‘ಟಾಕ್ಸಿಕ್’ ಬಿಡುಗಡೆಗೂ ಮುನ್ನ 31.5 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ನಯನತಾರಾ
ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ (Nayanthara) ಮತ್ತು ಅವರ ಪತಿ ವಿಘ್ನೇಶ್ ಶಿವನ್ ಅವರು ತಮಿಳುನಾಡಿನ ಅತ್ಯಂತ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಚೆನ್ನೈನ ಪೋಯಸ್ ಗಾರ್ಡನ್ನಲ್ಲಿ ಬೃಹತ್ ಐಷಾರಾಮಿ ಡ್ಯುಪ್ಲೆಕ್ಸ್ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಇದರ ಒಟ್ಟು ಮೌಲ್ಯ ಬರೋಬ್ಬರಿ 31.5 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಪ್ರಾಪರ್ಟಿ ಅನಾಲಿಟಿಕ್ಸ್ ಪ್ಲಾಟ್‌ಫಾರ್ಮ್ ಜ್ಯಾಪ್‌ಕೀ (Zapkey) ಮೂಲಕ ಲಭ್ಯವಾಗಿರುವ ದಾಖಲೆಗಳ ಪ್ರಕಾರ, ಈ ಮನೆಯು ಚೆನ್ನೈನ ತೇನಾಂಪೇಟೆ ವ್ಯಾಪ್ತಿಯ ‘ಲೆಗಸಿ’ ಎಂಬ ಪ್ರೀಮಿಯಂ ವಸತಿ ಸಂಕೀರ್ಣದಲ್ಲಿದೆ. ಅಪಾರ್ಟ್‌ಮೆಂಟ್ ಕಟ್ಟಡದ…