ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ
ಬೆಂಗಳೂರು, ಮಾರ್ಚ್ 08: ಜಯಮಹಲ್ ಬಳಿ ಹಿಟ್ ಆ್ಯಂಡ್ ರನ್ ಪ್ರಕರಣವೊಂದು ನಡೆದಿದೆ. ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಸುಮಾರು ನಾಲ್ಕರಿಂದ ಐದು ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಬೈಕ್‌ನಲ್ಲಿ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ಕೂಡಲೇ ಇನ್ನೋವಾ ಚಾಲಕ ಮತ್ತು ಕಾರಿನಲ್ಲಿದ್ದ…