Ashes 2025: ಮೂರಕ್ಕೆ ಮೂರು… ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೂರನೇ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಆಸೀಸ್ ಪಡೆ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ತಲಾ 8 ವಿಕೆಟ್ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 82 ರನ್ಗಳ ಗೆಲುವು ದಾಖಲಿಸಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್ನಲ್ಲಿ 371 ರನ್ ಕಲೆಹಾಕಿದರೆ, ಇಂಗ್ಲೆಂಡ್ 286…