ಶಿರಾಡಿಘಾಟ್ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ
ಮಂಗಳೂರು, (ಮಾರ್ಚ್ 13): KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್ನ (shiradi ghat) ಗುಂಡ್ಯ ಸಮೀಪ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ….