ಮನೆಯಲ್ಲೇ ಅಡುಗೆ ಮಾಡಿಕೊಳ್ಳಿ, ತಿನ್ನಿ, ಕೆಲಸ ಮಾಡಿ: ಎಲ್ಪಿಜಿ ಸಮಸ್ಯೆಗೆ ಎಚ್ಸಿಎಲ್ನಿಂದ ವರ್ಕ್ ಫ್ರಂ ಹೋಮ್ ಪರಿಹಾರ
ನವದೆಹಲಿ, ಮಾರ್ಚ್ 12: ಅಡುಗೆ ಅನಿಲದ ಕೊರತೆ ಭಾರತಾದ್ಯಂತ ಕಾಡುತ್ತಿದೆ. ಅದರಲ್ಲೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ಗಳು (LPG cylinder) ದುಬಾರಿಯಾಗಿರುವುದು ಮಾತ್ರವಲ್ಲ, ಅವು ಸಿಗುವುದೇ ದುಸ್ತರವಾಗಿದೆ. ಬೆಂಗಳೂರಿನ ಅನೇಕ ಹೋಟೆಲ್ಗಳು ಈ ಬಿಕ್ಕಟ್ಟು ಬಗೆಹರಿಯುವವರೆಗೂ ಬಾಗಿಲು ಬಂದ್ ಮಾಡಲು ನಿರ್ಧರಿಸಿವೆ. ಕಾರ್ಪೊರೇಟ್ ಸಂಸ್ಥೆಗಳೂ ಕೂಡ ಈ ಬಿಸಿ ತಾಕಿಸಿಕೊಂಡಿವೆ. ಉದ್ಯೋಗಿಗಳಿಗೆ ದಿನವೂ ಅಡುಗೆ ಮಾಡಿಕೊಡಬೇಕಾದ ಕಾರ್ಪೊರೇಟ್ ಕಂಪನಿಗಳ ಕೆಫೆಟೇರಿಯಾಗಳಿಗೆ ಕಮರ್ಷಿಯಲ್ ಗ್ಯಾಸ್ ಸಿಗುವುದು ಕಷ್ಟವಾಗಿದೆ. ಹೀಗಾಗಿ, ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ಕಲ್ಪಿಸಲು…