ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ; ರಾಹುಲ್ ಭಾಟಿಯಾ ಹಂಗಾಮಿ ಮುಖ್ಯಸ್ಥ
ನವದೆಹಲಿ, ಮಾರ್ಚ್ 10: ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ಲೈನ್ಸ್ ಸಂಸ್ಥೆಯ ಸಿಇಒ ಪೀಟರ್ ಎಲ್ಬರ್ಸ್ (Pieter Elbers) ರಾಜೀನಾಮೆ ನೀಡಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಪೈಲಟ್ಗಳಿಲ್ಲದೇ ಹಲವಾರು ಫ್ಲೈಟ್ಗಳು ಸ್ಥಗಿತಗೊಂಡ ಬಳಿಕ ಸಿಇಒ ತಲೆದಂಡವಾಗಬಹುದು ಎನ್ನುವ ನಿರೀಕ್ಷೆ ಇತ್ತು. ಅಂತೆಯೇ ಪೀಟರ್ಸ್ ರಾಜೀನಾಮೆ ಕೊಟ್ಟಿದ್ದಾರೆ. ಇಂದು ಮಂಗಳವಾರ ಅವರ ರಾಜೀನಾಮೆ ನಿರ್ಧಾರವನ್ನು ಇಂಡಿಗೋ ಸಂಸ್ಥೆ ಪ್ರಕಟಿಸಿದೆ. ಸಂಸ್ಥೆಯ ನಿರ್ವಾಹಕ ನಿರ್ದೇಶಕ ರಾಹುಲ್ ಭಾಟಿಯಾ ಅವರು ಹಂಗಾಮಿ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಇಂಡಿಗೋದ ಮಾಲಕಸಂಸ್ಥೆಯಾದ ಇಂಟರ್ಗ್ಲೋಬ್ ಏವಿಯೇಶನ್ನ ಪ್ರೊಮೋಟರ್…