Headlines

ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!

ಗುವಾಹಟಿ, ಮಾರ್ಚ್ 13: ವಿಧಾನಸಭಾ ಚುನಾವಣೆಗೆ ಸಿದ್ಧವಾಗಿರುವ ಅಸ್ಸಾಂಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಈ ವೇಳೆ ಅವರು 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಅಸ್ಸಾಂನಲ್ಲಿ ಹಲವು ದಶಕಗಳಿಂದ ಚಹಾ ಬುಡಕಟ್ಟು ಸಮುದಾಯವು ಭೂಮಿಯ ಮೇಲೆ ಯಾವುದೇ ಹಕ್ಕುಗಳಿಲ್ಲದೆ ಬದುಕುತ್ತಿದೆ. ಇದಾಗಿ ತಲೆಮಾರುಗಳೇ ಕಳೆದಿವೆ. ಅವರು ಸರ್ಕಾರಿ ಯೋಜನೆಗಳು ಮತ್ತು ಅವಕಾಶಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ, ಅಸ್ಸಾಂನಲ್ಲಿ ಪ್ರಧಾನಿ ಮೋದಿ (PM Modi) ಅವರು 800 ಚಹಾ ತೋಟಗಳಲ್ಲಿರುವ 3.5 ಲಕ್ಷ…

Read More

ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ

ಬೆಂಗಳೂರು, (ಮಾರ್ಚ್ 13): ಮಧ್ಯಪ್ರಾಚ್ಯದ ಯುದ್ಧ (War) ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಎಲ್ಲೂ ಗ್ಯಾಸ್ (LPG Gas) ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ. ಆದರೆ, ಕಾಂಗ್ರೆಸ್ (Congress)  ಪಕ್ಷ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ. ದೇಶದಲ್ಲಿ ಈ ಹಿಂದೆಲ್ಲಾ ಕ್ರೈಸಿಸ್ ಉಂಟಾದಾಗ ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಂಡಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ವಿಪಕ್ಷ ಕಾಂಗ್ರೆಸ್ ತೀರಾ ತೀರಾ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ…

Read More

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಗುವಾಹಟಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಿಡುಗಡೆ ಮಾಡಿದರು. ಇದೇ ವೇಳೆ ಇನ್ನೂ ಕೆಲವು ಯೋಜನೆಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ…

Read More

IPL 2026: ಐಪಿಎಲ್​ನಿಂದ ಹರ್ಷಿತ್ ರಾಣಾ ಔಟ್; ಕೆಕೆಆರ್‌ಗೆ ಹೆಚ್ಚಿದ ಸಂಕಷ್ಟ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡಕ್ಕೆ ಪ್ರಮುಖ ವೇಗದ ಬೌಲರ್ ಹರ್ಷಿತ್ ರಾಣಾ ಅವರನ್ನು 19 ನೇ ಸೀಸನ್ ಐಪಿಎಲ್​ನಿಂದ ಹೊರಗಿಡಲಾಗಿದೆ. ಇಂಜುರಿಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ರಾಣಾರನ್ನು ಐಪಿಎಲ್​ನಿಂದ ಹೊರಗಿಡುವ ತೀರ್ಮಾನಕ್ಕೆ ಬರಲಾಗಿದೆ. ವಾಸ್ತವವಾಗಿ 2026 ರ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯಗಳ ಸಮಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ರಾಣಾಗೆ ಗಾಯವಾಗಿತ್ತು….

Read More

ಮತ್ತೆ ಕೇಳಿಬಂತು ಅನುಷ್ಕಾ ಶೆಟ್ಟಿ ಮದುವೆ ವಿಷಯ: ಈ ಬಾರಿ ಪ್ರಭಾಸ್ ಹೆಸರಿಲ್ಲ

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಬಣ್ಣದ ಲೋಕದಲ್ಲಿ ಸೂಪರ್ ಸಕ್ಸಸ್ ಕಂಡಿದ್ದಾರೆ. ಅನೇಕ ಸ್ಟಾರ್ ನಟರಿಗೆ ಜೋಡಿಯಾಗಿ ಮಿಂಚಿದ್ದಾರೆ. ಆದರೆ ನಿಜ ಜೀವನದಲ್ಲಿ ಅವರು ಸಿಂಗಲ್ ಆಗಿಯೇ ಉಳಿದುಕೊಂಡಿದ್ದಾರೆ. ಅವರ ಮದುವೆ (Anushka Shetty Marriage) ಬಗ್ಗೆ ಆಗಾಗ ಗಾಸಿಪ್ ಕೇಳಿಬರುತ್ತಿದೆ. ಈಗ ಮತ್ತೊಮ್ಮೆ ಅವರ ಮದುವೆಯ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಹಲವು ವರ್ಷಗಳಿಂದ ಅನುಷ್ಕಾ ಶೆಟ್ಟಿ ಅವರ ಹೆಸರು ನಟ ಪ್ರಭಾಸ್…

Read More

ನೌಕಾ ಡ್ರೋನ್​ಗಳು, ಕ್ಷಿಪಣಿಗಳಿರುವ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ಟೆಹ್ರಾನ್, ಮಾರ್ಚ್ 13: ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವುದನ್ನು ನಿರ್ಬಂಧಿಸಲು ನಿಯೋಜಿಸಲಾದ ಆತ್ಮಾಹುತಿ ಡ್ರೋನ್ ಹಡಗುಗಳ ದೊಡ್ಡ ಸಂಗ್ರಹವನ್ನು ಇರಾನ್ (Iran) ಸೇನೆ ಹೊಂದಿದೆ. ಇರಾನ್​ನ ಅಧಿಕಾರಿಗಳು “ಕ್ಷಿಪಣಿ ನಗರ” ಎಂದು ಹೇಳುವ ಭೂಗತ ಕಾಂಪ್ಲೆಕ್ಸ್​ ಒಳಗೆ ಚಿತ್ರೀಕರಿಸಲಾದ ವಿಡಿಯೋಗಳನ್ನು ಇರಾನ್​ನ ಮಾಧ್ಯಮಗಳು ಬಿಡುಗಡೆ ಮಾಡಿದೆ. ನೌಕಾ ಡ್ರೋನ್‌ಗಳು, ಹಡಗು ವಿರೋಧಿ ಕ್ಷಿಪಣಿಗಳು ಮತ್ತು ಸಮುದ್ರ ಗಣಿಗಳಿಂದ ಕೂಡಿದ ಉದ್ದವಾದ ಸುರಂಗಗಳನ್ನು ಈ ವಿಡಿಯೋದಲ್ಲಿ ನೋಡಬಹುದು. ಈ ರೆಕಾರ್ಡಿಂಗ್‌ಗಳನ್ನು ಯಾವಾಗ ಮಾಡಲಾಯಿತು, ಅಮೆರಿಕನ್ ಅಥವಾ ಇಸ್ರೇಲಿ ಪಡೆಗಳು…

Read More

ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

ನವದೆಹಲಿ, ಮಾರ್ಚ್ 13: ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವೆ ಸಂಘರ್ಷ ಆರಂಭವಾದ ನಂತರ ಜಗತ್ತಿನಾದ್ಯಂತ ಹಲವೆಡೆ ಇಂಧನ, ಎಲ್​ಪಿಜಿ ಬಿಕ್ಕಟ್ಟು (LPG Crisis) ತಲೆದೋರಿತ್ತು. ಅದಕ್ಕೆ ಭಾರತವೂ ಹೊರತಾಗಿರಲಿಲ್ಲ. ಆದರೆ, ಕೊನೆಗೂ ಭಾರತದಲ್ಲಿ ಉದ್ಭವವಾಗಿದ್ದ ಎಲ್​ಪಿಜಿ ಕೊರತೆಗೆ ಪರಿಹಾರ ಸಿಕ್ಕಂತಾಗಿದೆ. ಭಾರತ ಮತ್ತು ಇರಾನ್ ಹಾರ್ಮುಜ್ ಜಲಸಂಧಿಯಿಂದ ಹಡಗುಗಳ ಸಾಗಣೆಗೆ ಒಪ್ಪಂದ ಮಾಡಿಕೊಂಡಿವೆ. ಈಗಾಗಲೇ 40,000 ಮೆಟ್ರಿಕ್ ಟನ್ ಬೃಹತ್ ಎಲ್‌ಪಿಜಿಯನ್ನು ಹೊತ್ತ ಶಿವಾಲಿಕ್ ಎಂಬ ಹಡಗು ಹಾರ್ಮುಜ್ ಜಲಸಂಧಿಯನ್ನು ದಾಟಿ ಬಂದಿದೆ. ಮತ್ತೊಂದು ಹಡಗು ಕೂಡ…

Read More

ಸಿದ್ದರಾಮಯ್ಯ ಬೆನ್ನಲ್ಲೇ ಈಗ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ಹುಬ್ಲೋಟ್‌ ವಾಚ್‌

ಕೊಪ್ಪಳ (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಹ್ಯೂಬ್ಲೋಟ್ ವಾಚ್ ಅಂದ್ರೆ ಸಾಕು ಥಂಟ್ ಅಂತ ಸಿಎಂ ಸಿದ್ದರಾಮಯ್ಯನವರರು ನೆನಪಾಗುತ್ತಾರೆ. ಅಷ್ಟರ ಮಟ್ಟಿಗೆ ಸಿದ್ದರಾಮಯ್ಯನವರ ಹ್ಯೂಬ್ಲೋಟ್ ವಾಚ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಅಲ್ಲದೇ ಅವರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ಸಿದ್ದರಾಮಯ್ಯನವರ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ್ ಬಳಿಯೂ ಸಹ ದುಬಾರಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಇರುವುದು ಬೆಳಕಿಗೆ ಬಂದಿದೆ. ಹೌದು..ಸುಮಾರು…

Read More

ಸಿಕ್ಕಳೆನ್ನುವಷ್ಟರಲ್ಲಿ ಮತ್ತೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕುಖ್ಯಾತ ಕಳ್ಳಿ ಮಾಲಾ

ರಾಮನಗರ, ಮಾರ್ಚ್​ 13: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳಿ (Thief) ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿ ಆಗಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹದಿನಾರು ವರ್ಷದಿಂದ ಪೊಲೀಸರ ಕೈಗೆ ಸಿಗದ ಕಳ್ಳಿ ಮೂಲತಃ ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಹಲವು ವರ್ಷಗಳಿಂದ…

Read More

IPL 2026: ಮುಸ್ತಾಫಿಜುರ್ ರೆಹಮಾನ್ ಬದಲಿಗೆ ಕೆಕೆಆರ್ ಸೇರಿದ ಮಾಜಿ ಆರ್​ಸಿಬಿ ವೇಗಿ

ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಹೊರಹಾಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ಅವರ ಬದಲಿಯಾಗಿ ಕಳೆದ ಆವೃತ್ತಿಯಲ್ಲಿ ಆರ್​ಸಿಬಿ ತಂಡದ ಭಾಗವಾಗಿದ್ದ ಜಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಜರಬಾನಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಟಿ20 ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಬ್ಲೆಸಿಂಗ್ ಮುಜರಬಾನಿಗೆ ಕೆಕೆಆರ್ ಪ್ಲೇಯಿಂಗ್ 11ನಲ್ಲೂ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಿವೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಕೆಕೆಆರ್‌, ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಬದಲಿಗೆ ಜಿಂಬಾಬ್ವೆಯ ವೇಗದ ಬೌಲರ್ ಬ್ಲೆಸಿಂಗ್ ಮುಜರಬಾನಿ…

Read More