ಶಾರ್ಟ್ ಸರ್ಕೂಟ್ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಾಮರಾಜನಗರ, ಮಾರ್ಚ್ 10: ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಚೇರಿಯ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ, ಘಟನಾ ಸ್ಥಳಕ್ಕೆ ಡಿವೈಎಸ್ಪಿ ಧರ್ಮೇಂದ್ರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಬೆಂಕಿ ಆಕಸ್ಮಿಕ ಘಟನೆಯೇ ಅಥವಾ ಪೂರ್ವನಿಯೋಜಿತ…