Headlines

ಫ್ಲಾಪ್ ಚಿತ್ರಕ್ಕೆ ಸೀಕ್ವೆಲ್ ಮಾಡಲು ಕಮಲ್ ಹಾಸನ್ ಉತ್ಸಾಹ; ಹಿಂದೆ ಸರಿದ ನಿರ್ಮಾಣ ಸಂಸ್ಥೆ

ಯಾವುದೇ ಸಿನಿಮಾ ಫ್ಲಾಪ್ ಆದರೆ, ಅದಕ್ಕೆ ಸೀಕ್ವೆಲ್ ಮಾಡಲು ಯಾವ ನಿರ್ಮಾಪಕರೂ ಮುಂದಕ್ಕೆ ಬರೋದಿಲ್ಲ. ಮೊದಲ ಚಿತ್ರದಿಂದ ಆದ ನಷ್ಟವನ್ನೇ ನಿರ್ಮಾಪಕರು ಚೇತರಿಸಿಕೊಳ್ಳಲು ಸಾಧ್ಯವಾಗದೆ ಒದ್ದಾಡುವಾಗ ಮತ್ತೆ ಅದಕ್ಕೆ ಸೀಕ್ವೆಲ್ ಮಾಡುವ ಸಾಹಸ ಮಾಡಿದರೆ ಹೇಗೆ? ಈಗ ಇದೇ ಸಾಹಸವನ್ನು ಕಮಲ್ ಹಾಸನ್ (ಕಮಲ್ ಹಾಸನ್) ಹಾಗೂ ನಿರ್ದೇಶಕ ಶಂಕರ್ ಮಾಡಲು ಮುಂದಾಗಿದ್ದರು. ಆದರೆ, ಇದಕ್ಕೆ ನಿರ್ಮಾಣ ಸಂಸ್ಥೆ ಆಸಕ್ತಿ ತೋರಿಸುತ್ತಿಲ್ಲ ಎಂದು ವರದಿ ಆಗಿದೆ. ‘ಇಂಡಿಯನ್’ ಸಿನಿಮಾ 1996ರಲ್ಲಿ ರಿಲೀಸ್ ಆಯಿತು. 30 ವರ್ಷಗಳ ಹಿಂದೆ…

Read More

ಗೌತಮ್ ನಿರ್ಧಾರಕ್ಕೆ ನಲುಗಿಹೋದ ಜಯದೇವ್; ಶುರುವಾಗಿದೆ ಚಿಂತೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ದೀವಾನ್ ಈಗ ಎಲ್ಲರಲ್ಲೂ ನಡುಕ ಹುಟ್ಟಿಸಲು ಆರಂಭಿಸಿದ್ದಾನೆ. ಇಷ್ಟು ದಿನ ಸಾಮಾನ್ಯ ಕ್ಯಾಬ್ ಡ್ರೈವರ್ ಆಗಿದ್ದ ಆತ ಈಗ ಉದ್ಯಮ ಮಾಡೋಕೆ ಆರಂಭಿಸಿದ್ದಾನೆ. ಈ ವಿಷಯ ವೀಕ್ಷಕರಿಗೆ ಖುಷಿ ಕೊಟ್ಟಿದೆ. ಆದರೆ, ಕುಟುಂಬದವರೇ ಆದ ಜಯದೇವ್ಗೆ ಭಯ ಶುರುವಾಗಿದೆ. ದೀವಾನ್ ಕುಟುಂಬದ ಮತ್ತೊಂದು ಬ್ರ್ಯಾಂಚ್ ರೀತಿಯಲ್ಲಿ ಈ ಕಂಪನಿ ಮೂಡಿ ಬರುತ್ತಿದೆ. ‘ಅಮೃತಧಾರೆ’ ಧಾರಾವಾಹಿ ಮತ್ತಷ್ಟು ರೋಚಕತೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮೋಸ ಮಾಡಿ ಗೌತಮ್ ದೀವಾನ್ನ ಹೊರಕ್ಕೆ ಹಾಕಲಾಯಿತು. ಹೊರಕ್ಕೆ ಕಳಿಸುವಾಗ…

Read More

ಟಿ20 ವಿಶ್ವಕಪ್ ಗೆಲುವನ್ನು ಇಬ್ಬರಿಗೆ ಅರ್ಪಿಸಿದ ಗೌತಮ್ ಗಂಭೀರ್

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಟೀಮ್ ಇಂಡಿಯಾ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದು ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ. ಅದು ಸಹ ಬರೋಬ್ಬರಿ 96 ರನ್​ಗಳ ಅಂತರದಿಂದ. ಅಹಮದಾಬಾದ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 159…

Read More

ರೋಗಿಗಳ ರಕ್ಷಣೆಗೆ ಇರುವ ಆ್ಯಂಬುಲೆನ್ಸ್​ನಲ್ಲಿ ಜನರ ಸಾಗಾಟ! ಕುರಿಗಳಂತೆ ಜನ ತುಂಬಿ ಕರೆದೊಯ್ಯುತ್ತಿರುವ ವಿಡಿಯೋ ವೈರಲ್

ಗದಗ, ಮಾರ್ಚ್ 9: ರೋಗಿಗಳ ತುರ್ತು ಚಿಕಿತ್ಸೆಗೆ ಬಳಸಬೇಕಾದ ಆ್ಯಂಬುಲೆನ್ಸ್ ವಾಹನವನ್ನು ಜನರ ಸಾಗಾಟಕ್ಕೆ ಬಳಸಲಾಗಿದೆ ಎಂಬ ಆರೋಪ ಗದಗದಲ್ಲಿ ಕೇಳಿಬಂದಿದೆ. ಗದಗದ ಜಿಮ್ಸ್ (GIMS) ಆಸ್ಪತ್ರೆಯ ಆ್ಯಂಬುಲೆನ್ಸ್‌ನಲ್ಲಿ ಜನರನ್ನು ಕುರಿಗಳಂತೆ ತುಂಬಿಕೊಂಡು ಸಾಗಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆ್ಯಂಬುಲೆನ್ಸ್ ಬಂದು ನಿಲ್ಲುತ್ತಿದ್ದಂತೆ ಹಲವರು ಅದಕ್ಕೆ ಮುಗಿಬಿದ್ದು ಹತ್ತುವ ದೃಶ್ಯಗಳು ಕಂಡುಬಂದಿವೆ. ರೋಗಿಗಳ ರಕ್ಷಣೆಗೆ ಇರಬೇಕಾದ ಆ್ಯಂಬುಲೆನ್ಸ್‌ನಲ್ಲಿ ಸಾಮಾನ್ಯ ಜನರನ್ನು ಸಾಗಾಟ ಮಾಡುತ್ತಿರುವುದು…

Read More

ಫೈನಲ್ ಮ್ಯಾಚ್​ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ..!

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 159 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96…

Read More

ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ ಮಹಿಳೆ

ಗೋಪಾಲ್​ಗಂಜ್, ಮಾರ್ಚ್ 9: ಮಹಿಳೆಯೊಬ್ಬರು ತನ್ನ ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಯಕರನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮೊಬೈಲ್ ಟವರ್ ಹತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಬಂಧಿತ ಪ್ರಿಯಕರನನ್ನು ಸ್ಥಳಕ್ಕೆ ಕರೆತಂದ ನಂತರ ಮಹಿಳೆ ಕೊನೆಗೂ ಕೆಳಗಿಳಿದಿದ್ದಾಳೆ. ಗೋಪಾಲ್‌ಗಂಜ್ ಜಿಲ್ಲೆಯ ಬಂಕಟ ಜಾಗಿರ್ದಾರಿ ಗ್ರಾಮದಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆ ಮತ್ತು ಆಕೆಯ ಪ್ರಿಯಕರ ಪವನ್…

Read More

ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್! ಪೊಲೀಸರ 7 ವಿಶೇಷ ತಂಡಗಳಿಂದ ಆರೋಪಿಗಳಿಗೆ ಬಲೆ

ಆನೇಕಲ್, ಮಾರ್ಚ್​ 09: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಕಿಡ್ನ್ಯಾಪ್ (Kidnap) ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಅಲಿಯಾಸ್ ಗೋಪಿ ಎಂಬ ರಿಯಲ್ ಎಸ್ಟೇಟ್ ಏಜೆಂಟ್ ಅವರನ್ನು ಮಾರ್ಚ್ 8ರಂದು ಸಂಜೆ 7.30ರ ಸುಮಾರಿಗೆ ಕಿಡ್ನ್ಯಾಪ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಗೋಪಾಲ್ ಕಾರಿಗೆ ಡಿಕ್ಕಿ ಹೊಡೆದ ಕಿಡಿಗೇಡಿಗಳು ಗೋಪಾಲ್ ರಿಯಲ್…

Read More

ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು

ಬೆಂಗಳೂರು, ಮಾರ್ಚ್ 9: ಮಧ್ಯಪ್ರಾಚ್ಯದಲ್ಲಿ ದಿನೇ ದಿನೇ ಇಸ್ರೇಲ್-ಇರಾನ್ ಯುದ್ಧದ (Israel Iran War) ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಹಂತಹಂತವಾಗಿ ತಾಯ್ನಾಡಿಗೆ ಮರಳುತ್ತಿದ್ದಾರೆ. ಮಾರ್ಚ್ 8 ರ ಭಾನುವಾರ ರಾತ್ರಿ ದುಬೈನಿಂದ ಹೊರಟ ಎಮಿರೇಟ್ಸ್ ವಿಮಾನದಲ್ಲಿ 288 ಮಂದಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದರು. ಯುದ್ಧದ ಆತಂಕದಿಂದಾಗಿ ಹಲವು ದಿನಗಳಿಂದ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಇದೀಗ ವಿಮಾನ ಸೇವೆಗಳು ತಾತ್ಕಾಲಿಕ ಪುನರಾರಂಭವಾದ ಬೆನ್ನಲ್ಲೇ ತಾಯ್ನಾಡಿಗೆ ಮರಳುತ್ತಿದ್ದಾರೆ. ಈಗಾಗಲೇ…

Read More

ಎಂಥಾ ಅದ್ಭುತ: ಹುಡುಗ ಮಾತ್ರ ಅಲ್ಲ ಇಡೀ ಫ್ಯಾಮಿಲಿಯೇ ಬಂದು ಹುಡುಗಿಗೆ ಪ್ರಪೋಸ್ ಮಾಡಿರುವ ವಿಡಿಯೋ ಇಲ್ಲಿದೆ

ಸಾಮಾನ್ಯವಾಗಿ ಹೋಟೆಲ್​ಗೋ ಅಥವಾ ಯಾವುದೋ ಒಳ್ಳೆಯ ಸ್ಥಳಕ್ಕೆ ಹೋಗಿ ಹುಡುಗರು ಹುಡುಗಿಯರಿಗೆ ಪ್ರೇಮ ನಿವೇದನೆ ಮಾಡುತ್ತಾರೆ. ಆದರೆ ಹುಡುಗ ಮಾತ್ರವಲ್ಲ ಇಡೀ ಕುಟುಂಬವೇ ಆಕೆಗೆ ಪ್ರಪೋಸ್ ಮಾಡಲು ಅವರ ಮನೆ ಕೆಳಗೆ ನಿಂತು ಬಾಲ್ಕನಿಯಲ್ಲಿ ನಿಂತಿರುವ ಯುವತಿಗೆ ಪ್ರಪೋಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆ ವ್ಯಕ್ತಿ ತನ್ನ ಗೆಳತಿಯ ಮನೆಯ ಹೊರಗೆ ತನ್ನ ಸ್ನೇಹಿತರು, ಸಂಬಂಧಿಕರು ಮತ್ತು ಕುಟುಂಬ ಸದಸ್ಯರನ್ನು ಒಟ್ಟುಗೂಡಿಸಿದ್ದರು. ಎಲ್ಲರೂ ಒಟ್ಟಿಗೆ ಕಾಯುತ್ತಿದ್ದರು. ಜನರು ನೃತ್ಯ ಮಾಡುತ್ತಾ, ಹಾಡುತ್ತಾ, ಯುವತಿಗೆ ಬಾಲ್ಕನಿಯಲ್ಲಿ ನೋಡುವಂತೆ…

Read More

ತ್ರಿಷಾಗೆ ನಡೆದಿತ್ತು ನಿಶ್ಚಿತಾರ್ಥ; ಹುಡುಗ ಯಾರು? ಬೇಡ ಎಂದಿದ್ದು ಏಕೆ?

ನಟಿ ತ್ರಿಷಾ (Trisha) ಅವರು ಈಗ ಸುದ್ದಿಯಲ್ಲಿ ಇದ್ದಾರೆ. ಅವರು ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಜೊತೆ ಸುತ್ತಾಡುತ್ತಾ ಇದ್ದಾರೆ. ಈ ಕಾರಣಕ್ಕೆ ವಿಜಯ್ ಹಾಗೂ ಅವರ ಮಧ್ಯೆ ಸಂಬಂಧ ಕಲ್ಪಿಸಲಾಗುತ್ತಿದೆ. ಹೀಗಿರುವಾಗಲೇ ವಿಜಯ್ ಪತ್ನಿ ಸಂಗೀತಾ ಅವರು ‘ವಿಜಯ್ಗೆ ನಟಿಯ ಜೊತೆ ಸಂಬಂಧ ಇದೆ’ ಎಂದು ಆರೋಪಿಸಿದ್ದಾರೆ. ತ್ರಿಷಾ ಅವರಿಗೆ ಈಗ 42 ವರ್ಷ. ತ್ರಿಷಾ ಇನ್ನೂ ವಿವಾಹ ಆಗಿಲ್ಲ. ಹಾಗಂತ ಅವರು ಈ ಬಗ್ಗೆ ಆಲೋಚನೆ ಮಾಡಿಯೇ ಇಲ್ಲ ಎಂದು ಹೇಳೋಕೆ ಆಗುವುದಿಲ್ಲ….

Read More