ಎಲ್ಪಿಜಿ ಪೂರೈಕೆ ವ್ಯತ್ಯಯ: ಬೆಂಗಳೂರು ಆಯ್ತು ಈಗ ಮೈಸೂರಲ್ಲೂ ಹೋಟೆಲ್ ಬಂದ್ ಆತಂಕ
ಮೈಸೂರು, ಮಾರ್ಚ್ 10: ಇರಾನ್-ಇಸ್ರೇಲ್ ಯುದ್ಧ ಜಾಗತಿಕವಾಗಿ ಸಮಸ್ಯೆಯನ್ನು ತಂದೊಡ್ಡಿದ್ದು, ಅದರ ಬಿಸಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ ಮಾಲೀಕರು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಹಿಂದೆ ಸುಲಭವಾಗಿ ಸಿಗುತ್ತಿದ್ದ ಸಿಲಿಂಡರ್‌ಗಳು ಈಗ ಆರ್ಡರ್ ಮಾಡಿ ಮೂರು ದಿನಗಳ ನಂತರವೂ ಸಿಗುತ್ತಿಲ್ಲ. ಇದರ ಜೊತೆಗೆ, ಮೂರು ಬಾರಿ ವಾಣಿಜ್ಯ ಸಿಲಿಂಡರ್ ಬೆಲೆ…