ಗ್ರಾಹಕರಿಗೆ ಶಾಕ್ ಮೇಲೆ ಶಾಕ್: ಬೆಂಗಳೂರು ಹೋಟೆಲ್ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು, ಮಾರ್ಚ್ 7: ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಗೃಹ ಬಳಕೆಯ ಸಿಲಿಂಡರ್ ದರ 60 ರೂಪಾಯಿ ಹೆಚ್ಚಳವಾಗಿದ್ದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ದರ 115 ರೂಪಾಯಿ ಏರಿಕೆಯಾಗಿದೆ. ಅಲ್ಲದೆ, ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಬೆಲೆ ಸತತ ಮೂರು ತಿಂಗಳಿನಿಂದ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್…