ಹಣ್ಣಿನ ರಾಜನಿಗೆ ಇದೆಂಥಾ ಸ್ಥಿತಿ: ಭಾರೀ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರಿಗೆ ಆಘಾತ
ರಾಮನಗರ, ಮಾರ್ಚ್ 10: ಮಾವು (Mango Crop) ಬೆಂಗಳೂರು ದಕ್ಷಿಣ ಜಿಲ್ಲೆಯ ರೈತರ ಪ್ರಮುಖ ಬೆಳೆ. ರಾಜ್ಯದಲ್ಲಿಯೇ ಮಾವು ಬೆಳೆಗೆ ಎರಡನೇ ಸ್ಥಾನದಲ್ಲಿದೆ. ಈ ಬಾರಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರಿದ್ದರು. ಆದರೆ ಹವಮಾನ ವೈಪರೀತ್ಯದಿಂದಾಗಿ ಮಾವು ಬೆಳೆ ರೈತರಿಗೆ ಕೈಕೊಟ್ಟಿದೆ. ಹೀಗಾಗಿ ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರಮುಖ ತೋಟಗಾರಿಕಾ ಬೆಳೆಯಾದ ಮಾವು ಸದ್ಯ ರೈತರಿಗೆ ಕೈಕೊಟ್ಟಿದೆ. ಅಂದಹಾಗೆ ಈ ಬಾರಿ ಜಿಲ್ಲೆಯಾದ್ಯಂತ ಮಾವಿನ ಮರಗಳಲ್ಲಿ ವ್ಯಾಪಕವಾಗಿ…