Headlines

Tomato price down: ಟೊಮ್ಯೊಟೋ ಮಾರ್ಕೆಟ್​ನಲ್ಲಿ ಬೆಲೆ ತೀವ್ರ ಕುಸಿತ! ರೈತರು ಕಂಗಾಲು

ಚಿಕ್ಕಬಳ್ಳಾಪುರ, ಮಾರ್ಚ್​ 07: ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ…

Read More

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್!

ಬೆಂಗಳೂರು, ಮಾರ್ಚ್​ 07: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ (Illegal Immigrants) ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ. ಒಂದೇ…

Read More

ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್​ ಮಾಲೀಕರಲ್ಲಿ ಆತಂಕ, ಗ್ರಾಹಕರಿಗೆ ತಿಂಡಿಗಳ ಬೆಲೆ ಏರಿಕೆ ಟೆನ್ಶನ್

ಮೈಸೂರು, ಮಾರ್ಚ್ 7: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪ್ರತಿಕೂಲ ಪರಿಣಾಮ ಭಾರತದ ಮೇಲೆ ಬೀರಲು ಪ್ರಾರಂಭವಾಗಿದೆ. ಎಲ್​ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ವಿಶೇಷವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆ 115 ರೂಪಾಯಿ ಹೆಚ್ಚಳವಾಗಿದೆ. ಈ ಬೆಲೆ ಏರಿಕೆ ಮತ್ತು ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯ ಮೈಸೂರಿನ ಹೋಟೆಲ್ ಉದ್ಯಮಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆ ದಿಢೀರ್ ಹೆಚ್ಚಳವಾಗಿದ್ದು, ಜೊತೆಗೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಸಹ ಆಗುತ್ತಿಲ್ಲ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ….

Read More

ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ: ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್

ಚಾಮರಾಜನಗರ, ಮಾರ್ಚ್ 7: ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಮಾರಿ ಹಬ್ಬದ ವೇಳೆ ವಿಚಿತ್ರ ಹಾಗೂ ಭಯಾನಕ ಆಚರಣೆ ನಡೆದಿರುವುದು ಬೆಳಕಿಗೆ ಬಂದಿದೆ. ದೇವಿಯ ಜಾತ್ರೆ ಸಂದರ್ಭದಲ್ಲಿ ಗ್ರಾಮಸ್ಥರು ಹರಕೆ ತೀರಿಸುವ ಸಲುವಾಗಿ 100ಕ್ಕೂ ಹೆಚ್ಚು ಕುರಿಗಳನ್ನು ಬಲಿ ನೀಡಿದ್ದಾರೆ. ಗ್ರಾಮದಲ್ಲಿರುವ ದೊಡ್ಡಮ್ಮ ತಾಯಿ ದೇವಿಯ ಮಾರಿ ಹಬ್ಬದ ಅಂಗವಾಗಿ ಈ ಆಚರಣೆ ನಡೆಯುತ್ತದೆ ಎಂದು ತಿಳಿದುಬಂದಿದೆ. ಹಬ್ಬದ ಸಂದರ್ಭದಲ್ಲಿ ಹರಕೆ ಹೊತ್ತಿರುವ ಗ್ರಾಮಸ್ಥರು ತಮ್ಮ ಕುರಿಗಳನ್ನು ಬಲಿಯಾಗಿ ಅರ್ಪಿಸುತ್ತಾರೆ. ಕುರಿಗಳ…

Read More

ಜಗನ್ನಾಥನ ದರ್ಶನ ಪಡೆದ ನಾಗ ಚೈತನ್ಯ-ಶೋಭಿತಾ ದಂಪತಿ

ಅಕ್ಕಿನೇನಿ ನಾಗ ಚೈತನ್ಯ (Naga Chaitanya) ಹಾಗೂ ಅವರ ಪತ್ನಿ ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ನಾಗ ಚೈತನ್ಯ ಅವರು ‘ಯೆ ಮಾಯ ಚೇಸಾವೆ’ ಚಿತ್ರದ ಮೂಲಕ ಸೂಪರ್ ಹಿಟ್ ಆದರು. ಇದಾದ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರು ‘ವೃಷಕರ್ಮ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಗ್ಲಿಂಪ್ಸ್ ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಕಾರ್ತಿಕ್ ದಂಡು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಚೈತನ್ಯಗೆ ನಾಯಕಿಯಾಗಿ ಮೀನಾಕ್ಷಿ ಚೌಧರಿ ನಟಿಸುತ್ತಿದ್ದಾರೆ. ಈ ಸಿನಿಮಾದ…

Read More

ಟಿವಿ9 ಎಕ್ಸ್​​ಪೋದಲ್ಲಿ ‘ಹಯಗ್ರೀವ’ ಯಶಸ್ಸಿನ ಬಗ್ಗೆ ಮಾತನಾಡಿದ ಧನ್ವೀರ್​-ಸಂಜನಾ

ಟಿವಿ9 ಎಕ್ಸ್​​ಪೋ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿದೆ. ಮಾರ್ಚ್ 6, 7, 8 ಮೂರು ದಿನ ಇದು ಇರಲಿದೆ. ಆಟೋಮೊಬೈಲ್, ಲೈಫ್​ಸ್ಟೈಲ್​, ಫರ್ನಿಚರ್​ಗಳ ಮಾರಾಟ ನಡೆಯಲಿದ್ದು, ಒಂದೇ ಸೂರಿನಡಿ ನೂರಾರು ಮಳಿಗೆಗಳ ಸಂಗಮ ಆಗಿದೆ. ಇದಕ್ಕೆ ನಟ ಧನ್ವೀರ್ ಹಾಗೂ ಸಂಜನಾ ಆಗಮಿಸಿದರು. ಈ ವೇಳೆ ಅವರುಗಳು ಟಿವಿ9 ಎಕ್ಸ್​​ಪೋ ಬಗ್ಗೆ ಹಾಗೂ ಹಯಗ್ರೀವ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ಅವರು ಖುಷಿಯಾಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಒಂದೇ ಚಿತ್ರದಲ್ಲಿ ಶಿವಣ್ಣ, ಶಾರುಖ್, ರಜನಿ ಮೋಹನ್​​ಲಾಲ್

ಶಾರುಖ್ ಖಾನ್ ಕಮಲ್ ಹಾಸನ್ ಅವರ ದೊಡ್ಡ ಅಭಿಮಾನಿ. ಅವರಿಗೆ ರಜನಿಕಾಂತ್ ಬಗ್ಗೆ ಅಷ್ಟೇ ಗೌರವ ಇದೆ. ಕಮಲ್ ಹಾಸನ್ ನಿರ್ದೇಶನದ ‘ಹೇ ರಾಮ್’ ಚಿತ್ರದಲ್ಲಿ ಶಾರುಖ್ ಒಂದು ರೂಪಾಯಿ ಸಂಭಾವನೆ ಪಡೆಯದೆ ನಟಿಸಿದರು. ಅದಾದ ನಂತರ, ಕಿಂಗ್ ಖಾನ್ ನಿರ್ಮಿಸಿ ನಟಿಸಿದ ‘ರಾ ಒನ್’ ಚಿತ್ರದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. ಈಗ ಕಿಂಗ್ ಖಾನ್ ಆ ಸಾಲವನ್ನು ತೀರಿಸಿದ್ದಾರೆ. ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ಮತ್ತು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ‘ಜೈಲರ್’…

Read More

ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ ಹೇಳಿದ್ದೇಕೆ ಅಮೆರಿಕ? ಅಸಲಿ ಕಾರಣ ಬಯಲು

ವಾಷಿಂಗ್ಟನ್, ಮಾರ್ಚ್ 7: ಭಾರತವು (India) ರಷ್ಯಾದ ಕಚ್ಚಾ ತೈಲವನ್ನು (Crude Oil) ಖರೀದಿಸಲು ಅನುಮತಿ ನೀಡಿರುವುದರ ಕಾರಣ ಏನೆಂಬುದನ್ನು ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್ (Chris Wright) ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇರಾನ್‌ನೊಂದಿಗಿನ ಸಂಘರ್ಷದಿಂದಾಗಿ ಜಾಗತಿಕ ಕಚ್ಚಾ ಮಾರುಕಟ್ಟೆಯ ಮೇಲೆ ಒತ್ತಡದ ಸನ್ನಿವೇಶ ಸೃಷ್ಟಿಯಾಗಿದೆ. ತೈಲ ಮಾರುಕಟ್ಟೆಯ ಮೇಲಿನ ಈ ಒತ್ತಡವನ್ನು ಕಡಿಮೆ ಮಾಡುವ ದೃಷ್ಟಿಯಿಂದ ರಷ್ಯಾದ ತೈಲ ಖರೀದಿಸುವಂತೆ ಭಾರತಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಭಾರತವು ರಷ್ಯಾದಿಂದ ಸಂಗ್ರಹಿತ ತೈಲವನ್ನು ಖರೀದಿಸಿ ತನ್ನ…

Read More

ಹೊಸ ಉದ್ಯಮ ಆರಂಭಿಸಿದ ಗೌತಮ್; ಹೊಸ ಅಧ್ಯಾಯಕ್ಕೆ ನಾಂದಿ

‘ಅಮೃತಧಾರೆ’ ಧಾರಾವಾಹಿಯು ಕಳೆದ ಕೆಲವು ಸಮಯದಿಂದ ನಿಧಾನಗತಿಯಲ್ಲಿ ಸಾಗುತ್ತಿತ್ತು ಎಂದರೂ ತಪ್ಪಾಗಲಾರದು. ಆದರೆ, ಈಗ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಮಾಡುವ ಸಮಯ ಬಂದಿದೆ. ಈ ಧಾರಾವಾಹಿಯಲ್ಲಿ ಇಷ್ಟು ದಿನ ಗೌತಮ್ ಉದ್ಯಮ ಮಾಡೋದಾಗಿ ಹೇಳುತ್ತಿದ್ದನು ಮತ್ತು ಅದನ್ನು ಆರಂಭಿಸಿರಲಿಲ್ಲ. ಆದರೆ, ಈಗ ಉದ್ಯಮ ಮಾಡಲು ಆತನು ಸಿದ್ಧನಾಗಿದ್ದಾನೆ. ಎದುರಾಳಿ ಜೊತೆಯೇ ಕೈ ಜೋಡಿಸಿದ್ದಾನೆ. ಕುಟುಂಬದವರೇ ಮಾಡಿದ ಮೋಸದ ಕಾರಣದಿಂದ ಗೌತಮ್ ಸಾಕಷ್ಟು ಬೇಸರ ಮಾಡಿಕೊಂಡಿದ್ದ. ಆತ ಆಸ್ತಿಯನ್ನು ಮಲ ತಮ್ಮನಿಗೆ ಬರೆದುಕೊಟ್ಟಿದ್ದ. ಆದರೂ ಆತನ ದಾಹ ತೀರಿರಲಿಲ್ಲ….

Read More

ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರು ಇದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ ನೋಡಿ

ಸಾಮಾನ್ಯವಾಗಿ ಶ್ರೀ ಕೃಷ್ಣ ಪರಮಾತ್ಮನಿಗೆ 16,000 ಗೋಪಿಕಾ ಸ್ತ್ರೀಯರು ಇದ್ದರು ಎಂಬ ಮಾತು ಕೇಳಿಬರುತ್ತದೆ. ಈ ಬಗ್ಗೆ ಟಿವಿ9 ನಿತ್ಯಭಕ್ತ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕೃಷ್ಣನಿಗೆ 16000 ಪತ್ನಿಯರಿದ್ದರು ಎಂಬ ವಿಚಾರ ನಿಜವೇ ಎಂಬ ಪ್ರಶ್ನೆಗೆ ಧರ್ಮಶಾಸ್ತ್ರಗಳು ಸ್ಪಷ್ಟ ಉತ್ತರ ನೀಡುತ್ತವೆ ಎಂದು ಅವರು ಹೇಳಿದ್ದಾರೆ. ಶ್ರೀಕೃಷ್ಣನು ನರಕಾಸುರನನ್ನು ಸಂಹಾರ ಮಾಡಿದಾಗ, ಆತನ ಸೆರೆಯಲ್ಲಿದ್ದ 16,000 ಸ್ತ್ರೀಯರು ಬಂಧಮುಕ್ತರಾದರು. ಈ ಮಹಿಳೆಯರು ವಿವಿಧ ದೇಶಗಳ ಮೂಲೆಗಳಿಂದ ಸೆರೆಹಿಡಿಯಲ್ಪಟ್ಟವರಾಗಿದ್ದರು. ನರಕಾಸುರನ ಬಂಧನದಿಂದ ಮುಕ್ತರಾದಾಗ,…

Read More