ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?
ತುಮಕೂರು, ಮಾರ್ಚ್ 13: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಬಾಲಕಿಯರ ವಸತಿ ನಿಲಯ (Girl’s Hostel) ಅಭಿವೃದ್ಧಿ ಕಾಣದೆ ಪಾಳು ಬಿದ್ದಿದೆ. ಗ್ರಾಮದಲ್ಲಿ ಇರುವ ಪಾರಂಪರಿಕ ನಂಬಿಕೆಯನ್ನು ನೆಪ ಮಾಡಿಕೊಂಡು ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ತೋರಿಸುತ್ತಿದೆಯೇ ಎಂಬ ಪ್ರಶ್ನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸುಮಾರು 69 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಸ್ತೂರಿಬಾ ಬಾಲಿಕಿಯರ ವಿದ್ಯಾರ್ಥಿನಿಲಯ ಕಳೆದ ಎಂಟು ವರ್ಷಗಳಿಂದ ಖಾಲಿ ಬಿದ್ದಿದ್ದು, ಇದು ಇದೀಗ ವಿವಾದಕ್ಕೆ ಕಾರಣವಾಗಿದೆ. ನಿರ್ಮಾಣವಾದ ಒಂದು ತಿಂಗಳಲ್ಲೇ…