ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ – Kannada News | Five Members of a Family Found Dead in Suspected Suicide Case in Mathura
ಮಥುರಾ, ಫೆಬ್ರವರಿ 10: ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರು ಎಚ್ಚರಗೊಳ್ಳದಿದ್ದಾಗ, ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಐವರೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು…