Category Archives: Blog

Your blog category

ವಿಚ್ಛೇದನದ ಬಗ್ಗೆ ವಿಜಯ್ ಮಾತು: ಹಳೆ ವಿಡಿಯೋ ವೈರಲ್ ಮಾಡಿ ಟ್ರೋಲ್

ವಿಚ್ಛೇದನದ ಬಗ್ಗೆ ವಿಜಯ್ ಮಾತು: ಹಳೆ ವಿಡಿಯೋ ವೈರಲ್ ಮಾಡಿ ಟ್ರೋಲ್

ದಳಪತಿ ವಿಜಯ್ (Thalapathy Vijay) ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದು, ನಟ ವಿಜಯ್​​ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ, ಇದೇ ಆಧಾರದ ಮೇಲೆ ತಮಗೆ ಜೀವನಾಂಶದ ಜೊತೆಗೆ ವಿಚ್ಛೇದನ ಕೊಡಿಸಬೇಕು ಎಂದು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದಾರೆ. ಅದರ ಬೆನ್ನಲ್ಲೆ, ವಿಜಯ್ ಸಹ ನಟಿ ತ್ರಿಷಾ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ತಮ್ಮ ವಿಚ್ಛೇದನ ವಿಷಯವನ್ನು ಖಾತ್ರಿ ಪಡಿಸಿದ್ದಾರೆ. ವಿಜಯ್ ವಿಚ್ಛೇದನ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಾಟ್ ಟಾಪಿಕ್ ಆಗಿದೆ. ಹೀಗಿರುವಾಗಲೇ ವಿಜಯ್ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ವಿಪರೀತ ಟ್ರೋಲ್ ಮಾಡಲಾಗುತ್ತಿದೆ.

ವಿಜಯ್ ಅವರ ಹಳೆಯ ಸಿನಿಮಾ ಒಂದರ ವಿಡಿಯೋ ತುಣುಕೊಂದನ್ನು ವೈರಲ್ ಮಾಡಲಾಗಿದ್ದು, ವಿಡಿಯೋನಲ್ಲಿ ವಿಜಯ್, ವಿಚ್ಛೇದನವನ್ನು ವಿರೋಧಿಸಿ ಮಾತನಾಡಿದ್ದಾರೆ. ವಿಚ್ಛೇದನ ಪಡೆದುಕೊಳ್ಳುತ್ತಿರುವ ಮಹಿಳೆಯನ್ನು ಟೀಕಿಸಿ ಆಕೆಗೆ ಬುದ್ಧಿ ಹೇಳುವ ಸೀನ್ ಅದಾಗಿದೆ. ಇದೀಗ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿರುವ ನೆಟ್ಟಿಗರು, ವಿಜಯ್, ವಿಚ್ಛೇದನದ ಬಗ್ಗೆ ಹೀಗೆಲ್ಲ ಹೇಳಿ, ಈಗ ಅವರೇ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ವಿಜಯ್ ಅವರ ಹಳೆ ಸಿನಿಮಾದ ದೃಶ್ಯ ಇದಾಗಿದ್ದು, ವಿದೇಶದಲ್ಲಿ ನಡೆಯುವ ಆ ದೃಶ್ಯದಲ್ಲಿ ನಾಯಕಿ, ತನ್ನ ಗೆಳತಿಯೊಂದಿಗೆ ಮಾತನಾಡುತ್ತಿರುತ್ತಾಳೆ, ಗೆಳತಿ, ತಾನು ವಿಚ್ಛೇದನ ಪಡೆದಿದ್ದು, ಈಗ ಮತ್ತೊಂದು ಮದುವೆ ಆಗುತ್ತಿದ್ದೇನೆ ಎನ್ನುತ್ತಾಳೆ ಆಗ ನಾಯಕಿ, ‘ಮುಂದಿನ ಜೀವನಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸುತ್ತಾಳೆ. ಆಗ ಅಲ್ಲಿಯೇ ಇದ್ದ ನಾಯಕ ವಿಜಯ್, ನಾಯಕಿಯ ಗೆಳತಿಯನ್ನುದ್ದೇಶಿಸಿ, ‘ನೀವು ಭಾರತೀಯರು ತಾನೆ?’ ಎನ್ನುತ್ತಾರೆ. ಅದಕ್ಕೆ ಗೆಳತಿ, ‘ಹೌದು, ಆದರೆ ನಾವು ವಿದೇಶದಲ್ಲಿ ಸೆಟಲ್ ಆಗಿ ಹಲವು ವರ್ಷಗಳೇ ಆಯ್ತು’ ಎನ್ನುತ್ತಾರೆ. ಆಗ ವಿಜಯ್ ತಮ್ಮ ಭಾಷಣ ಆರಂಭಿಸುತ್ತಾರೆ.

ಇದನ್ನೂ ಓದಿ:ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ

‘ವಿದೇಶದಲ್ಲಿ ಸೆಟಲ್ ಆಗಿರುವುದಕ್ಕೆ ನೀವು ನಮ್ಮ ಭಾರತೀಯ ಸಂಸ್ಕೃತಿಯನ್ನು ಮರೆತು, ಪ್ರೀತಿ ಮತ್ತು ಬಾಂಧವ್ಯದ ಬಗ್ಗೆ ಬಹಳ ಕೀಳಾಗಿ ಮಾತನಾಡುತ್ತಿದ್ದೀರಿ. ಮಹಿಳೆ ಅಥವಾ ಪುರುಷನ ಜೀವನದಲ್ಲಿ ಪ್ರೀತಿ ಮತ್ತು ಮದುವೆ ಕೇವಲ ಒಂದು ಬಾರಿ ಆಗಬೇಕು. ಮದುವೆ ಆದವನು ಒಳ್ಳೆಯವನೋ, ಕೆಟ್ಟವನೊ ಜೀವನ ಪರ್ಯಂತ ಅವನ ಜೊತೆಯಲ್ಲಿಯೇ ಇರಬೇಕು ಅದೇ ತಮಿಳು ಸಂಸ್ಕೃತಿ. ನೀವು ಒಬ್ಬ ತಮಿಳು ಮಹಿಳೆಯಾಗಿ, ವಿಚ್ಛೇದನ ನೀಡಿ ಇನ್ನೊಬ್ಬನ ಮದುವೆ ಆಗುವುದಕ್ಕೆ ನಾಚಿಕೆ ಆಗುವುದಿಲ್ಲವೇ’ ಎನ್ನುತ್ತಾರೆ ವಿಜಯ್.

ಅಸಲಿಗೆ ವಿಜಯ್ ಆ ಸಿನಿಮಾದಲ್ಲಿ ಹೇಳಿದ್ದಕ್ಕೆ ವಿರುದ್ಧವೇ ಮಾಡುತ್ತಿದ್ದಾರೆ. ಪ್ರೀತಿ, ಮದುವೆ ಒಂದೇ ಬಾರಿ ಆಗಬೇಕು ಎಂದು ಹೇಳಿದ್ದ ವಿಜಯ್ ಇದೀಗ ಮದುವೆ ಆಗಿ, ಮಕ್ಕಳಾದ ಮೇಲೆ ನಟಿ ತ್ರಿಷಾ ಅವರನ್ನು ಪ್ರೀತಿಸಿದ್ದಾರೆ. ಈಗ ವಿಚ್ಛೇದನ ಆದ ಬಳಿಕ ಅವರೊಂದಿಗೆ ಮದುವೆ ಸಹ ಆಗಲಿದ್ದಾರೆ. ಇದು ತಮಿಳು ಸಂಸ್ಕೃತಿ ಅಲ್ಲ ಎಂದಿದ್ದರು. ಅದು ನಿಜವೇ ಆಗಿದ್ದರೆ ಈಗ ವಿಜಯ್ ಅವರೇ ಆ ಸಂಸ್ಕೃತಿಯ ವಿರುದ್ಧ ಹೊರಟಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭಾರತೀಯರ ಸುರಕ್ಷತೆ ಕುರಿತು ಸಚಿವರಿಂದ ಇರಾನ್ ಜೊತೆ 3 ಬಾರಿ ಮಾತುಕತೆ; ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ, ಮಾರ್ಚ್ 12: ಭಾರತೀಯ ಹಡಗುಗಳ ಸುರಕ್ಷಿತ ಸಾಗಣೆ, ಇಂಧನ ಭದ್ರತೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಇರಾನಿನ ವಿದೇಶಾಂಗ ಸಚಿವರೊಂದಿಗೆ ಮೂರು ಕರೆಗಳನ್ನು ನಡೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನಿನ ಸಚಿವರು ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮೂರು ಸುತ್ತಿನ ಮಾತುಕತೆ ನಡೆಸಿದ್ದಾರೆ. ಭಾರತಕ್ಕೆ ಹೋಗುವ ಹಡಗುಗಳ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಭಾರತದ ಧ್ವಜ ಹೊತ್ತ ತೈಲ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಇರಾನ್ ಅನುಮತಿ ನೀಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಈ ವಿಷಯದ ಬಗ್ಗೆ ಹೆಚ್ಚಿನ ಮಾತನಾಡಲು ಇದು ಸರಿಯಾದ ಸಮಯವಲ್ಲ ಎಂದು ಹೇಳಿದರು. “ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ಇರಾನ್ ದೇಶದ ವಿದೇಶಾಂಗ ಸಚಿವರು ಇತ್ತೀಚಿನ ದಿನಗಳಲ್ಲಿ ಮೂರು ಬಾರಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಹಡಗುಗಳ ಸುರಕ್ಷತೆ ಮತ್ತು ಭಾರತದ ಇಂಧನ ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಅದನ್ನು ಮೀರಿ, ನಾನು ಏನೂ ಹೇಳುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

 

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ

ಯುದ್ಧಪೀಡಿತ ಪ್ರದೇಶದಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕುರಿತು ಮಾತನಾಡಿದ ರಣಧೀರ್ ಜೈಸ್ವಾಲ್, ಮನೆಗೆ ಮರಳಲು ಬಯಸುವ ಜನರಿಗೆ ವಿದೇಶಾಂಗ ಸಚಿವಾಲಯ ಸಹಾಯ ಮಾಡುತ್ತಿದೆ. ಇರಾನ್‌ನಿಂದ ಹಲವಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇರಾನ್‌ನಲ್ಲಿ ಸುಮಾರು 9,000 ಭಾರತೀಯ ಪ್ರಜೆಗಳಿದ್ದಾರೆ. ಈ 9,000 ಭಾರತೀಯ ಪ್ರಜೆಗಳಲ್ಲಿ ವಿದ್ಯಾರ್ಥಿಗಳು, ನಾವಿಕರು, ವ್ಯಾಪಾರಸ್ಥರು, ವೃತ್ತಿಪರರು ಮತ್ತು ಕೆಲವು ಯಾತ್ರಿಕರು ಸೇರಿದ್ದಾರೆ. ಹಲವಾರು ಭಾರತೀಯ ಪ್ರಜೆಗಳು, ಅದರಲ್ಲೂ ಹೆಚ್ಚಾಗಿ ವಿದ್ಯಾರ್ಥಿಗಳು ಆ ದೇಶವನ್ನು ತೊರೆದು ಮನೆಗೆ ತಲುಪಿದ್ದಾರೆ. ಟೆಹ್ರಾನ್‌ನಲ್ಲಿ ನೆಲೆಸಿದ್ದ ವಿದ್ಯಾರ್ಥಿಗಳು ಮತ್ತು ಯಾತ್ರಿಕರು ಸೇರಿದಂತೆ ಹಲವಾರು ಭಾರತೀಯ ಪ್ರಜೆಗಳನ್ನು ನಾವು ದೇಶದ ಇತರ ಸುರಕ್ಷಿತ ಸ್ಥಳಗಳು ಮತ್ತು ನಗರಗಳಿಗೆ ಸ್ಥಳಾಂತರಿಸಿದ್ದೇವೆ. ಅಜೆರ್ಬೈಜಾನ್ ಮತ್ತು ಅರ್ಮೇನಿಯಾಗೆ ಪ್ರಯಾಣಿಸಲು ಮತ್ತು ಅಲ್ಲಿಂದ ಮನೆಗೆ ಮರಳಲು ವಾಣಿಜ್ಯ ವಿಮಾನಗಳನ್ನು ತೆರಳಲು ಬಯಸುವ ಭಾರತೀಯ ಪ್ರಜೆಗಳಿಗೆ ನಾವು ಸಹಾಯ ಮಾಡುತ್ತಿದ್ದೇವೆ. ನಾವು ಅವರಿಗೆ ವೀಸಾಗಳ ವ್ಯವಸ್ಥೆ ಮಾಡುತ್ತಿದ್ದೇವೆ. ಭೂ ಗಡಿ ದಾಟುವಿಕೆಯಲ್ಲೂ ನಾವು ಅವರಿಗೆ ಸಹಾಯ ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

“ಇರಾನ್‌ನಿಂದ ಭೂ ಗಡಿಗಳ ಮೂಲಕ ಹೊರಹೋಗಲು ಬಯಸುವ ಎಲ್ಲಾ ಭಾರತೀಯ ಪ್ರಜೆಗಳಿಗೆ ನಾನು ಸಲಹೆ ನೀಡುವುದೇನೆಂದರೆ ಅವರು ನಮ್ಮ ರಾಯಭಾರ ಕಚೇರಿ ನೀಡಿರುವ ಸಲಹೆಯನ್ನು ಪಾಲಿಸಬೇಕು” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಬಿಡುಗಡೆಗೆ ಮುಂಚೆ ಮರು ಬಿಡುಗಡೆ ಆಯ್ತು ‘ಧುರಂಧರ್’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗುತ್ತಿದ್ದು, ಮಾರ್ಚ್ 18ರಂದು ಸಿನಿಮಾದ ಪ್ರೀಮಿಯರ್ ಶೋ ಆಯೋಜನೆಗೊಳ್ಳಲಿದೆ. ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವಾರ ಇರುವಾಗಲೇ ಇದೇ ಸಿನಿಮಾದ ಮೊದಲ ಭಾಗ ‘ಧುರಂಧರ್’ ಮರು ಬಿಡುಗಡೆ ಆಗಿದೆ. 2025ರ ಡಿಸೆಂಬರ್​​ನಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದ್ದ ‘ಧುರಂಧರ್’ ಸಿನಿಮಾ ಇದೀಗ ಮಾರ್ಚ್ 12 ರಂದು ಮರು ಬಿಡುಗಡೆ ಆಗಿದ್ದು, ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.

‘ಧುರಂಧರ್ 2’ ಸಿನಿಮಾಕ್ಕೆ ಪ್ರೇಕ್ಷಕರನ್ನು ಸಜ್ಜುಗೊಳಿಸುವ ಉದ್ದೇಶದಿಂದ ‘ಧುರಂಧರ್’ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಮಾಡಲಾಗಿದೆ. ಸುಮಾರು 250 ಪರದೆಗಳಲ್ಲಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ವಿದೇಶಗಳಲ್ಲಿ ವಿಶೇಷವಾಗಿ ಅಮೆರಿಕ, ಕೆನಡಾಗಳಲ್ಲಿ ಮಾರ್ಚ್ 13 ರಿಂದ ‘ಧುರಂಧರ್’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಉತ್ತರ ಅಮೆರಿಕ ಒಂದರಲ್ಲೇ 185 ಸ್ಕ್ರೀನ್​​ಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿರುವುದು ವಿಶೇಷ. ವಿಶ್ವದಾದ್ಯಂತ ಒಟ್ಟು 500 ಸ್ಕ್ರೀನ್​​ಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದೆ. ಮರು ಬಿಡುಗಡೆ ಆಗುತ್ತಿರುವ ಸಿನಿಮಾ ಒಂದು ಇಷ್ಟು ದೊಡ್ಡ ಪ್ರಮಾಣದಲ್ಲಿ ರಿಲೀಸ್ ಆಗುತ್ತಿರುವುದು ಅಪರೂಪ.

ಇದನ್ನೂ ಓದಿ:‘ಧುರಂಧರ್’ ಬಳಿಕ ಹಾರರ್ ಸಿನಿಮಾಕ್ಕೆ ಕೈ ಹಾಕಿದ ರಣ್ವೀರ್ ಸಿಂಗ್

ಅಭಿಮಾನಿಗಳು ಮೊದಲ ಭಾಗದ ರೋಮಾಂಚನಕಾರಿ ಕ್ಷಣಗಳನ್ನು ಮತ್ತೊಮ್ಮೆ ಬೆಳ್ಳಿತೆರೆಯ ಮೇಲೆ ಸವಿದು, ಕೆಲವೇ ದಿನಗಳ ಅಂತರದಲ್ಲಿ (ಮಾರ್ಚ್ 19) ಅದರ ಮುಂದುವರಿದ ಭಾಗವಾದ ‘ದಿ ರಿವೆಂಜ್’ ಅನ್ನು ನೋಡುವ ಅವಕಾಶವನ್ನು ಈ ಮೂಲಕ ಕಲ್ಪಿಸಲಾಗಿದೆ. ‘ಧುರಂಧರ್’ ಸಿನಿಮಾದ ಮುಂದಿನ ಭಾಗ ‘ಧುರಂಧರ್ 2’ ಆಗಿರುವ ಕಾರಣ ಪ್ರೇಕ್ಷಕರು ಕತೆಯನ್ನು ಸ್ಮರಿಸಿಕೊಳ್ಳಲು ಇದು ಸಹಾಯ ಮಾಡಲಿದೆ. ಹಾಗೂ ‘ಧುರಂಧರ್ 2’ ಸಿನಿಮಾಕ್ಕೆ ಪ್ರೇಕ್ಷಕರನ್ನು ಸಜ್ಜುಗೊಳಿಸಲಿದೆ.

ಎರಡು ಪಾರ್ಟ್​​ನಲ್ಲಿ ಬಿಡುಗಡೆ ಆಗುವ ಹಲವು ಸಿನಿಮಾಗಳು, ಎರಡನೇ ಭಾಗದ ಬಿಡುಗಡೆಗೆ ಮುಂಚೆ ಹೀಗೆ ಮೊದಲ ಪಾರ್ಟ್​​ ಅನ್ನು ರಿ-ರಿಲೀಸ್ ಮಾಡುತ್ತಾರೆ. ‘ಬಾಹುಬಲಿ’, ‘ಕೆಜಿಎಫ್’, ‘ಪುಷ್ಪ’ ಸಿನಿಮಾಗಳು ಸಹ ರಿ-ರಿಲೀಸ್ ಆಗಿದ್ದವು. ಈಗ ‘ಧುರಂಧರ್’ ಸಿನಿಮಾ ಸಹ ಮರು ಬಿಡುಗಡೆ ಆಗುತ್ತಿದೆ. ‘ಧುರಂಧರ್ 2’ ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಪ್ರೀಮಿಯರ್ ಶೋ ಮಾರ್ಚ್ 18ರಿಂದಲೇ ಪ್ರದರ್ಶನವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪೆಟ್ರೋಲ್, ಎಲ್​ಪಿಜಿ ಕೊರತೆ ಇಲ್ಲ: ಸಂಸತ್​ನಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

ನವದೆಹಲಿ, ಮಾರ್ಚ್ 12: ದೇಶದಲ್ಲಿ ಪೆಟ್ರೋಲ್, ಡೀಸಲ್, ಸೀಮೆ ಎಣ್ಣೆ ಅಥವಾ ಎಲ್​ಪಿಜಿ ಲಭ್ಯತೆಯಲ್ಲಿ ಯಾವುದೇ ಕೊರತೆ ಆಗಿಲ್ಲ. ಇಂಧನ ಲಭ್ಯತೆ ಸಾಕಷ್ಟಿದೆ. ಇಂಧನ ಸರಬರಾಜು ಸರಪಳಿ ಸರಾಗವಾಗಿ ಇದೆ ಎಂದು ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಸಂಸತ್​ನಲ್ಲಿ ಗುರುವಾರ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri), ಭಾರತದಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದ್ದು ಯಾವುದೇ ರೀತಿಯಲ್ಲಿ ಆತಂಕಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.

ಪೆಟ್ರೋಲ್ ಆಗಲೀ, ಡೀಸಲ್ ಆಗಲೀ, ಸೀಮೆ ಎಣ್ಣೆಯಾಗಲೀ, ಎಲ್​ಪಿಜಿಯಾಗಲೀ ಕೊರತೆ ಎದುರಿಸುತ್ತಿಲ್ಲ. ಅವುಗಳ ಲಭ್ಯತೆ ಬಹಳ ಖಚಿತ ಇದೆ. ಅವುಗಳ ಪೂರೈಕೆ ವ್ಯವಸ್ಥೆಯೂ ಸರಾಗವಾಗಿ ನಡೆಯುತ್ತಿದೆ. ದೇಶದ ಒಟ್ಟಾರೆ ಇಂಧನ ಪರಿಸ್ಥಿತಿ ಉತ್ತಮವಾಗಿದೆ. ಬಳಕೆಗೆ ಬೇಕಾಗುವಷ್ಟು ದಾಸ್ತಾನು ಇದೆ ಎಂದು ಪೆಟ್ರೋಲಿಯಂ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ದಾಟಿ ಮುಂಬೈ ಬಂದರು ತಲುಪಿದ ಭಾರತದ ಮೊದಲ ತೈಲ ಟ್ಯಾಂಕರ್

ದೇಶದಲ್ಲಿ ಈಗ ಎಲ್​ಪಿಜಿ ಲಭ್ಯತೆಯೇ ದೊಡ್ಡ ಚಿಂತೆಯ ವಿಷಯವಾಗಿದೆ. ಈ ವಿಚಾರದ ಬಗ್ಗೆ ಹರ್ದೀಪ್ ಸಿಂಗ್ ಪುರಿ ಆಶಾದಾಯಕವಾಗಿ ಮಾತನಾಡಿದ್ದಾರೆ. ದೇಶೀಯ ಎಲ್​ಪಿಜಿ ಪೂರೈಕೆ ಪೂರ್ಣ ಸಂರಕ್ಷಿತವಾಗಿದೆ. ಜಾಗತಿಕ ರಾಜಕೀಯ ಬಿಕ್ಕಟ್ಟು, ಇಂಧನ ಮಾರುಕಟ್ಟೆಗಳ ವ್ಯತ್ಯಯಗಳ ಪರಿಣಾಮಗಳು ಎಲ್​ಪಿಜಿ ಪೂರೈಕೆ ಮೇಲೆ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ಭಾರತದ 60ರಷ್ಟು ಎಲ್​ಪಿಜಿ ಪೂರೈಕೆಯನ್ನು ಗಲ್ಫ್ ದೇಶಗಳಿಂದ ಪಡೆಯಲಾಗುತ್ತಿದೆ. ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಗೆ ತಡೆಯುಂಟಾಗಿರುವುದರಿಂದ ಗಲ್ಫ್​ನಿಂದ ಎಲ್​ಪಿಜಿ ಪೂರೈಕೆ ಸ್ಥಗಿತಗೊಂಡಿದೆ. ಇದನ್ನು ಸರಿದೂಗಿಸಲು ಭಾರತ ಸರ್ಕಾರ ಬೇರೆ ಬೇರೆ ಪ್ರದೇಶಗಳಿಂದ ತೈಲ, ಅನಿಲಗಳ ಪೂರೈಕೆ ಪಡೆಯುತ್ತಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ

ಇದೇ ವೇಳೆ, ಹಾರ್ಮುಜ್ ಜಲಸಂಧಿಯಿಂದ ಭಾರತಕ್ಕೆ ಸಾಗಿಸಬೇಕಾಗಿರುವ ತೈಲ ಹಡಗುಗಳಿಗೆ ಇರಾನ್​ನ ಅನುಮತಿ ಸಿಕ್ಕಿದೆ. ಎರಡು ಹಡಗುಗಳು ಭಾರತದತ್ತ ಹೊರಟಿವೆ ಎನ್ನುವಂತಹ ಸುದ್ದಿ ಬಂದಿತ್ತು. ಆದರೆ, ಸರ್ಕಾರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇರಾನ್​ನ ಸಚಿವರೊಂದಿಗೆ ಎಸ್ ಜೈಶಂಕರ್ ಮಾತುಕತೆಗಳನ್ನು ನಡೆಸಿದ್ದಾರೆ. ಈಗಲೇ ಆ ಸಂಬಂಧ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರಾದ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವೈರಲ್ ಆಡಿಯೋ ಡಿಲೀಟ್ ಮಾಡಿ, ಇಲ್ಲಾಂದ್ರೆ ಪರಿಣಾಮ ಎದುರಿಸಿ: ರಶ್ಮಿಕಾ ಖಡಕ್ ಎಚ್ಚರಿಕೆ

ಕಳೆದ ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ತಾಯಿಯದ್ದು ಎನ್ನಲಾದ ಒಂದು ಆಡಿಯೋ ತುಣುಕು ವೈರಲ್ ಆಗಿದೆ. ರಕ್ಷಿತ್ ಶೆಟ್ಟಿ (Rakshit Shetty) ಬಗ್ಗೆ ಅದರಲ್ಲಿ ಮಾತನಾಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗಿದೆ. ಅದು ರಶ್ಮಿಕಾ ಮಂದಣ್ಣ ಅವರ ಗಮನಕ್ಕೂ ಬಂದಿದೆ. ಆಡಿಯೋ ವೈರಲ್ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ (Legal Action) ತೆಗೆದುಕೊಳ್ಳಲು ರಶ್ಮಿಕಾ ಮಂದಣ್ಣ ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಎಚ್ಚರಿಕೆ ನೀಡಿದ್ದಾರೆ.

‘ನನ್ನನ್ನು ಗುರಿಯಾಗಿಸಿಕೊಂಡು ಅಪಪ್ರಚಾರ ಮಾಡುತ್ತಾ, ಕಿರುಕುಳ ನೀಡಲು ಆರಂಭಿಸಿ 8 ವರ್ಷಗಳು ಕಳೆದಿವೆ. ನನ್ನ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ವೀವ್ಸ್, ಲೈಕ್ಸ್ ಪಡೆಯಲು ದ್ವೇಷ ಹೆಚ್ಚಿಸಲಾಗಿದೆ. ಅದರಿಂದ ನನಗೆ ನೋವಾದರೂ ಕೂಡ ನಾನು ಮೌನವಾಗಿದ್ದೆ. ಸಾರ್ವಜನಿಕ ಜೀವನದಲ್ಲಿ ಇರುವುದರಿಂದ ಟೀಕೆ ಸಹಜ ಎಂದು ಸುಮ್ಮನಾಗಿದ್ದೆ. ಆದರೆ ಕಳೆದ 24 ಗಂಟೆಗಳಿಂದ ನಡೆದ ಘಟನೆ ಮಿತಿ ಮೀರಿದೆ. ಅದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

‘8 ವರ್ಷಗಳ ಹಳೇ ಆಡಿಯೋ ತುಣುಕನ್ನು ಅನುಮತಿ ಇಲ್ಲದೇ ರೆಕಾರ್ಡ್ ಮಾಡಿ ವೈರಲ್ ಮಾಡಲಾಗಿದೆ. ಇತ್ತೀಚೆಗಿನ ನನ್ನ ಖಾಸಗಿ ಜೀವನದ ಘಟನೆಗಳಿಗೆ ಕಾಕತಾಳೀಯ ಎಂಬಂತೆ ಹೊಸ ವಿವಾದ ಶುರುಮಾಡುವ ಉದ್ದೇಶದಿಂದ ಇದನ್ನು ವೈರಲ್ ಮಾಡಲಾಗುತ್ತಿದೆ. ಈ ವಿಷಯದಲ್ಲಿ ನನ್ನ ಕುಟುಂಬದವರು ಮತ್ತು ಆಪ್ತರನ್ನು ಎಳೆದು ತರಲಾಗಿದೆ’ ಎಂದು ರಶ್ಮಿಕಾ ಮಂದಣ್ಣ ಗರಂ ಆಗಿದ್ದಾರೆ.

‘ಇದರಿಂದ ಖಾಸಗಿತನಕ್ಕೆ ಧಕ್ಕೆ ಆಗಿದೆ. ತಪ್ಪು ಮಾಹಿತಿ ಹರಡಿ, ಮಾನಹಾನಿ ಮಾಡಲಾಗಿದೆ. ನಾವು ಜೀವನದಲ್ಲಿ ಮುಂದೆ ಸಾಗಿದ್ದೇನೆ. ಆದರೂ ಕೂಡ ಕೆಲವರು ಬೇರೆಯವರ ನೆಮ್ಮದಿ ಮತ್ತು ಘಟನೆ ಕೆಡಿಸಿ ದ್ವೇಷ ಮತ್ತು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ಕಳೆದ 8 ವರ್ಷಗಳಿಂದ ಈ ದಾಳಿ ನನಗೆ ಮಾತ್ರ ಸೀಮಿತವಾಗಿದ್ದಕ್ಕೆ ನಾನು ಸಮ್ಮನಾಗಿದ್ದೆ. ಆದರೆ ಈಗ ಬೇರೆಯವರನ್ನೂ ಎಳೆದು ತಂದಿದ್ದಕ್ಕೆ ನಾನು ಸುಮ್ಮನೆ ಇರಲು ಸಾಧ್ಯವಿಲ್ಲ. ಒಂದು ಗಡಿರೇಖೆ ಹಾಕಲೇಬೇಕಿದೆ’ ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ: ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ನೆಟ್ಟಿಗರ ಆಕ್ರೋಶ

‘ವೈರಲ್ ಮಾಡಿರುವ ಎಲ್ಲರಲ್ಲೂ ನಾನು ಮನವಿ ಮಾಡುತ್ತೇನೆ. ಕೂಡಲೇ ಅದನ್ನು ಡಿಲೀಟ್ ಮಾಡಿ. ಅದಕ್ಕೆ ನಿಮಗೆ 24 ಗಂಟೆಗಳ ಕಾಲಾವಕಾಶ ಇದೆ. ಒಂದು ವೇಳೆ ಡಿಲೀಟ್ ಮಾಡದೇ ಇದ್ದರೆ ನಾಳೆಯಿಂದ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಲೀಗಲ್ ನೋಟಿಸ್ ಕಳಿಸಲಾಗುವುದು. ಇದನ್ನು ಹಗುರವಾಗಿ ತೆಗೆದುಕೊಂಡಿಲ್ಲ. ಇದು ಬಹಳ ಅಗತ್ಯವಾಗಿದೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೊಪ್ಪಳ: ಇಬ್ಬರು ಪುತ್ರಿಯರ ಜೊತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ

ಕೊಪ್ಪಳ, ಮಾರ್ಚ್​​ 12: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಪುತ್ರಿಯರ ಜೊತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದಲ್ಲಿ ನಡೆದಿದೆ. ಹುಲಿಗೆವ್ವ(9), ವಿಜಯಮ್ಮ(8) ಜೊತೆ ತಾಯಿ ಬಾಳವ್ವ(35) ಆತ್ಮಹತ್ಯೆ ಮಾಡಿಕೊಂಡವರು. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ಮನೆಯಲ್ಲಿ ನೇಣಿಗೆ ಶರಣು

ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್​​ಗೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಚೇತನ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತದೇಹವನ್ನು ನೆಲಮಂಗಲ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: ಮಡಿಕೇರಿ ಡಬಲ್ ಮರ್ಡರ್​​​​ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ

ಖಾಸಗಿ ಕಾಲೇಜಿನ ವ್ಯಾನ್ ಮೆನೇಜ್ಮೆಂಟ್ ನಿರ್ವಹಣೆ ಮಾಡುತ್ತಿದ್ದ ಚೇತನ್, ನಾನು ಮನೆ ಬಿಟ್ಟು ಹೋಗುತ್ತೇನೆ, ಇಲ್ಲಾ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸ್ನೇಹಿತನಿಗೆ ಮೆಸೇಜ್ ಮಾಡಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ.

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ: ಗುಂಡು ಹಾರಿಸಿಕೊಂಡು ಆತ್ಮಹತ್ಯೆ 

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇತ್ತೀಚೆಗೆ ಮಡಿಕೇರಿ ನಗರದಲ್ಲಿ ನಡೆದಿತ್ತು. ಇಲ್ಲಿನ ಹಿಮವನ ಲೇಔಟ್​ ನಿವಾಸಿ 40 ವರ್ಷದ ದೇವಿಪ್ರಸಾದ್ ಸಾವನ್ನಪ್ಪಿದ ವ್ಯಕ್ತಿ. ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಮೈಸೂರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದರು.

ಇದನ್ನೂ ಓದಿ: ಕಾಡಾನೆ ದಾಳಿಗೆ ಕೊಡಗಲ್ಲಿ ಮತ್ತೊಂದು ಬಲಿ: ದಾರುಣವಾಗಿ ಮೃತಪಟ್ಟ ಕಾಫಿ ಬೆಳೆಗಾರ

ಕಳೆದ ಕೆಲವು ದಿನಗಳಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿತ್ತು. ಇತ್ತೀಚೆಗೆ ತಮ್ಮ ಕೋವಿಯೊಂದಿಗೆ ಮನೆಯಿಂದ ಹೊರ ಬಂದು ರಸ್ತೆಬದಿಯಲ್ಲೇ ಗುಡುಂ ಹಾರಿಸಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿಕೇರಿ ನಗರ ಢಾಣೆ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅತಿಯಾಗಿ ಯೋಚಿಸುವವರಲ್ಲಿ ನೀವು ಒಬ್ಬರಾ? ಇದರಿಂದ ನಿಜವಾಗಿಯೂ ಆರೋಗ್ಯ ಹಾಳಾಗುತ್ತಾ?

ಇತ್ತೀಚಿನ ದಿನಗಳಲ್ಲಿ, ಅತಿಯಾಗಿ ಯೋಚಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಂಡುಬರುತ್ತಿದೆ. ಕೆಲಸದ ಒತ್ತಡ (Stress), ಭವಿಷ್ಯದ ಬಗ್ಗೆ ಚಿಂತೆ, ಕುಟುಂಬದ ಜವಾಬ್ದಾರಿಗಳು ಮತ್ತು ದೈನಂದಿನ ಸಮಸ್ಯೆಗಳು ಜನರನ್ನು ಅಗತ್ಯಕ್ಕಿಂತ ಹೆಚ್ಚು ಯೋಚಿಸುವಂತೆ ಮಾಡುತ್ತಿದೆ. ಸಣ್ಣ ಪುಟ್ಟ ವಿಷಯಗಳನ್ನು ಕೂಡ ಬಹಳ ಸಮಯದ ವರೆಗೆ ಯೋಚಿಸುವುದರಿಂದ ಮೆದುಳಿಗೆ ಸಾಕಷ್ಟು ಪ್ರಮಾಣದಲ್ಲಿ ವಿಶ್ರಾಂತಿ ಸಿಗುವುದಿಲ್ಲ. ಕ್ರಮೇಣ, ಈ ಅಭ್ಯಾಸವು ವ್ಯಕ್ತಿಯ ದೈನಂದಿನ ದಿನಚರಿಯ ಭಾಗವಾಗಿ ಆರೋಗ್ಯವನ್ನು ಹಾಳು ಮಾಡಬಹುದು. ತಜ್ಞರ ಪ್ರಕಾರ, ಒಬ್ಬ ವ್ಯಕ್ತಿ ನಿರಂತರವಾಗಿ ಯೋಚಿಸುವುದು ಮನಸ್ಸಿನ ಮೇಲೆ ಮಾತ್ರವಲ್ಲದೆ ದೇಹದ ಮೇಲೂ ಪರಿಣಾಮ ಬೀರುತ್ತದೆ. ಹಾಗಾದರೆ ನೀವು ಅತಿಯಾಗಿ ಯೋಚನೆ ಮಾಡುತ್ತಿದ್ದೀರಿ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ, ಇದನ್ನು ನಿಯಂತ್ರಿಸಲು ಏನು ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ದೆಹಲಿ ನಗರದ ನ್ಯೂರಾಲಜಿಸ್ಟ್ ಡಾ. ರಾಜೇಶ್ ಕುಮಾರ್ ಅವರ ಪ್ರಕಾರ, ಅತಿಯಾಗಿ ಯೋಚಿಸುವುದರಿಂದ ಮಾನಸಿಕ ಒತ್ತಡ ಹೆಚ್ಚುತ್ತದೆ. ಇದು ನಿರಂತರವಾಗಿ ಮುಂದುವರೆದರೆ ದೇಹದಲ್ಲಿ ಹಾರ್ಮೋನ್ ಸಮತೋಲನದ ಮೇಲೂ ಪರಿಣಾಮ ಬೀಳಬಹುದು. ಪರಿಣಾಮವಾಗಿ ತಲೆನೋವು, ದಣಿವು ಮತ್ತು ದುರ್ಬಲತೆ ಕಾಣಿಸಬಹುದು. ಕೆಲವರಿಗೆ ನಿದ್ರೆಯ ಸಮಸ್ಯೆಗಳೂ ಕೂಡ ಉಂಟಾಗಬಹುದು. ಉದಾಹರಣೆಗೆ ತಡವಾಗಿ ನಿದ್ರೆ ಬರುವುದು ಅಥವಾ ಮಧ್ಯರಾತ್ರಿ ಹಲವು ಬಾರಿ ಎಚ್ಚರವಾಗುವುದು. ಅಷ್ಟೇ ಅಲ್ಲ, ಹೆಚ್ಚಾಗಿ ಯೋಚಿಸುವ ಅಭ್ಯಾಸದಿಂದ ವ್ಯಕ್ತಿಯ ಗಮನ ಕೆಲಸ ಅಥವಾ ಓದಿನ ಕಡೆಗೆ ಕಡಿಮೆಯಾಗಬಹುದು. ಜೊತೆಗೆ ಕೆಲವರಲ್ಲಿ ಅಶಾಂತಿ, ಆತಂಕ ಮತ್ತು ಚಿಡಿಚಿಡಿಯಾಗುವುದು ಸೇರಿದಂತೆ ನಾನಾ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ದೀರ್ಘಕಾಲದ ಒತ್ತಡದಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳೂ ಕೂಡ ಉಂಟಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ವ್ಯಕ್ತಿ ಮಾನಸಿಕವಾಗಿ ದಣಿಯಬಹುದು ಮತ್ತು ದೈನಂದಿನ ಕೆಲಸಗಳನ್ನೂ ಮಾಡಲು ಕಷ್ಟವಾಗಬಹುದು.

ಇದನ್ನೂ ಓದಿ: ಒತ್ತಡದಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? ತಿಳಿದ್ರೆ ಶಾಕ್ ಆಗ್ತೀರಾ!

ಲಕ್ಷಣಗಳು ಹೇಗಿರುತ್ತವೆ?

ಹೆಚ್ಚಾಗಿ ಯೋಚಿಸುವವರಲ್ಲಿ ಕೆಲವು ಸಾಮಾನ್ಯ ಲಕ್ಷಣಗಳು ಕಂಡುಬರುತ್ತವೆ. ಅವುಗಳಲ್ಲಿ ಸಣ್ಣ ವಿಷಯಗಳಿಗೂ ಹೆಚ್ಚು ಚಿಂತೆ ಮಾಡುವುದು, ಮನಸ್ಸನ್ನು ಶಾಂತವಾಗಿಡಲು ಕಷ್ಟವಾಗುವುದು, ರಾತ್ರಿ ಸರಿಯಾಗಿ ನಿದ್ರೆ ಬರದಿರುವುದು ಅಥವಾ ನಿದ್ರೆ ಮಧ್ಯದಲ್ಲಿ ಪದೇ ಪದೇ ಎಚ್ಚರವಾಗುವುದು ಸೇರಿದಂತೆ ನಾನಾ ರೀತಿಯ ಲಕ್ಷಣಗಳು ಕಂಡುಬರಬಹುದು. ಜೊತೆಗೆ ದಣಿವು, ಕೆಲಸದ ಮೇಲೆ ಗಮನ ಕೊಡಲು ಸಾಧ್ಯವಾಗದಿರುವುದು ಮತ್ತು ನಿರಂತರ ಚಿಂತೆ ಕೂಡ ಅನುಭವಕ್ಕೆ ಬರಬಹುದು.

ಹೇಗೆ ನಿಯಂತ್ರಿಸಬಹುದು?

ಹೆಚ್ಚಾಗಿ ಯೋಚಿಸುವ ಅಭ್ಯಾಸವನ್ನು ಕಡಿಮೆ ಮಾಡಲು ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡುವುದು ಸಹಾಯಕ. ನಿಯಮಿತ ವ್ಯಾಯಾಮ, ಯೋಗ ಮತ್ತು ಧ್ಯಾನ ಮಾಡುವುದರಿಂದ ಮನಸ್ಸು ಶಾಂತವಾಗಿರಲು ಸಹಾಯವಾಗುತ್ತದೆ. ಸಾಕಷ್ಟು ನಿದ್ರೆ ಪಡೆಯುವುದು ಮತ್ತು ಸಮತೋಲನಯುತ ದಿನಚರಿಯನ್ನು ಪಾಲಿಸುವುದು ಕೂಡ ಮುಖ್ಯ. ಒತ್ತಡ ಅಥವಾ ಆತಂಕ ದೀರ್ಘಕಾಲ ಮುಂದುವರೆದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊನಾಲಿಸಾ ಮದುವೆ ಆದ ಮೊಹಮ್ಮದ್ ಫರ್ಮಾನ್ ಯಾರು? ಲವ್ ಆಗಿದ್ದು ಹೇಗೆ?

ಕುಂಬಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ (Monalisa Bhosle) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಂಟರ್​ನೆಟ್​​ನಲ್ಲಿ ಅವರು ಆ ಪರಿ ಸೆನ್ಸೇಷನ್ ಸೃಷ್ಟಿ ಮಾಡಿದ್ದರು. ಈಗ ಅವರ ಮದುವೆಯ (Monalisa Bhosle Marriage) ವಿಷಯ ಸಖತ್ ಚರ್ಚೆ ಆಗುತ್ತಿದೆ. ಯಾವುದೇ ಸೂಚನೆ ನೀಡಿದೇ ಸಡನ್ ಆಗಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಸ್ಲಿಂ ಸಮುದಾಯದ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿಸಾ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಅಷ್ಟಕ್ಕೂ ಈ ಮೊಹಮ್ಮದ್ ಫರ್ಮಾನ್ (Muhammad Farman) ಯಾರು? ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ರುದ್ರಾಕ್ಷಿ ಮಾಲೆ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಮೊನಾಲಿಸಾ ಭೋಸ್ಲೆ ಅವರಿಗೆ ಚಿತ್ರರಂಗದಿಂದ ಅವಕಾಶ ಸಿಕ್ಕಿದ್ದು ಗೊತ್ತೇ ಇದೆ. ನಟಿಯಾಗಿ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡಿದ ಬಳಿಕ ಅವರಿಗೆ ಮೊಹಮ್ಮದ್ ಫರ್ಮಾನ್ ಪರಿಚಯ ಆಯಿತು. ಮೊಹಮ್ಮದ್ ಫರ್ಮಾನ್ ಕೂಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ವ್ಯಕ್ತಿ. ಅವರು ನಟನಾಗಿ ಮತ್ತು ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಉತ್ತರ ಪ್ರದೇಶ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.

ಮೊಹಮ್ಮದ್ ಫರ್ಮಾನ್ ಮತ್ತು ಮೊನಾಲಿಸಾ ಭೋಸ್ಲೆ ನಡುವೆ ಪರಿಚಯ ಬೆಳೆದಿದ್ದು ಸೋಶಿಯಲ್ ಮೀಡಿಯಾ ಮೂಲಕ. ನಂತರ ಅವರು ಶೂಟಿಂಗ್ ಸೆಟ್​​ನಲ್ಲಿ ಭೇಟಿಯಾದರು. ಇಬ್ಬರ ನಡುವೆ ಪ್ರೀತಿ ಬೆಳೆಯಿತು. 6 ತಿಂಗಳ ಕಾಲ ಡೇಟಿಂಗ್ ಮಾಡಿದ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. ಬೇರೆ ಬೇರೆ ಧರ್ಮದವರಾದ ಕಾರಣ ಅವರ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ವಿರೋಧದ ನಡುವೆಯೂ ಅವರು ಮದುವೆ ಆಗಿದ್ದಾರೆ.

ವಿಶೇಷ ಏನೆಂದರೆ, ಮೊಹಮ್ಮದ್ ಫರ್ಮಾನ್​​ಗೆ ಮೊದಲು ಪ್ರೊಪೋಸ್ ಮಾಡಿದ್ದೇ ಮೊನಾಲಿಸಾ ಭೋಸ್ಲೆ! ಮದುವೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ‘ಮೊನಾಲಿನಾ ಪ್ರೊಪೋಸ್ ಮಾಡಿದಳು. ನಾನು ಮೊದಲು ಒಪ್ಪಿಕೊಳ್ಳಲಿಲ್ಲ. ಆಮೇಲೆ ಆಕೆ ನನ್ನ ಮನವೊಲಿಸಿದಳು’ ಎಂದು ಮೊಹಮ್ಮದ್ ಫರ್ಮಾನ್ ಹೇಳಿದ್ದಾರೆ.

ಇದನ್ನೂ ಓದಿ: ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

ಕಳೆದ 6 ತಿಂಗಳಿಂದ ಮೊನಾಲಿಸಾ ಹಾಗೂ ಮೊಹಮ್ಮದ್ ಫರ್ಮಾನ್ ಪ್ರೀತಿಸುತ್ತಿದ್ದರು. ಅದರ ಬಗ್ಗೆ ಫರ್ಮಾನ್ ಮಾತನಾಡಿದ್ದಾರೆ. ‘ಈ ಆರು ತಿಂಗಳುಗಳು ನಮಗೆ 60 ವರ್ಷದ ಪ್ರೀತಿಯ ಹಾಗೆ ಅನಿಸಿತು. ಆದಕ್ಕಾಗಿಯೇ ನಾವು ಮದುವೆ ಆಗಲು ನಿರ್ಧರಿಸಿದೆವು’ ಎಂದು ಅವರು ಹೇಳಿದ್ದಾರೆ. ಕೇರಳದ ದೇವಸ್ಥಾನವೊಂದರಲ್ಲಿ ಹಿಂದೂ ಧರ್ಮದ ಪ್ರಕಾರ ಈ ಮದುವೆ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ?

Source link

ಬಸ್ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ, ಊಟಕ್ಕೆ ನಿಲ್ಲಿಸಿದಾಗ ಕೃತ್ಯ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಪೊಲೀಸರು ಆರೋಪಿ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಬಸ್ ಊಟಕ್ಕೆ ನಿಲ್ಲಿಸಿದಾಗ ಕೃತ್ಯ

ಈ ದರೋಡೆ ಘಟನೆ ಕೊಪ್ಪಳ ಹೊರವಲಯದಲ್ಲಿರುವ Tawa Punjab Hotel ಮುಂಭಾಗದಲ್ಲಿ ನಡೆದಿದೆ. ಮಂತ್ರಾಲಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್, ರಾಷ್ಟ್ರೀಯ ಹೆದ್ದಾರಿ 63ಕ್ಕೆ ಹೊಂದಿಕೊಂಡ ತವ ಪಂಜಾಬ್ ಹೊಟೇಲ್​​ ಬಳಿ ನಿಲ್ಲಿಸಿದೆ. ಆ ವೇಳೆ ಬಸ್‌ನಲ್ಲೇ ಮಲಗಿದ್ದ ಮಹಮ್ಮದ್ ಮತ್ತು ಇರ್ಷಾದ್ ಎಂಬ ಪ್ರಯಾಣಿಕರ ಬಳಿಯಿದ್ದ ಬಂಗಾರದ ಚೀಲವನ್ನು ಖದೀಮ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ: KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ಅರೆಸ್ಟ್​​

ಪ್ರಾಥಮಿಕ ತನಿಖೆಯ ಪ್ರಕಾರ, ಈ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸಿಂಧನೂರಿನಿಂದ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್‌ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಸೇರಿಕೊಂಡು ಈ ದರೋಡೆ ಕೃತ್ಯವನ್ನು ಸಂಚು ರೂಪಿಸಿ ನಡೆಸಿದ್ದಾರೆ.

ಖದೀಮರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಹೋಟೆಲ್ ಮುಂಭಾಗದಲ್ಲಿದ್ದ ಸಿಸಿ ಕ್ಯಾಮರದಲ್ಲಿ ಈ ದರೋಡೆ ಕೃತ್ಯದ ಸಂಪೂರ್ಣ ದೃಶ್ಯ ದಾಖಲಾಗಿದ್ದು, ಆರೋಪಿಗಳು ಹೇಗೆ ಬಸ್‌ಗೆ ಹತ್ತಿ ಬಂಗಾರದ ಚೀಲವನ್ನು ಕದ್ದುಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಅವರದ್ದೇ ಆಗ ಸಿಗ್ನಲ್‌ಗಳು ಒಬ್ಬೊಬ್ಬರಂತೆ ಬಂದು ಕಾಯುತ್ತಿರುವುದು ಕಂಡುಬಂದಿದೆ. ಈ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಾವಳಿ ಹಾಗೂ ಬಸ್ ಪ್ರಯಾಣಿಕರ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ದರೋಡೆ ನಡೆಸಿದ ನಾಲ್ವರು ಖದೀಮರು ಯಾವ ದಿಕ್ಕಿಗೆ ಪರಾರಿಯಾಗಿದ್ದಾರೆ ಎಂಬುದರ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ನಾಲ್ವರು ಸೇರಿಕೊಂಡು ದರೋಡೆ

ಖದೀಮರ ಪೈಕಿ ಓರ್ವ ಅದೇ ಬಸ್​​ನಲ್ಲಿ ಇದ್ದರೆ ಇನ್ನುಳಿದ ದರೋಡೆಕೋರರು ಬೊಲೆರೋ ವಾಹನದಲ್ಲಿ ಬಸ್ ಹಿಂಬಾಲಿಸಿಕೊಂಡು ಬಂದಿದ್ದಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಮಹಮ್ಮದ್ ಮತ್ತು ಇರ್ಷಾದ್ ಚಿನ್ನಾಭರಣದ ಚೀಲವನ್ನು ಎಲ್ಲಿಂದ ತಂದಿದ್ದಾರೆ ಎನ್ನುವುದನ್ನು ಮೊದಲೇ ನೋಡಿದ್ದಾರೆ. ಹೀಗಾಗಿ ಅವರು ಇದ್ದ ಬಸ್ ಫಾಲೋ ಮಾಡಿಕೊಂಡು ಬಂದಿದ್ದು, ಬಳಿಕ ಸಿಂಧನೂರಿನಲ್ಲಿ ಓರ್ವ ಖದೀಮ ಬಸ್ ಏರಿದ್ದು, ಇನ್ನುಳಿದವರು ಬಸ್ ಫಾಲೋ ಮಾಡಿಕೊಂಡು ಬಂದು ಈ ಕೃತ್ಯ ಎಸಗಿದ್ದಾರೆ. ಇನ್ನು ಮಂತ್ರಾಲಯದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಮಹಮ್ಮದ್ ಮತ್ತು ಇರ್ಷಾದ್ ಎಂಬವರು ಚಿನ್ನದ ಚೀಲದ ಮೇಲೆ ಸಾಕಷ್ಟು ಪ್ರಶ್ನೆಗಳು ಉದ್ಭವಿಸಿವೆ. ಇಷ್ಟೊಂದು ಮೌಲ್ಯದ ಚಿನ್ನ, ವಜ್ರಾಭರಣವನ್ನು ಎಲ್ಲಿಂದ ತೆಗೆದುಕೊಂಡು ಹೋಗುತ್ತಿದ್ದರು? ಅಸಲಿಗೆ ಮಾಲು ಯಾರಿಗೆ ಸೇರಿದ್ದು ಎಂದು ಹೀಗೆ ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link