Headlines

IND vs NZ: ಸಿರಾಜ್ ಜೆರ್ಸಿ, ದುಬೆ ಬ್ಯಾಟ್.. ಫಾರ್ಮ್​ ಕಂಡುಕೊಳ್ಳಲು ಅಭಿಷೇಕ್ ಕಸರತ್ತು

ಇಡೀ ಟಿ20 ವಿಶ್ವಕಪ್​ನಲ್ಲಿ ( T20 World Cup) ರನ್ ಬರ ಎದುರಿಸಿದ್ದ ಅಭಿಷೇಕ್ ಶರ್ಮಾ (Abhishek Sharma), ಫೈನಲ್​ನಲ್ಲಿ ಅಬ್ಬರದ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸಂಜು ಸ್ಯಾಮ್ಸನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ ಹಿಂದಿನ ವೈಫಲ್ಯಗಳನ್ನು ಮರೆತು ಬ್ಯಾಟ್ ಬೀಸಿದರು. ಅದರ ಪರಿಣಾಮವಾಗಿ ಕೇವಲ 18 ಎಸೆತಗಳಲ್ಲಿ ತಮ್ಮ ಟಿ20 ವಿಶ್ವಕಪ್​ನ ಎರಡನೇ ಅರ್ಧಶತಕವನ್ನು ದಾಖಲಿಸಿದರು. ಆದರೆ ಅರ್ಧಶತಕದ ಬಳಿಕ ಹೆಚ್ಚು ಹೊತ್ತು ನಿಲ್ಲದ ಅಭಿಷೇಕ್ 21 ಎಸೆತಗಳಲ್ಲಿ…

Read More

ಆಂಬ್ಯುಲೆನ್ಸ್ ನೀಡಲು ನಿರಾಕರಣೆ: ಕಣ್ಣೀರು ಹಾಕುತ್ತ ಮಗುವಿನ ಮೃತ ದೇಹವನ್ನು ರಟ್ಟಿನ ಪೆಟ್ಟಿಗೆಯಲ್ಲಿ ಕೊಂಡೊಯ್ದ ತಂದೆ

ಚಕ್ರಧರಪುರ ಮಾ.9: ಸರ್ಕಾರಿ ಆಸ್ಪತ್ರೆ ಎಂದು ಮೂಗು ಮುರಿಯಲು ಇಂತಹ ಕೆಲವೊಂದು ಅಮಾನವೀಯ ಘಟನೆಗಳೇ ಕಾರಣ, ಇದೀಗ ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯೆಂಬಂತೆ ಜಾರ್ಖಂಡ್‌ನಲ್ಲಿ (Jharkhand) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಆಸ್ಪತ್ರೆಯು ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ ಕಾರಣ, ತಂದೆಯೊಬ್ಬರು ತನ್ನ ಮೃತ ಮಗುವಿನ ದೇಹವನ್ನು ಹಳೆಯ ರಟ್ಟಿನ ಪೆಟ್ಟಿಗೆಯಲ್ಲಿ ಹಾಕಿ ಅಳುತ್ತಲೇ ಊರಿಗೆ ಕೊಂಡೊಯ್ದಿದ್ದಾರೆ.ರಾಮಕೃಷ್ಣ ಹೇಂಬ್ರಾಮ್ ಎಂಬವರು ಮಾರ್ಚ್ 5 ರಂದು ತಮ್ಮ ಗರ್ಭಿಣಿ ಪತ್ನಿ ರೀತಾ ತಿರಿಯಾ (28) ಅವರನ್ನು ಚಕ್ರಧರಪುರದ ಉಪವಿಭಾಗದ ಆಸ್ಪತ್ರೆಗೆ…

Read More

ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್

ಬೆಂಗಳೂರು, (ಮಾರ್ಚ್ 09): ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಇನ್ನು ಜೈಲಿನಲ್ಲಿ ಕೈದಿಗಳ ಉಟೋಪಚಾರದಲ್ಲೂ ಸಹ ಕೆಲ ಮಹತ್ವದ ಬದಲಾವಣೆ ತಂದಿದ್ದು, ಇದೀಗ ಜೈಲುಗಳಲ್ಲಿರುವ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್ ಮಾಡಿದ್ದಾರೆ. ಕೈದಿಗಳಿಗೆ ಗಂಭೀರ…

Read More

84 ವರ್ಷದ ವೃದ್ಧೆ ನಿಗೂಢ ಸಾವು: ಚಿನ್ನಾಭರಣ, ಹಣಕ್ಕಾಗಿ ನಡೀತಾ ಕೊಲೆ?

ಚಾಮರಾಜನಗರ, ಮಾರ್ಚ್​ 09: ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ ವೃದ್ಧೆಯೋರ್ವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ನಡೆದಿದೆ. ಮಕ್ಕಳ ಆಸರೆ ಪಡೆಯದೆ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸಿದ್ದಮ್ಮ (84) ಹಠಾತ್​​ ಆಗಿ ಮೃತಪಟ್ಟಿರೋದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇವರ ಮೈಮೇಲಿದ್ದ ಒಡವೆ ಮಾಯವಾಗಿರೋದು ಸಾವಿನ ಬಗ್ಗೆ ಎದ್ದಿರುವ ಅನುಮಾನಗಳಿಗೆ ಮತ್ತಷ್ಟು ಇಂಬು ನೀಡಿವೆ. ಹಣ, ಒಡವೆಯ ಆಸೆಗೆ ತಾಯಿಯನನು ಕೊಲೆ ಮಾಡಲಾಗಿದೆ ಎಂದು ಮಕ್ಕಳು ಆರೋಪಿಸಿದ್ದಾರೆ. ಆಭರಣ ಮತ್ತು…

Read More

ಅರ್ಷದೀಪ್ ಮಾಡಿದ ಕೆಲಸಕ್ಕೆ ಕೆರಳಿದ ಮಿಚೆಲ್..! ಜಗಳ ತಪ್ಪಿಸಿದ ಸೂರ್ಯ; ವಿಡಿಯೋ ವೈರಲ್

ಕ್ರಿಕೆಟ್ ಲೋಕದ ಅತ್ಯಂತ ಜಂಟಲ್‌ಮ್ಯಾನ್ ತಂಡಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಏಕೆಂದರೆ ಕಿವೀಸ್ ಆಟಗಾರರು ಕ್ರಿಕೆಟ್ ನಿಯಮಗಳನ್ನು ಮುರಿಯುವುದಾಗಲ್ಲಿ, ಮೈದಾನದಲ್ಲಿ ತಾಳ್ಮೆ ಕಳೆದುಕೊಂಡು ವರ್ತಿಸುವುದಾಗಲಿ, ಎದುರಾಳಿ ತಂಡದ ಆಟಗಾರರೊಂದಿಗೆ ಅಸಭ್ಯವಾಗಿ ವರ್ತಿಸುವುದನ್ನು ನಾವು ನೋಡುವುದು ತೀರ ವಿರಳ. ಹೀಗಾಗಿ ಇಡೀ ವಿಶ್ವ ಕ್ರಿಕೆಟ್​ ನ್ಯೂಜಿಲೆಂಡ್ ತಂಡಕ್ಕೆ ಸಲಾಂ ಹೊಡೆಯುತ್ತದೆ. ಅಂತಹದಲ್ಲಿ ಕಿವೀಸ್ ತಂಡದ ಆಟಗಾರನೊಬ್ಬ ಲೈವ್ ಪಂದ್ಯದ ವೇಳೆ ತಾಳ್ಮೆ ಕಳೆದುಕೊಂಡು ಎದುರಾಳಿ ತಂಡದ ಆಟಗಾರನೊಂದಿಗೆ ವಾಗ್ವಾದಕ್ಕಿಳಿದ ಘಟನೆಯೊಂದು ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನಡೆದಿದೆ….

Read More

ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ: ರಫ್ತಿನ ದರದಲ್ಲಿ ಗಣನೀಯ ಏರಿಕೆ

ಹಾವೇರಿ, ಮಾರ್ಚ್​ 09: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿ ಹಿನ್ನೆಲೆ ಹಾವೇರಿಯ ಪ್ರಸಿದ್ಧ ಬ್ಯಾಡಗಿ ಮೆಣಸಿನ ಮಾರುಕಟ್ಟೆಗೂ ಯುದ್ಧದ ಬಿಸಿ ತಟ್ಟಿದೆ. ಗಲ್ಫ್ ರಾಷ್ಟ್ರಗಳಿಗೆ ಆಗುತ್ತಿದ್ದ ಬ್ಯಾಡಗಿ ಮೆಣಸು ರಫ್ತಿನ ಮೇಲೆ ಪರಿಣಾಮ ಉಂಟಾಗಿದೆ. ಮಸಾಲೆ ಪದಾರ್ಥಗಳು ಮತ್ತು ಸೌಂದರ್ಯವರ್ಧಕ ತಯಾರಿಕೆಗೆ ಬಳಕೆಯಾಗುವ ಈ ಮೆಣಸು ಮಲೇಷಿಯಾ, ಸಿಂಗಾಪುರ, ಇಂಡೋನೇಷಿಯಾ, ಬಾಲಿ, ಥೈಲ್ಯಾಂಡ್, ಇಸ್ರೇಲ್, ಇರಾನ್, ಅಮೆರಿಕಕ್ಕೆ ರಫ್ತಾಗುತ್ತಿತ್ತು. ಯುದ್ಧದ ಹಿನ್ನೆಲೆ ಈ ಮೊದಲು 1800 US ಡಾಲರ್ ಇದ್ದ ಕಂಟೇನರ್ ಬಾಡಿಗೆ…

Read More

ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ

ದರ್ಶನ್ ಬಗ್ಗೆ ಜನರಿಗೆ ಯಾವ ರೀತಿ ಕ್ರೇಜ್ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ದರ್ಶನ್ (Darshan) ಫೋಟೋ ಎದುರು ಈ ಜೋಡಿ ಮದುವೆ ಆಗಿದೆ. ಮದುವೆ ಬಳಿಕ ನವ ದಂಪತಿ ರಾಜರಾಜೇಶ್ವರಿ ನಗರದ ದರ್ಶನ್ ಮನೆ ಮುಂದೆ ಬಂದಿದ್ದಾರೆ. ದರ್ಶನ್ ಅವರ ಆಶೀರ್ವಾದ ಪಡೆಯಬೇಕು ಎಂಬುದು ಈ ಜೋಡಿಯ ಆಸೆ ಆಗಿತ್ತು. ಅಚ್ಚರಿ ಎಂದರೆ ಹುಡುಗನ ಹೆಸರು ದರ್ಶನ್, ಹುಡುಗಿ ಹೆಸರು ವಿಜಯಲಕ್ಷ್ಮಿ! ‘ದರ್ಶನ್ ಫೋಟೋ ಮುಂದೆ ತಾಳಿ ಕಟ್ಟಿದ್ದು. ಅವರ ಮನೆ ಎದುರೇ ತಾಳಿ…

Read More

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಷ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

ನವದೆಹಲಿ, ಮಾರ್ಚ್ 9: ಭಾರತದ ಬತ್ತಳಿಕೆಯಲ್ಲಿರುವ ಯುದ್ಧಾಸ್ತ್ರಗಳಲ್ಲಿ ಪ್ರಮುಖವಾಗಿರುವ ಬ್ರಹ್ಮೋಸ್ ಮಿಸೈಲ್ ಸಿಸ್ಟಂ (Brahmos missile system) ಅನ್ನು ಖರೀದಿಸಲು ಇಂಡೋನೇಷ್ಯಾ ಒಪ್ಪಂದ ಮಾಡಿಕೊಂಡಿದೆ. ಈ ವಿಚಾರವನ್ನು ಇಂಡೋನೇಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರರಾದ ರಿಕೋ ರಿಕಾರ್ಡೊ ಸಿರಾಯ್ಟ್ ಅವರೇ ಖುದ್ದಾಗಿ ಮಾಹಿತಿ ನೀಡಿದ್ದಾರೆ. 2023ರಲ್ಲೇ ಭಾರತ ಮತ್ತು ಇಂಡೋನೇಷ್ಯಾ ನಡುವೆ ಈ ಒಪ್ಪಂದ ಸಂಬಂಧ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿತ್ತು. ಈ ಡೀಲ್ ಸುಮಾರು 200 ಮಿಲಿಯನ್ ಡಾಲರ್​ನಿಂದ 350 ಮಿಲಿಯನ್ ಡಾಲರ್ ಇರಬಹುದು. ಅಂದರೆ…

Read More

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2024 ರ ಟಿ20 ವಿಶ್ವಕಪ್ (T20 World Cup) ಮುಗಿದ ಬಳಿಕ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕನಾಗಿ ತಂಡವನ್ನು ದಾಖಲೆಯ ಗೆಲುವುಗಳತ್ತ ಮುನ್ನಡೆಸಿದ್ದಾರೆ. ಆದಾಗ್ಯೂ ಆಟಗಾರನಾಗಿ ಸೂರ್ಯಕುಮಾರ್ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಬರೋಬ್ಬರಿ 1 ವರ್ಷದಿಂದ ರನ್ ಬರ ಎದುರಿಸಿದ್ದರು. ಆದರೆ ವಿಶ್ವಕಪ್ ಸಮೀಪವಾಗುತ್ತಿದ್ದಂತೆ ಫಾರ್ಮ್​ ಕಂಡುಕೊಂಡಿದ್ದ ಸೂರ್ಯ, ಇದೀಗ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ…

Read More

ಸ್ಕೂಟರ್ ನಿರಾಕರಿಸಿದ್ದಕ್ಕೆ ಗೆಳತಿ ಮತ್ತು ಆಕೆಯ ಪೋಷಕರ ಮೇಲೆ ಬೆಂಕಿ ಹಚ್ಚಿದ ಬೆಂಗಳೂರಿನ ವ್ಯಕ್ತಿ

ಬೆಂಗಳೂರು, ಮಾ.9: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ತಾರಕಕ್ಕೇರಿ, ಯುವತಿ ಮತ್ತು ಆಕೆಯ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಸಂಬಂಧ ನಂದಿನಿ ಲೇಔಟ್ ನಿವಾಸಿ ಪಾಂಡುರಂಗ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತರಬನಹಳ್ಳಿಯಲ್ಲಿ ವಾಸವಾಗಿರುವ ಸುಮಲತಾ (27) ಮತ್ತು ಪಾಂಡುರಂಗ ನಡುವೆ ಸಂಬಂಧವಿತ್ತು ಎನ್ನಲಾಗಿದೆ. ಸೋಮವಾರ ಸುಮಲತಾ ಮನೆಗೆ ಬಂದ ಪಾಂಡುರಂಗ, ಆಕೆಯ ದ್ವಿಚಕ್ರ ವಾಹನವನ್ನು (ಸ್ಕೂಟರ್) ನೀಡುವಂತೆ ಕೇಳಿದ್ದಾನೆ. ಸುಮಲತಾ ಸ್ಕೂಟರ್ ನೀಡಲು ನಿರಾಕರಿಸಿದಾಗ ಇಬ್ಬರ…

Read More