ವೈಯರ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡಿದ್ದ ಪ್ರಿಯಕರ!
ಬೆಂಗಳೂರು, ಮಾ.14: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ( Kodathi murder case) ಕರೆತಂದ ಪ್ರಿಯಕರನೇ, ಮದುವೆಯ ವಿಚಾರಕ್ಕೆ ಶುರುವಾದ ಜಗಳದ ಹಿನ್ನೆಲೆಯಲ್ಲಿ ಪ್ರಿಯತಮೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಬಳಿ ನಡೆದಿದೆ. ಕೊಡಗು ಮೂಲದ ರಂಜಿತಾ (24) ಮೃತಪಟ್ಟ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಂಜಿತಾ ಮತ್ತು ಆರೋಪಿ ಅಯ್ಯಪ್ಪ ಇಬ್ಬರೂ ಕೊಡಗಿನ ಪೊನ್ನಂಪೇಟೆ ಮೂಲದವರು. ಅಯ್ಯಪ್ಪನಿಗೆ ಈಗಾಗಲೇ ಮದುವೆಯಾಗಿದ್ದು, ಹೆಂಡತಿಯನ್ನು ಬಿಟ್ಟಿದ್ದ. ತನ್ನ…