Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!
ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ…