ಸಣ್ಣದೊಂದು ಮನಸ್ಥಾಪ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ಗಂಡ
ಕೋಲ್ಕತ್ತಾ, ಮಾರ್ಚ್ 13: ಸಣ್ಣದೊಂದು ಮನಸ್ಥಾಪಕ್ಕೆ ಪತಿಯೇ ಪತ್ನಿಗೆ ಬೆಂಕಿ ಹಚ್ಚಿ ಕೊಲೆ(Murder) ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ನರ್ಸ್ ಒಬ್ಬರು ಕಾರಿನ ಇಎಂಐ ಪಾವತಿಗೆ ಸಂಬಂಧಿಸಿದ ಜಗಳದಲ್ಲಿ ಪತಿಯ ಕೈಯಿಂದಲೇ ಸಾವನ್ನಪ್ಪಿದ್ದಾರೆ. ಕೂಚ್ ಬೆಹಾರ್‌ನಲ್ಲಿರುವ ಎಂಜೆಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಸೂತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಛಂದಾ ರಾಯ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಛಂದಾ ಮನೆಯಿಂದ ಕೂಗುತ್ತಾ ಹೊರಗೆ ಓಡಿಹೋಗಿದ್ದಳು, ಬೆಂಕಿ ಹೊತ್ತಿಕೊಂಡಿದ್ದರಿಂದ…