ಕಸ್ಟಮರ್ ಮನೆಯಲ್ಲಿ ಚಿನ್ನ ಕದ್ದ ಕ್ಯಾಬ್ ಚಾಲಕ ಲಾಕ್: ದೋಚಿದ್ದಿದ್ದು ಬರೋಬ್ಬರಿ 25 ಲಕ್ಷ ಮೌಲ್ಯದ ಬಂಗಾರ!
ಬೆಂಗಳೂರು, ಮಾರ್ಚ್ 09: ಕಸ್ಟಮರ್ ಮನೆಯಲ್ಲಿ 25 ಲಕ್ಷ ಮೌಲ್ಯದ ಚಿನ್ನಾಭರಣ ದೊಚ್ಚಿದ್ದ ಕ್ಯಾಬ್ ಚಾಲಕನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೆಹಮಾನ್ ಬಂಧಿತ ಆರೋಪಿಯಾಗಿದ್ದು, ಚಿನ್ನಾಭರಣ ಸಮೇತ ಚಾಲಕನನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಫೆಬ್ರವರಿ 11 ಶಾಪಿಂಗ್ಗೆ ಮುಂಬೈಗೆ ಹೊರಟಿದ್ದ ದಂಪತಿ, ಹೆಬ್ಬಾಳದಿಂದ ಯಶವಂತಪುರಕ್ಕೆ ಕ್ಯಾಬ್ ಬುಕ್ ಮಾಡಿದ್ದರು. ಈ ವೇಳೆ ಸೈಯದ್ ಸಲ್ಮಾನ್ ಪತ್ನಿಗೆ ಮನೆಯಲ್ಲಿ ಚಿನ್ನಾಭರಣ ಇರುವ ಕಪಾಟು ಲಾಕ್ ಮಾಡಿದ್ದೀಯಾ ಎಂದು ಕೇಳಿದ್ದರು. ಮಾರ್ಗ ಮಧ್ಯೆ ಮೂರು ದಿನಗಳ ಕಾಲ ಮನೆಗೆ…