ಭಾರತದ ಗೆಲುವಲ್ಲ, ಇವರೇ ತಟ್ಟೆಯಲ್ಲಿಟ್ಟು ನೀಡಿದ ‘ಗಿಫ್ಟ್’
ಮಳೆ ನಿಂತರೂ ಹನಿ ನಿಂತಿಲ್ಲ ಎಂಬಂತೆ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಚರ್ಚೆ ಮುಂದುವರೆದಿದೆ. ಮಾರ್ಚ್ 8 ರಂದು ಅಹಮದಾಬಾದ್ನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 255 ರನ್ಗಳು….