ಡಾರ್ಜಿಲಿಂಗ್ನಲ್ಲಿ ರಾಷ್ಟ್ರಪತಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ, ವರದಿ ಕೇಳಿದ ಗೃಹ ಕಾರ್ಯದರ್ಶಿ
ಕೋಲ್ಕತ್ತಾ, ಮಾರ್ಚ್ 08: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi murmu) ಅವರನ್ನು ಸ್ವಾಗತಿಸುವ ಶಿಷ್ಟಾಚಾರದಲ್ಲಿನ ಲೋಪಗಳು, ಡಾರ್ಜಿಲಿಂಗ್ನಲ್ಲಿ ನಡೆದ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳ ಕುರಿತು ಇಂದು(ಮಾರ್ಚ್8) ಸಂಜೆ 5 ಗಂಟೆಯ ಒಳಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಅವರು ಭಾಗವಹಿಸಬೇಕಿದ್ದ ಕಾರ್ಯಕ್ರಮದ ಸ್ಥಳವನ್ನು ಬದಲಾಯಿಸಿದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ತೀವ್ರ ಅಸಮಾಧಾನ…