ್ವವಿದ್ಯಾಲಯವನ್ನು ಜಾಗತಿಕ ತಂತ್ರಜ್ಞಾನ ದೈತ್ಯ NVIDIA ಸಹಯೋಗದೊಂದಿಗೆ “AI ಲಿವಿಂಗ್ ಲ್ಯಾಬ್ಸ್” ಎಂಬ ಹೆಸರಿನಲ್ಲಿ…

Read More

ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ – Kannada News | Kapu Shirva Vehicle Blaze: Quick Thinking Driver Averts Tragedy, Five Escape

ಉಡುಪಿ, ಫೆ.10: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದೆ. ಬೆಂಕಿಯೂ ಎಂಜಿನ್ ಭಾಗದಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ಬಂದಿದೆ. ಇದನ್ನು ನೋಡಿ ಚಾಲಕ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಕಾರಿನಿಂದ ಎಲ್ಲರೂ ಇಳಿಯುತ್ತಿದ್ದಂತೆ ದೊಡ್ಡ…

Read More

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ – Kannada News | Karnataka Power Tussle Reaches Delhi: CM Siddaramaiah Angry On DCM DK Shivakumar

ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್​​​ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ…

Read More

ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ – Kannada News | Social Media Influencer Chinu Pappu’s Mysterious Death in Kasaragod Under Police Probe

ಮಂಗಳೂರು, ಫೆಬ್ರವರಿ 10: ನಿಗೂಢ ರೀತಿಯಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ಮೃತಪಟ್ಟಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ‘ಚಿನ್ನು ಪಾಪು’ ಎಂದೇ ಪ್ರಖ್ಯಾತರಾಗಿದ್ದ ರೇಷ್ಮಾ, ಉಳಿಯತ್ತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಕ್ಕಪಕ್ಕದವರು ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಅವರು ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ. ಕಳೆದ ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ರೇಷ್ಮಾ, 4 ವರ್ಷ ವಯಸ್ಸಿನ ಮಗುವನ್ನು ಕೂಡ ಹೊಂದಿದ್ದಾರೆ. ಗಂಡನಿಂದ…

Read More

ಕಾಡಿನಿಂದ ನಾಡಿಗೆ ಬಂದ್ವು ಮೂರು ಕಾಡಾನೆಗಳು!

ರಾಮನಗರ, ಫೆಬ್ರವರಿ 10: ತಾಲೂಕಿನ ಗೋಪಳ್ಳಿ ಗ್ರಾಮದ ಬಳಿ ಮೂರು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಅರಣ್ಯದಿಂದ ನಾಡಿಗೆ ಬಂದ ಈ ಗಜಪಡೆಯು ಗ್ರಾಮಸ್ಥರ ಗಮನ ಸೆಳೆದಿದೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ಸಂಭವಿಸಿದ್ದು, ಸ್ಥಳೀಯರಲ್ಲಿ ಕುತೂಹಲ ಮತ್ತು ಎಚ್ಚರಿಕೆ ಮೂಡಿಸಿದೆ. ಆನೆಗಳು ಗೋಪಳ್ಳಿ ಗ್ರಾಮಕ್ಕೆ ಪ್ರವೇಶಿಸಿದ್ದರಿಂದ, ಸ್ಥಳೀಯರು ಪರಿಸ್ಥಿತಿಯನ್ನು ಗಮನಿಸುತ್ತಿರುವುದು ಕಂಡುಬಂದಿದೆ. ಆನೆಗಳ ಚಲನವಲನಗಳ ಕುರಿತು ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಗ್ರಾಮಸ್ಥರು ಈ ಆನೆಗಳನ್ನು…

Read More

ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು? – Kannada News | Jana Nayagan Release Delay: Vijay Film’s Censor and Court Battle Updates

‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ಆಗಲು ಸಾಕಷ್ಟು ಅಡಚಣೆ ಉಂಟಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್​​​ನಲ್ಲಿ ಕೆವಿಎನ್ ಸಂಸ್ಥೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈಗ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಈ ಮೂಲಕ ತಂಡದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಿನಿಮಾ ಶೀಘ್ರವೇ ತೆರೆಗೆ ಬರುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಜನವರಿ 9ರಂದು ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ಆಗಬೇಕಿತ್ತು. ಹೀಗಾಗಿ ಸೆನ್ಸಾರ್ ಪ್ರಮಾಣ…

Read More

ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ – Kannada News | Biklu Shiva Murder Case: BJP MLA Byrathi Basavaraj Bail Plea Rejected By Karnataka High Court

ಬೆಂಗಳೂರು (ಫೆಬ್ರವರಿ.10): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ( BJP MLA Byrathi Basavaraj) ಜಾಮೀನು ಅರ್ಜಿ ವಜಾಗೊಂಡಿದೆ. ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು‌ ಅರ್ಜಿಯನ್ನ ಇಂದು (ಫೆಬ್ರವರಿ 10) ಹೈಕೋರ್ಟ್​​ ವಜಾ‌ಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ಗೆ ಬಂಧನದ ಭೀತಿ ಎದುರಾಗಿದೆ….

Read More

ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಚಿನ್ನದ ಅಂಗಡಿ ಬೀಗ ಒಡೆದು ಕಳ್ಳತನ – Kannada News | Gold Jewellery Shop Burglary in Chintamani: Thieves Break Lock, Steal Gold and Silver Ornaments in Chikkaballapur

ಚಿಕ್ಕಬಳ್ಳಾಪುರ, ಫೆಬ್ರವರಿ 10: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿರುವ ಶಿವ ಜ್ಯುವೆಲರ್ಸ್ ಚಿನ್ನದ ಅಂಗಡಿಯಲ್ಲಿ ದೊಡ್ಡ ಪ್ರಮಾಣದ ಕಳ್ಳತನ ನಡೆದಿದೆ. ಕಳ್ಳರು ಅಂಗಡಿಯ ಶಟರ್ಸ್ ಬೀಗ ಒಡೆದು ಒಳನುಗ್ಗಿದ್ದು, ಅಲ್ಲಿ ಸಂಗ್ರಹಿಸಿದ್ದ ಬೆಳ್ಳಿ ಮತ್ತು ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಚಿಂತಾಮಣಿ ನಗರ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು, ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಕಳ್ಳತನದ ಪ್ರಮಾಣ ಮತ್ತು ದರೋಡೆಯಾದ ಆಭರಣಗಳ ನಿಖರ ಮೌಲ್ಯ ಇನ್ನಷ್ಟೇ…

Read More

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್ – Kannada News | BESCOM Power Cut on Feb 11 and 12: Electricity Outage in Several Areas for Maintenance Works

ಬೆಂಗಳೂರು, ಫೆಬ್ರವರಿ 10: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ (Power Cut) ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ…

Read More