ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ ಯಾದವ್ ‘ಸ್ಥಾನ’ಕ್ಕೆ ಕುತ್ತು!
T20 World Cup 2026: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಯಶಸ್ಸಿನೊಂದಿಗೆ ಟೀಮ್ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರೆಯುವುದು ಅನುಮಾನ. ಏಕೆಂದರೆ ಬಿಸಿಸಿಐ 2026ರ ಟಿ20 ವಿಶ್ವಕಪ್ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇದೀಗ ಅವರು ವಯಸ್ಸು 35 ವರ್ಷ. ಮುಂಬರುವ ಟಿ20 ವಿಶ್ವಕಪ್ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದೇ ಹೇಳಬಹುದು….