‘ಟಾಕ್ಸಿಕ್’ ಚಿತ್ರದಿಂದ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಬಿಡುಗಡೆ – Kannada News | Yash starrer Toxic movie team released Kiara Advani first look as Nadia
‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಹತ್ತಿರ ಆಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿದ ಸಿನಿಮಾ ಆದ್ದರಿಂದ ‘ಟಾಕ್ಸಿಕ್’ (Toxic) ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಈಗ ‘ಟಾಕ್ಸಿಕ್’ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದರಿಂದ ಕುತೂಹಲ ಹೆಚ್ಚಿಸಲಾಗಿದೆ. ಗ್ಲಾಮರಸ್ ಆದ ಗೆಟಪ್ನಲ್ಲಿ…